ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ..!
ಉಡುಪಿ: ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ಕೌಟಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಅಂತರಾಜ್ಯ ಸ್ಪಿರಿಟ್ ಮಾರಾಟ ದಂಧೆ – ಅಬಕಾರಿ ಪೊಲೀಸರಿಂದ ದಾಳಿ
ಮಂಗಳೂರು : ಅಂತರಾಜ್ಯ ಸ್ಪಿರಿಟ್ ಮಾರಾಟ ದಂಧೆ ನಡೆಯುತ್ತಿದ್ದ ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರಿಂದ ದಾಳಿ ನಡೆಸಿದ್ದಾರೆ.
ಆರೋಪಿ ನಿತ್ಯಾನಂದ ಭಂಡಾರಿ ಪರಾರಿ ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ದಂಧೆ 2240 ಲೀಟರ್ ಮದ್ಯ ಸಾರ , 222 ಲೀಟರ್ ನಕಲಿ ಬ್ರಾಂಡಿ ಸಹಿತ ಯಂತ್ರಗಳು ವಶಕ್ಕೆ ಪಡೆಯಲಾಯಿತು.
ಕೇರಳ ರಾಜ್ಯಕ್ಕೆ ಸಾಗಾಟ ನಡೆಸಲು ನಡೆಯುತ್ತಿದ್ದ ದಂಧೆ ಮೇಲೆ ಅಬಕಾರಿ ನಿರೀಕ್ಷಕರು ಮಂಗಳೂರು ದಕ್ಷಿಣ ವಲಯದ ಕಮಲಾ ಹೆಚ್.ಎನ್, ಉಪಾಧೀಕ್ಷಕರುಗಳಾದ ಸೈಯ್ಯದ್ ತಫ್ಜೀಲುಲ್ಲಾ ಇವರ ಮಾರ್ಗದಶನದಲ್ಲಿ , ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗ ನಾಗರಾಜಪ್ಪ ಟಿ. ಹಾಗೂ ಡೆಪ್ಯುಟಿ ಕಮೀಷನರ್ ಎಕ್ಸೈಸ್ ಟಿ.ಎಂ ಶ್ರೀನಿವಾಸ್ ನಿರ್ದೇಶನದಲ್ಲಿ ನಡೆದ ದಾಳಿ ನಡೆಸಲಾಯಿತು. ಕಾರ್ಯಚರಣೆಯಲ್ಲಿ ಸುಮಾರು 25 ಕ್ಕೂ ಅಧಿಕ ಅಬಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ.