ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ ; ಹೇಗಿದೆ ಈಗಿನ ದರ..!

Twitter
Facebook
LinkedIn
WhatsApp
ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ ; ಹೇಗಿದೆ ಈಗಿನ ದರ..!

ಅತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ (Garlic Kabab)​ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ  ಗಗನಕ್ಕೆ ಏರಿದೆ. ಇದರಿಂದ ಬೆಳ್ಳುಳ್ಳಿಯಿಂದ ತಯಾರಿಸುವ ಪದಾರ್ಥಗಳ ಬೆಲೆಯೂ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಳ್ಳುಳ್ಳಿ ಕಬಾಬ್​ ತಿನ್ನಬೇಕೆಂಬ ಆಸೆ ಇಟ್ಟುಕೊಂಡವರಿಗೆ ಬೆಲೆಯ ಬಿಸಿ ತಟ್ಟಲಿದೆ. ರಾಜ್ಯಾದ್ಯಂತ ಬೆಳ್ಳುಳ್ಳಿ ಪೂರೈಕೆಯಲ್ಲಿ ಕುಸಿತ ಕಂಡಿದೆ. ಹೀಗಾಗಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಯಾರ್ಡ್‌ನಲ್ಲಿ ಬೆಳ್ಳುಳ್ಳಿಯ ಪೂರೈಕೆ ಶೇ.50 ರಷ್ಟು ಕುಸಿದಿದೆ. ಇದರಿಂದ ಕೆಜಿ ಬೆಳ್ಳುಳ್ಳಿಗೆ 350 ರೂ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂ.ಗೆ ತಲುಪಿದೆ.

ಬೆಂಗಳೂರು ಸಗಟು ಬೆಳ್ಳುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ದೀಪಕ್ ಜೆ ಷಾ ಮಾತನಾಡಿ, ಬೆಂಗಳೂರಿಗೆ ಸಾಮಾನ್ಯವಾಗಿ ದಿನಕ್ಕೆ 40 ಕೆಜಿ ತೂಕವಿರುವ 3,000 ಬೆಳ್ಳುಳ್ಳಿ ಚೀಲ ಬರುತ್ತಿದ್ದವು. ಆದರೆ ಕಳೆದ ಕೆಲವು ದಿನಗಳಿಂದ ಪೂರೈಕೆಯು ಶೇಕಡಾ 50 ರಷ್ಟು ಕಡಿಮೆಯಾಗಿದೆ. ಹೀಗಾಗಿ ದರ ಏರಿಕೆಯಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಬರಗಾಲ ಆವರಿಸಿದ್ದರಿಂದ ಪೂರೈಕೆಗೆ ತೊಂದರೆಯಾಗಿದೆ ಎಂದು ಹೇಳಿದರು.

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳುಳ್ಳಿ ಬೆಳೆಯಲಾಗುತ್ತಿದ್ದು, ಇಡೀ ಕರ್ನಾಟಕಕ್ಕೆ ಪೂರೈಸಲು ಇದು ಸಾಕಾಗುತ್ತಿಲ್ಲ. ರಾಜ್ಯವು ಸಾಮಾನ್ಯವಾಗಿ ಮಧ್ಯಪ್ರದೇಶ, ಗುಜರಾತ್ ಮತ್ತು ರಾಜಸ್ಥಾನದಂತಹ ರಾಜ್ಯಗಳಿಂದ ಬೆಳ್ಳುಳ್ಳಿಯನ್ನು ಆಮದು ಮಾಡಿಕೊಳ್ಳುತ್ತದೆ. ಆದರೆ ಈಗ, ನಾವು ಮಧ್ಯಪ್ರದೇಶದಿಂದ ಮಾತ್ರ ಆಮದು ಮಾಡಿಕೊಳ್ಳುತ್ತಿದ್ದೇವೆ. ಆದರೆ ತಿಂಗಳ ಅಂತ್ಯದ ವೇಳೆಗೆ, ಗುಜರಾತ್ ಮತ್ತು ರಾಜಸ್ಥಾನದಿಂದಲೂ ಪೂರೈಕೆ ಪುನರಾರಂಭವಾಗುತ್ತದೆ ಮತ್ತು ದರ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು

ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬೆಳ್ಳುಳ್ಳಿ ಬಳಸದೆ ಆಹಾರ ಪದಾರ್ಥ ತಯಾರಿಸಲು ಮೈಸೂರು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ಬೆಳ್ಳುಳ್ಳಿ ಬೆಲೆ ದಿನೆ ದಿನೇ ಹೆಚ್ಚಾಗುತ್ತಿದೆ. ಆದ್ದರಿಂದ ಬೆಳ್ಳುಳ್ಳಿ ಬಳಸದೆ ಆಹಾರ ಪದಾರ್ಥಗಳನ್ನು ಮಾಡಲು ಎಲ್ಲ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ತಿಳಿಸಲಾಗಿದೆ. ಬೆಳ್ಳುಳ್ಳಿ ಬಳಸದ ಕರಿಗಳಿಗೆ ಶೇ10% ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ನಿತ್ಯ ಒಂದಲ್ಲ ಒಂದು ಪದಾರ್ಥದ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಹೋಟೆಲ್ ನಡೆಸುವುದು ಕಷ್ಟವಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣ ಗೌಡ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ