ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

SSLC ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
SSLC ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು  ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್​ಸಿ ಪರೀಕ್ಷೆಗಳು  ಮಾರ್ಚ್​​ 25 ರಿಂದ  ಏಪ್ರಿಲ್​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ವರ್ಷ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಹಾಗಂತ ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ  20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತೆ. ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ ಎಂದು ಜಾರಿಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ