ತರಕಾರಿ ವ್ಯಾಪಾರಿ ಜತೆ ಕುಳಿತು ಊಟ ಮಾಡಿದ ರಾಹುಲ್ ಗಾಂಧಿ; ಫೋಟೋ ವೈರಲ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ತಮ್ಮ ನಿವಾಸದಲ್ಲಿ ತರಕಾರಿ ವ್ಯಪಾರಿಯೊಬ್ಬರಿಗೆ ಆತಿಥ್ಯ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಲೆ ಏರಿಕೆಯಿಂದ ತಮ್ಮ ಶೋಚನೀಯ ಪರಿಸ್ಥಿತಿಯ ಬಗ್ಗೆ ಮಾತನಾಡಿದ ತರಕಾರಿ ವ್ಯಾಪಾರಿ ರಾಮೇಶ್ವರ್ ಅವರ ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಊಟ ಮಾಡಿದರು. ಈ ಬಗ್ಗೆ ಸ್ವತಃ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಅವರು ಊಟ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗಷ್ಟೇ ತರಕಾರಿ ಮಾರುಕಟ್ಟೆಯಲ್ಲಿ ರಾಮೇಶ್ವರ ಎಂಬ ರೈತ ಖಾಲಿ ಬಂಡಿಯೊಂದಿಗೆ ಕಾಣಿಸಿಕೊಂಡಿದ್ದ. ಇದಕ್ಕೆ ಕಾರಣವೇನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಟೊಮ್ಯಾಟೋ ಬೆಲೆ ಹೆಚ್ಚಿರುವುದರಿಂದ ಖರೀದಿಸಲು ಸಾಧ್ಯವಾಗುತ್ತಿಲ್ಲ. ನೀವು ಬೇರೆ ಯಾವುದೇ ತರಕಾರಿಗಳನ್ನು ಖರೀದಿಸುತ್ತೀರಾ? ಎಂದು ಕೇಳಿದರೆ ನನ್ನ ಬಳಿ ಹಣವಿಲ್ಲ ಎಂದು ಅಳಲು ತೋಡಿಕೊಂಡರು. ವಿಡಿಯೋ ವೈರಲ್ ಆಗಿತ್ತು.
ಈ ವಿಡಿಯೋ ನೋಡಿದ ರಾಹುಲ್ ಜೊತೆಗೆ ಕಾಂಗ್ರೆಸ್ ನಾಯಕರು ಬೆಲೆ ಏರಿಕೆ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಗೂ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಬಯಸುವುದಾಗಿ ರಾಮೇಶ್ವರ್ ಆ ವಿಡಿಯೋದಲ್ಲಿ ಹೇಳಿದ್ದಾರೆ. ಅವರ ಆಸೆ ಈಡೇರಿಸಲು ರಾಹುಲ್ ಗಾಂಧಿ ರಾಮೇಶ್ವರ್ ಅವರನ್ನು ಆಹ್ವಾನಿಸಿ ಅವರೊಂದಿಗೆ ಊಟ ಮಾಡಿದರು. ಅವರ ಕಷ್ಟಗಳನ್ನು ವಿಚಾರಿಸಿದರು.
ಸ್ವತಃ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ‘ರಾಹುಲ್ ಗಾಂಧಿ ಜನರ ನಿಜವಾದ ನಾಯಕ’ ಎಂದು ಕಮೆಂಟ್ ಮಾಡಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ
ಬೆಂಗಳೂರು : ಆಗಸ್ಟ್ ತಿಂಗಳಾಂತ್ಯಕ್ಕೆ ನಡೆಯಲಿರುವ ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಉದ್ಘಾಟನಾ ಕಾರ್ಯಕ್ರಮಕ್ಕೆ ವಯನಾಡು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪ್ರಕಾರ, ಆಗಸ್ಟ್ 29 ಅಥವಾ 30 ರಂದು ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ನೋಂದಣಿ ಆರಂಭಿಸಲಾಗಿದ್ದು, ಸುಮಾರು 1.2 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಮೈಸೂರಿನಲ್ಲಿ ಶೀಘ್ರದಲ್ಲೇ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ ಒಂದು. ಈ ಯೋಜನೆಯು ರಾಜ್ಯದ ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ. ನಗದು ನೀಡಲಾಗುತ್ತದೆ. ಸುಮಾರು 1.5 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಯಿತು.