ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

Twitter
Facebook
LinkedIn
WhatsApp
suicide1670898627

ರಾಯಚೂರು, ಆ.24: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ (Kittur Rani Channamma Residential School) ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ನಡೆದಿದೆ. ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು 10 ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

ಚಿಕ್ಕಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಹಾಗೂ ಮಗ (Father-Son) ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ದುರ್ದೈವಿಗಳು. ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ವ್ಯಾಪಾರಕ್ಕಾಗಿ ಬುಧವಾರ ಸಂಜೆ ಭೂಚನಹಳ್ಳಿ ಬಳಿಯ ಕೆರೆಗೆ ತಾವರೆ ಹೂ ಕೀಳಲು ಹೋಗಿದ್ದರು.

ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಹೂ ಕೀಳಲು ತಂದೆ, ಮಗ ಮುಂದಾದಾಗ ಅವಘಡ ಸಂಭವಿಸಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ಇಬ್ಬರು ಕೆರೆಯಲ್ಲಿ ಮುಳುಗಿರುವುದು ತಿಳಿದುಬಂದಿದೆ.

ಡಿಎಸ್​ಎಸ್ ಮುಖಂಡನ ಬರ್ಬರ ಕೊಲೆ; ಹತ್ಯೆಗೆ ಕಾರಣವಾಯಿತೇ ಹಳೇ ದ್ವೇಷ?

ಚಿಕ್ಕಬಳ್ಳಾಫುರ, ಆ.24: ದಲಿತ ಸಂಘರ್ಷ ಸಮಿತಿ  ಮುಖಂಡನನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೈರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ ಮೃತ ವ್ಯಕ್ತಿ. ಇವರು ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ಹತ್ಯೆ ಮಾಡಲಾಗಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾರಾಯಣಸ್ವಾಮಿ ಹತ್ಯೆಯಾದ ಸ್ವಲ್ಪ ದೂರದಲ್ಲಿಯೇ ಆತ ಚಲಿಸುತ್ತಿದ್ದ ಓಮಿನಿ ಕಾರು ರಸ್ತೆ ಬದಿ ನಿಂತಿದೆ. ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ಹಾಗೂ ದಲಿತ ಸಂಘಟನೆಯಲ್ಲಿ ಸಕ್ರಿಯನಾಗಿದ್ದರು. ಇದೀಗ ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್ ನಾಗೇಶ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ