ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾವು ಕೊಟ್ಟ ಮಾತಿನಂತೆ ನುಡಿದಿದ್ದೇವೆ ; ಈಗ ಎಲ್ಲರ ಖಾತೆಗೆ 15 ಲಕ್ಷ ಮತ್ತು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡಲಿ - ಡಿ. ಕೆ ಶಿವಕುಮಾರ್ ತಿರುಗೇಟು

Twitter
Facebook
LinkedIn
WhatsApp
233831489 380003373482147 2412848297956402447 n 12

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರ ಖಾತೆಗೆ 15 ಲಕ್ಷ ಹಾಕಲಿ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡಲಿ. ರೈತರ ಆದಾಯ ಡಬಲ್ ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಕಾಂಗ್ರೆಸ್ ಸರ್ಕಾರ ಈ ಗ್ಯಾರಂಟಿ ಯೋಜನೆಗಳನ್ನು ನೀಡಿದೆ ಎಂದರು.

ವಿರೋಧ ಪಕ್ಷದವರು ಇರುವುದೇ ಟೀಕೆ ಮಾಡಲು, ಅವರು ಟೀಕೆ ಮಾಡಲಿ. ಅವರು ಟೀಕೆ ಮಾಡುವ ಮೊದಲು ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ವಿದೇಶದಿಂದ ಕಪ್ಪು ಹಣ ತರಲಿ, ಎಲ್ಲರ ಖಾತೆಗೆ 15 ಲಕ್ಷ ಹಾಕಲಿ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡಲಿ. ರೈತರ ಆದಾಯ ಡಬಲ್ ಮಾಡಲಿ ಎಂದು ಸವಾಲು ಹಾಕಿದರು.

ಸದ್ಯದಲ್ಲೇ ಕೇಂದ್ರ ಸರ್ಕಾರಕ್ಕೆ ಪರೀಕ್ಷೆ ಎದುರಾಗುತ್ತಿದ್ದು, ಅದರಲ್ಲಿ ಅವರು ಪಾಸ್ ಆಗಲು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಲಿ ಎಂದರು.

ಇನ್ನು ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, “ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು. ಜನರು ಬಾಡಿಗೆ ಮನೆಯಲ್ಲಾದರೂ ಇರಲಿ ಸ್ವಂತ ಮನೆಯಲ್ಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ. ನಮ್ಮ ಮಾತು 200 ಯೂನಿಟ್ ವರೆಗೂ ಉಚಿತ ಎಂದು ಹೇಳಿದ್ದೆವು ಅದರಂತೆ ನೀಡಿದ್ದೇವೆ. ಇಷ್ಟು ದಿನಗಳ ಕಾಲ ನೂರು ಯೂನಿಟ್ ಬಳಸುತ್ತಿದ್ದವರು. ಏಕಾಏಕಿ 200 ಯುನಿಟ್ ಬಳಸಿದರೆ ಅದಕ್ಕೆ ಅವಕಾಶವಿಲ್ಲ” ಎಂದು ತಿಳಿದರು.

ಯೋಜನೆಯ ಫಲ ತ್ಯಜಿಸಲು ಅವಕಾಶ ಕಲ್ಪಿಸುವಿರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಇದಕ್ಕೆ ಅವಕಾಶ ಕಲ್ಪಿಸುತ್ತೇವೆ. ಒಂದು ವೇಳೆ ಯಾರಿಗಾದರೂ ಈ ಯೋಜನೆ ಫಲ ಬೇಡವಾದರೆ ಅದನ್ನು ಅವರು ತ್ಯಜಿಸಿ ವಿದ್ಯುತ್ ಬಿಲ್ ಕಟ್ಟಬಹುದು. ಅನೇಕ ಅಧಿಕಾರಿಗಳು, ಮಾಧ್ಯಮ ಮುಖ್ಯಸ್ಥರು, ಸರ್ಕಾರಿ ನೌಕರರು ಈ ಗೃಹಜೋತಿ ಯೋಜನೆಯ ಫಲ ಬೇಡ ಎಂದು ಪತ್ರ ಬರೆದರೆ, ಮತ್ತೆ ಕೆಲವರು ಖುದ್ದಾಗಿ ಹೇಳಿದ್ದಾರೆ. ಯಾರಿಗೆಲ್ಲ ಈ ಯೋಜನೆಯ ಲಾಭ ಬೇಡವೋ ಅವರಿಗೆ ಇದನ್ನು ತ್ಯಜಿಸಲು ಅವಕಾಶ ನೀಡಲಾಗುವುದು. ಅದಕ್ಕಾಗಿ ಈ ಯೋಜನೆಗಳ ಫಲ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಕೇಂದ್ರ ಸರ್ಕಾರ ಅಡುಗೆ ಅನಿಲ ಸಬ್ಸಿಡಿ ತ್ಯಜಿಸಲು ಕರೆ ಕೊಟ್ಟಾಗ ಅನೇಕರು ಅದಕ್ಕೆ ಸ್ಪಂದಿಸಿ ಸಬ್ಸಿಡಿಯನ್ನು ಕೈಬಿಟ್ಟಿದ್ದರು. ಅದೇ ರೀತಿ ಇಲ್ಲಿಯೂ ಯೋಜನೆ ಲಾಭ ತ್ಯಜಿಸಬಹುದು” ಎಂದು ತಿಳಿಸಿದರು.

ಕಾಂಗ್ರೆಸ್ನವರು ಹಣೆಗೆ ತುಪ್ಪ ಸವರುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟೀಕೆ ಕುರಿತು ಕೇಳಿದಾಗ, “ಕುಮಾರಣ್ಣ ದೊಡ್ಡವರು ಅವರಿಗೆ ಬಹಳ ಅನುಭವವಿದೆ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ನನ್ನ ಕರ್ತವ್ಯ ಮಾಡುತ್ತೇನೆ ಅವರು ಅವರ ಕೆಲಸ ಮಾಡಲಿ” ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ