ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಸರಾಂತ ಹಾಡುಗಾರ - ಸಂಗೀತ ಸಂಯೋಜಕ ಮನೋಜ್ ವಸಿಷ್ಠ ನಿಧನ

Twitter
Facebook
LinkedIn
WhatsApp
singer-composer Manoj Vasishtha passes away

singer -composer Manoj Vasishtha : ಸುಗಮ ಸಂಗೀತ (Music) ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯುವ ಗಾಯಕ (singer), ಸಂಗೀತ ಸಂಯೋಜಕ ಮನೋಜ್ ವಸಿಷ್ಠ (Manoj Vasistha) ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿ ಇಂದು ಇಹಲೋಕ (Passed Away) ತ್ಯಜಿಸಿದ್ದಾರೆ.

ಕನ್ನಡ ಕಿರುತೆರೆಯ ಬಹುತೇಕ ರಿಯಾಲಿಟಿ ಶೋಗಳಲ್ಲಿ ಮನೋಜ್ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಪ್ರವೀಣ್ ಡಿ ರಾವ್ ಅವರ ಅನೇಕ ಧಾರಾವಾಹಿ ಶೀರ್ಷಿಕೆಗಳಿಗೆ ಮನೋಜ್ ವಸಿಷ್ಠ ಕೆಲಸ ಮಾಡಿದ್ದಾರೆ. ಪತ್ನಿ ಅರುಂಧತಿ (Arundhati) ಕೂಡ ಗಾಯಕಿ. ಕನ್ನಡ ಕೋಗಿಲೆ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳಲ್ಲಿ ಅರುಂಧತಿ ಮತ್ತು ಮನೋಜ್ ಒಟ್ಟಿಗೆ  ವೇದಿಕೆಯ ಮೇಲೆ ಕಾಣಿಸಿಕೊಂಡಿದ್ದಾರೆ.

ರಿಯಾಲಿಟಿ ಶೋಗಳು ಮಾತ್ರವಲ್ಲ, ಸಾಕಷ್ಟು ಸಂಗೀತ ಕಾರ್ಯಕ್ರಮಗಳನ್ನೂ ಈ ಜೋಡಿ ನೀಡಿದೆ. ಅಗಲಿದ ಮನೋಜ್ ಅವರಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ಮಧ್ಯಾಹ್ನದ ನಂತರ ಮನೋಜ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜಯನಗರ ಹೌಸಿಂಗ್ ಸೊಸೈಟಿ ಬಳಿಯ ಬೇ ಅಪಾರ್ಟ್ಮೆಂಟ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪ್ರಜ್ವಲ್ ದೇವರಾಜ್ ಹೊಸ ಚಿತ್ರಕ್ಕೆ ಚಾಲನೆ :

ಪ್ರಜ್ವಲ್ ದೇವರಾಜ್ (Prajwal Devaraj) ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ‘ಚೀತಾ’ ಸಿನಿಮಾದ ಮುಹೂರ್ತ ಸಮಾರಂಭ ಇಂದು (ನವೆಂಬರ್ 1) ಅದ್ಧೂರಿಯಾಗಿ ನೆರವೇರಿತು. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ‘ಚೀತಾ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ನೃತ್ಯ ನಿರ್ದೇಶಕರಾಗಿ ಹಲವು ವರ್ಷಗಳಿಂದ ಕೆಲಸ ಮಾಡಿರುವ ರಾಜ ಕಲೈಕುಮಾರ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘ಚೀತಾ’ ಸಿನಿಮಾದ ಮುಹೂರ್ತ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್ ಎಂ ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿತು. ನಾಯಕ ನಟ ಪ್ರಜ್ವಲ್ ದೇವರಾಜ್ ಕನ್ನಡ ಭಾವುಟ ಹಾರಿಸುವುದರ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿದರು.

ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಸಿನಿಮಾಗಳ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಪ್ರಜ್ವಲ್ ದೇವರಾಜ್​ ಅವರಿಗೆ ಇದು 39ನೇ ಸಿನಿಮಾ. ಒಂದು ಮಾರ್ಕೆಟ್ ನಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಮಾರ್ಕೆಟ್ ನಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲರೂ ಬಹಳ ವೇಗದವರು. ನಮ್ಮ ಸಿನಿಮಾದ ನಾಯಕ ಸಹ ಚಿರತೆ ರೀತಿ ಬಹಳ ವೇಗದವನು. ಹಾಗಾಗಿ ಸಿನಿಮಾಕ್ಕೆ “ಚೀತಾ” ಎಂದು ಹೆಸರಿಟ್ಟಿದ್ದೇವೆ. ಕಲಾ ನಿರ್ದೇಶಕ ಶಿವು ಅವರು ಅದ್ದೂರಿಯಾಗಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಇಡೀ ಸಿನಿಮಾದ ಚಿತ್ರೀಕರಣ ಬಹುತೇಕ ಆ ಮಾರ್ಕೆಟ್​ನಲ್ಲಿಯೇ ನಡೆಯಲಿದೆ. ಶೃತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ಗೋವಿಂದೇ ಗೌಡ, ಅಭಯ್ ಪುನೀತ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನವೆಂಬರ್ 6 ರಿಂದ ಶೂಟಿಂಗ್ ಆರಂಭವಾಗಲಿದೆ ಎಂದರು.

ತೆಲುಗಿನ ಜನಪ್ರಿಯ ಹಾಸ್ಯ ನಟ, ಪೋಷಕ ನಟ ಸುನಿಲ್ ಈ ಸಿನಿಮಾ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಹಾಸ್ಯ ನಟನಾಗಿ ವೃತ್ತಿ ಆರಂಭಿಸಿ ಈಗ ಖಡಕ್ ವಿಲನ್ ಪಾತ್ರಗಳಲ್ಲಿ ಸಹ ಸುನಿಲ್ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿನ ಅವರ ಪಾತ್ರ ಬಹುವಾಗಿ ಗಮನ ಸೆಳೆದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist