ಕೆಲವರು ಕೋಮು ಸೌಹಾರ್ದತೆ ಹಾಳು ಮಾಡಿದ್ದಾರೆ. ಅದನ್ನು ಸರಿ ಮಾಡುವುದು ನನ್ನ ಮುಖ್ಯ ಉದ್ದೇಶಗಳಲ್ಲಿ ಒಂದು: ಪದ್ಮರಾಜ್
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೆಲವರು ಹಿಂದುತ್ವದ ಹೆಸರಿನಲ್ಲಿ ಜಿಲ್ಲೆಯ ಕೋಮು ಸೌಹಾರ್ದ ಮನೋಭಾವನೆಯನ್ನು ಹಾಳು ಮಾಡಿದ್ದಾರೆ. ಅದನ್ನು ಸರಿ ಮಾಡೋದು ನನ್ನ ಮುಖ್ಯ ಉದ್ದೇಶಗಳಲ್ಲಿ ಒಂದು ಎಂದು ಮಂಗಳೂರು ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನುಡಿದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೋಮು ಸೌಹಾರ್ದತೆಯನ್ನು ನಾವು ಕಾಪಾಡಬೇಕು. ಎಲ್ಲ ಜನಾಂಗದವರಿಗೆ ರಕ್ಷಣೆ ಹಾಗೂ ಆದ್ಯತೆಯನ್ನು ನೀಡಬೇಕು. ಕೆಲವರು ಹಿಂದುತ್ವದ ವಿಷಯದಲ್ಲಿ ಸೌಹಾರ್ದತೆಯನ್ನು ಹಾಳು ಮಾಡಿದ್ದಾರೆ. ಅದನ್ನು ನಾನು ಸರಿ ಮಾಡುತ್ತೇನೆ ಎಂದು ಪದ್ಮರಾಜ್ ನುಡಿದಿದ್ದಾರೆ.
ಚಾಮರಾಜನಗರ ಕ್ಷೇತ್ರದ ಕಾಂಗ್ರಸ್ ಟಿಕೆಟ್ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗೆ ಮುಂದುವರೆದಿದೆ. ಹಾಗಾದರೆ ಯಾರೆಲ್ಲ ರೇಸ್‌ನಲ್ಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕಾದ ಅನಿವಾರ್ಯತೆ ಇದ್ದು, ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಸಚಿವ ಮಹಾದೇವಪ್ಪ ಅವರನ್ನು ಲೋಕ ಅಖಾಡಕ್ಕೆ ಇಳಿಸಬೇಕು ಎನ್ನುವುದು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ಒಲವಾಗಿದ್ದರೇ, ತನ್ನ ಬದಲು ಮಗ ಸುನೀಲ್ ಬೋಸ್‌ಗೆ ಟಿಕೆಟ್ ಕೊಡುವಂತೆ ಮಹದೇವಪ್ಪ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ, ಕ್ಷೇತ್ರ ಇನ್ನೂ ಕಗ್ಗಂಟಾಗೇ ಉಳಿದಿದೆ.
ತನ್ನ ಬದಲು ಮಗ ಸುನೀಲ್ ಬೋಸ್‌ಗೆ ಟಿಕೆಟ್ ಕೊಡುವಂತೆ ಸಚಿವ ಮಹದೇವಪ್ಪ ಲಾಬಿ ನಡೆಸುತ್ತಿದ್ದು, ಸಿದ್ದರಾಮಯ್ಯ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಕೊನೆಗೇ ಅಚ್ಚರಿ ಅಭ್ಯರ್ಥಿಯಾಗಿ ಶಾಸಕ ದರ್ಶನ್ ಧ್ರುವನಾರಾಯಣ ಕಣಕ್ಕಿಳಿದರೂ ಅಚ್ಚರಿಯಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.
ಸಿಎಂ ವ್ಯಾಪ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದ ಅನಿವಾರ್ಯತೆ ಇದ್ದು, ಈಗಾಗಲೇ ಮೊದಲ ಬಾರಿಗೆ ಕಮಲ ಅರಳಿ ಬೀಗಿದೆ. ಮತ್ತೇ ಕೈ ವಶ ಮಾಡಿಕೊಳ್ಳಬೇಕಾದ ಅನಿವಾರ್ಯತೆ, ಸಿಎಂ ಕ್ಷೇತ್ರದಲ್ಲಿ ಗೆಲ್ಲಿಸಬೇಕಾದ ಅನಿವಾರ್ಯತೆ ಎರಡೂ ಇದೆ. ಟಿಕೆಟ್ ರೇಸ್‌ನಲ್ಲಿ ಸುನೀಲ್ ಬೋಸ್, ದರ್ಶನ್ ಧ್ರುವನಾರಾಯಣ ಡಿ.ಎನ್.ನಟರಾಜು, ಜಿ.ಎನ್.ನಂಜುಂಡಸ್ವಾಮಿ ಇದ್ದು, ಎಲ್ಲರೂ ಲಾಬಿ ನಡೆಸುತ್ತಿದ್ದಾರೆ.
ಅಂತಿಮವಾಗಿ ಸಿದ್ದರಾಮಯ್ಯ ಸೂಚಿಸಿದವರಿಗೆ ಎಂಪಿ ಟಿಕೆಟ್ ಸಿಗಲಿದ್ದು, ಯಾರಾಗುತ್ತಾರೆ ಹುರಿಯಾಳು ಎಂಬುದೇ ಇನ್ನೂ ಸಸ್ಪೆನ್ಸ್ ಆಗೇ ಉಳಿದಿದೆ. ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು, ಮಹದೇವಪ್ಪ ಅವರೇ ಚುನಾವಣೆಗೆ ನಿಲ್ಲುವರೋ, ಇಲ್ಲವೇ ಮಗನಿಗೆ ಟಿಕೆಟ್ ಕೊಡಿಸುತ್ತಾರೋ, ಧ್ರುವನಾರಾಯಣ ಪುತ್ರ ದರ್ಶನ್ ಅಚ್ಚರಿ ಅಭ್ಯರ್ಥಿಯಾಗಿ ಹೊರಹೊಮ್ಮುವರೇ ಕಾದು ನೋಡಬೇಕಿದೆ.