ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2024 : 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ಇಂದುಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು.
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್
Twitter
Facebook
LinkedIn
WhatsApp
ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?
ಅಧಿಕೃತ ವೆಬ್ಸೈಟ್ kseab.karnataka.gov.in ಮತ್ತು karresults.nic.in ಗೆ ಭೇಟಿ ನೀಡಿ
ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಲಾಗಿನ್ ಪುಟವು ತೆರೆಯುತ್ತದೆ
ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ
ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಲಾದ ಆನ್ಲೈನ್ ಮಾರ್ಕ್ ಶೀಟ್ ತಾತ್ಕಾಲಿಕವಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಶಾಲೆಗಳ ಅಧಿಕೃತ ಸೂಚನೆಯ ಪ್ರಕಾರ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ತಮ್ಮ ಶಾಲೆಗಳಿಂದ SSLC ಮಾರ್ಕ್ಶೀಟ್ ಪಡೆಯಬೇಕು.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ, ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ಅವಕಾಶ, ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆ 92.12%, ಶಿವಮೊಗ್ಗ ಜಿಲ್ಲೆ 88.67%, ಕೊಡಗು ಜಿಲ್ಲೆ 88.67% ರಷ್ಟಿದೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ.
ಅಂಕಿತಾ ಬಸಪ್ಪ 625ಕ್ಕೆ 625 ರಷ್ಟು ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದರೆ 7 ವಿದ್ಯಾರ್ಥಿಗಳು ಎರಡನೇ ಸ್ಥಾನದಲ್ಲಿದ್ದಾರೆ.
ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.
ಕಳೆದ ವರ್ಷ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಗೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಕರ್ನಾಟಕ SSLC 2023 ಪರೀಕ್ಷೆಗಳಲ್ಲಿ ಒಟ್ಟಾರೆ ಉತ್ತೀರ್ಣ ಶೇಕಡಾ 83.89%.
ಈ ಬಾರಿಯ ಒಟ್ಟು ಫಲಿತಾಂಶ ಶೇ.73.40 ಆಗಿದ್ದು, ಒಟ್ಟು 63,12,04 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿ ಹೋಲಿಕೆ ಮಾಡಿದ್ರೆ ಈ ಬಾರಿ ಶೇಕಡ 10 ಫಲಿತಾಂಶ ಕುಸಿತ ಕಂಡಿದೆ.
ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆ 18ನೇ ಸ್ಥಾನ ಪಡೆದಿತ್ತು, ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.