ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Sooraj Revanna: ಲೈಂಗಿಕ ದೌರ್ಜನ್ಯ ಪ್ರಕರಣ- ಜೆಡಿಎಸ್ MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು

Twitter
Facebook
LinkedIn
WhatsApp
Sooraj Revanna

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ (Sooraj Revanna) ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆದೇಶ ಕಾಯ್ದಿರಿಸಿತ್ತು. ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಗ್ಗೆ 9.00 ರಿಂದ ಸಂಜೆ 5.00 ರ ನಡುವೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಮನಗರ: 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ

ರಾಮನಗರ, ಜುಲೈ 22: ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ ನಡೆದಿರುವಂತಹ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ (rowdy sheeter) ಹರ್ಷ ಆ್ಯಂಡ್​ ಗ್ಯಾಂಗ್​ನಿಂದ ಕೃತ್ಯ ಆರೋಪ ಮಾಡಲಾಗಿದೆ. ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗೆ ಮನವಿ ಮಾಡಲಾಗಿದೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆದ ಕಾರಣ ಇಡಿ ಬಡಾವಣೆಯಲ್ಲಿ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಜೈಲಿನಲ್ಲಿ ದರ್ಶನ್ ನೋಡಿ ಮನಸ್ಸಿಗೆ ತುಂಬಾ ನೋವಾಯಿತು: ವಿನೋದ್ ರಾಜ್

ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ರನ್ನು (Darshan) ನೋಡಲು ದಿನಕರ್ ತೂಗುದೀಪ್ ಕುಟುಂಬದ ಜೊತೆಯೇ ತೆರಳಿ ವಿನೋದ್ ರಾಜ್ (Vinod Raj) ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಕ್ಕೆ ವಿನೋದ್ ರಾಜ್ ಮಾತನಾಡಿ, ದರ್ಶನ್‌ರನ್ನು ಜೈಲಿನಲ್ಲಿ ನೋಡಿ ಬೇಸರ ಆಯಿತು ಎಂದು ಮಾತನಾಡಿದ್ದಾರೆ.

ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ ಆತ್ಮೀಯತೆಯಿಂದ ಮಾತನಾಡಿದರು. ಸ್ವೇಚ್ಚಾನುಸಾರವಾಗಿ ಓಡಾಡುತ್ತಿದ್ದ ಮನುಷ್ಯ ದರ್ಶನ್ ಅವರಾಗಿದ್ದರು. ದೇವರ ದಯೆಯಿಂದ ಎಲ್ಲಾ ಸರಿ ಹೋಗಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಮಾತನಾಡಿದ್ದಾರೆ.

ದರ್ಶನ್ ನೋಡಿದಾಗ ಮನಸ್ಸಿಗೆ ತುಂಬಾ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಮಾತನಾಡಿದ್ದಾರೆ. 

ದರ್ಶನ್‌ರನ್ನು ನಂಬಿ ತಮ್ಮ ಸಿನಿಮಾಗೆ ಹಣ ಹಾಕಿದ ನಿರ್ಮಾಪಕರನ್ನು ನೋಡಿದರೆ ನೋವಾಗುತ್ತದೆ. ಎಲ್ಲವನ್ನೂ ಕಳೆದುಕೊಂಡು ನೋಡೋದು ಕಷ್ಟದ ಕೆಲಸ ಎಂದಿದ್ದಾರೆ. ಕಾರಾಗೃಹದಲ್ಲಿ ಅಷ್ಟು ದಿನಗಳ ಕಾಲ ಸಮಯ ಕಳೆಯೋದು ಸುಲಭವಲ್ಲ. ಅಣ್ಣಾ ಎಂದು ಬಾಯಿ ತುಂಬಾ ಹೇಳುವ ದರ್ಶನ್ ಹೀಗೆ ಆಯ್ತಲ್ಲ ನೋವು ಆಗ್ತಿದೆ ಎಂದು ವಿನೋದ್ ರಾಜ್ ಮಾತನಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist