ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕದಲ್ಲಿ ಚಾಕು ಇರಿತ; ಸಾವು-ಬದುಕಿನ ನಡುವೆ ಹೋರಾಡಿದ್ದ ಭಾರತೀಯ ವಿದ್ಯಾರ್ಥಿ ಕೊನೆಯುಸಿರು..!

Twitter
Facebook
LinkedIn
WhatsApp
ಅಮೆರಿಕದಲ್ಲಿ ಚಾಕು ಇರಿತ; ಸಾವು-ಬದುಕಿನ ನಡುವೆ ಹೋರಾಡಿದ್ದ ಭಾರತೀಯ ವಿದ್ಯಾರ್ಥಿ ಕೊನೆಯುಸಿರು..!

ವಾಷಿಂಗ್ಟನ್: ಅಮೆರಿಕದ (America) ಇಂಡಿಯಾನಾದಲ್ಲಿ ಫಿಟ್‌ನೆಸ್ ಸೆಂಟರ್‌ನಲ್ಲಿ (Fitness Center) ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ (Indian Student) ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಆತ ವ್ಯಾಸಂಗ ಮಾಡುತ್ತಿದ್ದ ವಿಶ್ವವಿದ್ಯಾಲಯ ತಿಳಿಸಿದೆ.

ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ (Varun Raj Pucha) ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್‌ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್ (24) ಎಂಬಾತ ಆತನ ತಲೆಗೆ ಚಾಕುವಿನಿಂದ ಇರಿದಿದ್ದ. ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿ ಅಗಲಿಕೆ ಬಳಿಕ ಮಾಹಿತಿ ನೀಡಿರುವ ವಾಲ್ಪರೈಸೊ ವಿಶ್ವವಿದ್ಯಾಲಯ, ವರುಣ್ ರಾಜ್ ಪುಚ್ಚಾ ಅಗಲಿಕೆ ಸುದ್ದಿಯನ್ನು ನಾವು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತಿದ್ದೇವೆ. ನಮ್ಮ ಕ್ಯಾಂಪಸ್ ಸಮುದಾಯದ ಭಾಗವಾಗಿದ್ದ ವಿದ್ಯಾರ್ಥಿಯನ್ನು ಕಳೆದುಕೊಂಡಿದ್ದೇವೆ. ಈ ನಷ್ಟಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ನಾವು ಅಗಲಿದ ವಿದ್ಯಾರ್ಥಿ ವರುಣ್‌ನ ಕುಟುಂಬ ಮತ್ತು ಸ್ನೇಹಿತರೊಂದಿಗಿದ್ದೇವೆ ಎಂದು ಹೇಳಿದೆ. 

ತೆಲಂಗಾಣದ ಖಮ್ಮಂ ಮೂಲದ ವರುಣ್ 2022ರ ಆಗಸ್ಟ್‌ನಲ್ಲಿ ಅಮೆರಿಕಗೆ ತೆರಳಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದ. ಮುಂದಿನ ವರ್ಷ ತಮ್ಮ ಕೋರ್ಸ್ ಮುಗಿದ ಬಳಿಕ ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದ. ಆದರೆ ಅನಿರೀಕ್ಷಿತ ಘಟನೆಯಿಂದ ವಿದ್ಯಾರ್ಥಿಯ ಕುಟುಂಬ ಹಾಗೂ ವಿಶ್ವವಿದ್ಯಾಲಯ ಆಘಾತಕ್ಕೊಳಗಾಗಿದೆ.

ಸಿರಿಯಾದಲ್ಲಿ ಇರಾನ್‌ ಬೆಂಬಲಿತ ಶಸ್ತ್ರಾಸ್ತ್ರ ಘಟಕಗಳ ಮೇಲೆ ಅಮೆರಿಕ ದಾಳಿ – 9 ಮಂದಿ ಸಾವು

ವಾಷಿಂಗ್ಟನ್‌: ಅಮೆರಿಕದ (America) ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ (Syria) ಇರಾನ್‌ (Iran) ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ.

ಅಮೆರಿಕ ಸಿಬ್ಬಂದಿ ಮೇಲಿನ ದಾಳಿಗೆ ಕೌಂಟರ್‌ ಆಗಿ ಅಮೆರಿಕ ಯುದ್ಧ ವಿಮಾನಗಳು (US Airstrick) ಬುಧವಾರ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 9 ಮಂದಿ ಹತ್ಯೆಯಾಗಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ.

ಸಿರಿಯಾದಲ್ಲಿ ಒಂದು ಸ್ಥಳವನ್ನು ಅಮೆರಿಕ ಗುರಿಯಾಗಿಸಿಕೊಂಡಿದೆ. ಇಸ್ರೇಲ್-ಹಮಾಸ್ ಹೋರಾಟವನ್ನು ಪ್ರಾದೇಶಿಕ ಯುದ್ಧವಾಗಿ ಪರಿವರ್ತಿಸುವುದರಿಂದ ಇರಾನ್ ಮತ್ತು ಅದರ ಪ್ರಾಕ್ಸಿಗಳನ್ನು ತಡೆಯಲು ಯುನೈಟೆಡ್ ಸ್ಟೇಟ್ಸ್ ಪ್ರಯತ್ನಿಸುತ್ತಿದೆ. ಆದರೆ ಪುನರಾವರ್ತಿತ ದಾಳಿಗಳು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಸಂಘರ್ಷಕ್ಕೆ ಅಪಾಯವನ್ನುಂಟು ಮಾಡುತ್ತವೆ.

ಯುಎಸ್ ಮಿಲಿಟರಿ ಪಡೆಗಳು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮತ್ತು ಅಂಗಸಂಸ್ಥೆ ಗುಂಪುಗಳು ಬಳಸುತ್ತಿದ್ದ ಪೂರ್ವ ಸಿರಿಯಾದ ಸೌಲಭ್ಯದ ಮೇಲೆ ಸ್ವಯಂ-ರಕ್ಷಣಾ ದಾಳಿಯನ್ನು ನಡೆಸಿತು. ಈ ದಾಳಿಯನ್ನು ಎರಡು ಯುಎಸ್ ಎಫ್ -15 ಗಳು ಶಸ್ತ್ರಾಸ್ತ್ರ ಸಂಗ್ರಹಣಾ ಸೌಲಭ್ಯದ ವಿರುದ್ಧ ನಡೆಸಿತು” ಎಂದು ಆಸ್ಟಿನ್ ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ