Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು
ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ HCL foundation ನವರು ಆಯೋಜಿಸಿದ ದಕ್ಷಿಣ ಭಾರತ ಮಟ್ಟದ sports for change Kho Kho ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಯನಾಡು ಸರಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿರುತ್ತಾರೆ.
ಲೀಗ್ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ ಕರ್ನಾಟಕ ತಂಡ ತೆಲಂಗಾಣ, ಕೇರಳ ಮತ್ತು ತಮಿಳುನಾಡು ತಂಡಗಳನ್ನು ಮಣಿಸಿ, ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡದ ವಿರುದ್ಧ ಟೈ ಬ್ರೇಕರ್ ನಲ್ಲಿ ವೀರೋಚಿತ ಸೋಲುಂಡಿತು. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧನುಷ್ ,ಶ್ರವಣ್ ಮತ್ತು ಪವನ್ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾರೆ.
ನಯನಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧನುಷ್ , ಶ್ರವಣ್ ಮತ್ತು ಪವನ್, ಕಳೆದ ಫೆಬ್ರವರಿಯಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದರು. ಇವರಿಗೆ ನಯನಾಡು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಕನ್ಯಾರತ್ನ ಮತ್ತು ಹಿರಿಯ ವಿದ್ಯಾರ್ಥಿ ಸುಹಾಸ್ ತರಬೇತುಗೊಳಿಸಿದ್ದರು.
ಪಿಲಿಕುಳ: ಎರಡು ದಿನಗಳ ಹಣ್ಣು ಹಂಪಲು ಮೇಳ
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು.
ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರೈತರಿಗೂ ತಾವು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗಲಿದೆ ಎಂದು ಹೇಳಿದರು ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಗಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ್ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪ್ರವೀಣ್ ನಾಯಕ್, ಆಡಳಿತಾಧಿಕಾರಿ ಡಾ ಅಶೋಕ್,ಪಿಲಿಕುಳ ವಿಜ್ಯಾನ ಕೇಂದ್ರ ನಿರ್ದೇಶಕ ಪ್ರೊ. ಕೆ. ವಿ. ರಾವ್ ಉಪಸ್ಥಿತರಿದ್ದರು.
ಹಣ್ಣುಗಳ ಮೇಳಕ್ಕೆ ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ಹಣ್ಣು ಹಂಪಲು ಗಳು, ತರಕಾರಿ ಬೀಜಗಳು, ಹಣ್ಣು ಹಂಪಲು ಗಿಡಗಳು, ವಿವಿಧ ಖಾದ್ಯಗಳ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದಿದೆ. ಭಾನುವಾರ ಸಂಜೆ ಸಮಪನಗೊಳ್ಳಲಿದೆ.