ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು - ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ!
ನವದೆಹಲಿ: ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express Train) ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು (ಗುರುವಾರ) ಈ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.
ಹೈದರಾಬಾದ್‌ನ ಕಾಚಿಗುಡ – ಯಶವಂತಪುರ ನಿಲ್ದಾಣದ ನಡುವೆ ಸಂಚರಿಸುವ ರೈಲಿಗೆ ಸೆಪ್ಟೆಂಬರ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದ 2 ಐಟಿ ನಗರಗಳ ನಡುವಿನ ಮೊದಲ ವಂದೇ ಭಾರತ್ ರೈಲಾಗಲಿದೆ.
ಇಂದು ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ ಕಾಚಿಗುಡ ತೆರಳಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಶ್ವಕಪ್ ವೀಕ್ಷಣೆಗೆ ಗೋಲ್ಡನ್ ಟಿಕೆಟ್ ಪಡೆದ ರಜನಿಕಾಂತ್
ಮುಂದಿನ ತಿಂಗಳಿನಿಂದ ಪ್ರಾರಂಭವಾಗುವ ಐಸಿಸಿ ವಿಶ್ವಕಪ್ 2023 ವೀಕ್ಷಿಸಲು ರಜನಿಕಾಂತ್ (Rajinikanth) ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಗೋಲ್ಡನ್ ಟಿಕೆಟ್ (Golden Ticket) ನೀಡಿ ಗೌರವಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರು ರಜನಿಯನ್ನು ಭೇಟಿ ಮಾಡಿ ಈ ಗೌರವದ ಟಿಕೆಟ್ ಅನ್ನು ನೀಡಿದ್ದಾರೆ.
ಟಿಕೆಟ್ ಪಡೆದ ನಂತರ ಸೋಷಿಯಲ್ ಮೀಡಿಯಾ ಮೂಲಕ ಕೃತಜ್ಞತೆಯನ್ನು ಸಲ್ಲಿಸಿರುವ ರಜನಿಕಾಂತ್, ಇಂಥದ್ದೊಂದು ಗೌರವ ಸಿಕ್ಕಿದು ಖುಷಿಯಾಗಿದೆ ಎಂದು ಹೇಳಿದ್ದಾರೆ. ಕ್ರಿಕೆಟ್ (Cricket) ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಬಿಡುವು ಮಾಡಿಕೊಂಡು ಕ್ರಿಕೆಟ್ ನೋಡುವುದಾಗಿಯೂ ತಿಳಿಸಿದ್ದಾರೆ.
ಈ ಟಿಕೆಟ್ ಪಡೆದವರಿಗೆ ವಿಶೇಷ ಆತಿಥ್ಯವನ್ನು ನೀಡಲಾಗುತ್ತದೆ. ಈ ಹಿಂದೆ ಅಮಿತಾಭ್ ಬಚ್ಚನ್ ಸೇರಿದಂತೆ ಹಲವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿತ್ತು. ಅಕ್ಟೋಬರ್ 5 ರಂದು ಅಹಮದ್ ಬಾದ್ ನಲ್ಲಿ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ರಜನಿ ಆಗಮಿಸುವ ನಿರೀಕ್ಷೆಯಿದೆ. ಇದು ಈ ಸರಣಿಯ ಮೊದಲ ಪಂದ್ಯವಾಗಿದೆ.