ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಸರ್ಕಾರದ ವಿರುದ್ಧ ಸೆ.8 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ!

Twitter
Facebook
LinkedIn
WhatsApp
ರಾಜ್ಯ ಸರ್ಕಾರದ ವಿರುದ್ಧ ಸೆ.8 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ, ಜನ ವಿರೋಧಿ ಆಡಳಿತ ನಡೆಸುತ್ತಿದ್ದು, ನೂರು ದಿನದಲ್ಲೇ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯಾದ್ಯಂತ ಸೆಪ್ಟೆಂಬರ್ 8 ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಿನ್ನೆ (ಸೋಮವಾರ), ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆ. 8ರಂದು ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನ ಹಾಗೂ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ನೇತೃತ್ವದಲ್ಲಿ ಕಾಂಗ್ರೆಸ್​ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಜನ ವಿರೋಧಿ ನಿಲುವಿನ ವಿರುದ್ಧ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಪೂರ್ವ ಸಭೆ ನಡೆಸಲಾಯಿತು.

ಸಭೆ ಬಳಿಕ ಮಾಹಿತಿ ನೀಡಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು, ‘ಸೆ.8 ರಂದು ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸರ್ಕಾರ ನೂರು ದಿನ ಪೂರೈಸಿದ ಸಂಭ್ರಮ ಕಾಂಗ್ರೆಸ್ ನಾಯಕರಿಗೆ ಮಾತ್ರವೇ ಹೊರತು ಜನರಿಗಲ್ಲ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗುತ್ತಿಗೆದಾರರ ಬ್ಲಾಕ್ ಮೇಲ್ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಹ ಮಾಡಿಲ್ಲ. ಅನಿಯಮಿತ ಪವರ್ ಕಟ್ ಮಾಡುತ್ತಿರುವುದು, ರೈತರ ಆತ್ಮಹತ್ಯೆ ಮಾಡಿಕೊಂಡರು ಪರಿಹಾರ ನೀಡದೆ ಇರುವುದು, ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತ ಕೊಲೆ ಮಾಡುತ್ತಿರುವುದು ನಡೆಯುತ್ತಿದೆ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು, ಜನಪರ ಕೆಲಸ ಮಾಡಲು ಈ ಹೋರಾಟ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಪ್ರತಿಭಟನೆಯಲ್ಲಿ ಬೆಂಗಳೂರಿನ ಎಲ್ಲಾ ಶಾಸಕರು ಮತ್ತು ಎಂಎಲ್‌ಸಿಗಳು ಭಾಗವಹಿಸಲಿದ್ದಾರೆಂದು ತಿಳಿಸಿದರು.

ಪರಿಹಾರ ಪಡೆಯಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ಸಚಿವ ಶಿವಾನಂದ ಪಾಟೀಲ್

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಮಂಗಳವಾರ ಹೇಳಿದ್ದು, ಈ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವಾನಂದ ಪಾಟೀಲ್ ಅವರು, ವೀರೇಶ್‌ ಕಮಿಟಿ ಬರುವ ಮುನ್ನ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆ ಇದ್ದವು. ಮೊದಲು ರೂ.2 ಲಕ್ಷ ಪರಿಹಾರ ಕೊಡಲಾಗುತ್ತಿತ್ತು. ಪರಿಹಾರ ಹೆಚ್ಚಳವಾದ ನಂತರ ಹೃದಯಾಘಾತ, ಪ್ರೇಮ ವೈಫಲ್ಯ, ಕುಡಿದು ಆತ್ಮಹತ್ಯೆ ಮಾಡಿಕೊಂಡ ಎಲ್ಲವನ್ನೂ ಪರಿಹಾರದ ಆಸೆಗಾಗಿ ‘ರೈತ ಆತ್ಮಹತ್ಯೆ’ ಪ್ರಕರಣ ಎಂದು ದಾಖಲಿಸಲಾಗುತ್ತಿದೆ. ಹೀಗೆ ದಾಖಲಾದ ಪ್ರಕರಣಗಳಲ್ಲಿ ಸತ್ಯಾಂಶ ಕಡಿಮೆ ಇರುವುದು ಗಮನಕ್ಕೆ ಬಂದಿದೆ.

ರಾಜ್ಯದಲ್ಲಿ 2020ರಲ್ಲಿ 500, 2021ರಲ್ಲಿ 595, 2022ರಲ್ಲಿ 651 ಹಾಗೂ 2023ರಲ್ಲಿ 412 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ನಿಜವಾದ ರೈತ ಆತ್ಮಹತ್ಯೆ ಪ್ರಕರಣಗಳಿಗೆ, ಪರಿಹಾರ ಕೊಡಲು ಸರ್ಕಾರ ಸಿದ್ಧವಿದೆ. ಹಾವೇರಿ ಜಿಲ್ಲೆಯಲ್ಲಿ 2022–23ನೇ ಸಾಲಿನಲ್ಲಿ 122 ಪ್ರಕರಣಗಳು ಹಾಗೂ 2023–24ನೇ ಸಾಲಿನಲ್ಲಿ 33 ಪ್ರಕರಣಗಳು ವರದಿಯಾಗಿವೆ. ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಇವತ್ತು ನಿನ್ನೆಯದಲ್ಲ. ಹಿಂದೆಯೂ ಆಗಿವೆ ಎಂದು ಹೇಳಿದರು.

ಎರಡು ವರ್ಷಗಳಲ್ಲಿ 53 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಇಲ್ಲಿಯವರೆಗೆ ಪರಿಹಾರ ಸಿಕ್ಕಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ‘ರೈತ ಆತ್ಮಹತ್ಯೆ ಪ್ರಕರಣಗಳಿಗೆ ಪರಿಹಾರ ನೀಡುತ್ತಿದ್ದೇವೆ. ಎಫ್‌ಐಆರ್‌ ಆದ ತಕ್ಷಣ ರೈತ ಆತ್ಮಹತ್ಯೆ ಎಂದು ವರದಿ ಮಾಡುವುದು ತಪ್ಪು. ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಕಾಯದೇ, ವರದಿ ಮಾಡಿದರೆ ರೈತರಲ್ಲಿ ಆತಂಕ ಹೆಚ್ಚಾಗುತ್ತದೆ. ನೀವು ಜನರಿಗೆ ತಪ್ಪು ಮಾಹಿತಿ ನೀಡಬೇಡಿ’ ಎಂದು ಮನವಿ ಮಾಡಿದರು.

ಈ ನಡುವೆ ಸಚಿವರ ಹೇಳಿಕೆ ರೈತರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಕೂಡಲೇ ಶಿವಾನಂದ ಪಾಟೀಲ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಹಾವೇರಿಯ ರೈತ ಮುಖಂಡರೊಬ್ಬರು ಮಾತನಾಡಿ, ”ಶಿವಾನಂದ ಪಾಟೀಲರು ಸಚಿವರಾಗಿದ್ದು, ರೈತರ ಬಗ್ಗೆ ಹಗುರವಾಗಿ ಮಾತನಾಡಬಾರದು. ರೈತರು ಆತ್ಮಹತ್ಯೆಗೆ ಮುಂದಾಗುವುದನ್ನು ತಡೆಯಲು ಕ್ರಮಕೈಗೊಳ್ಳಬೇಕು. ಚುನಾಯಿತ ಪ್ರತಿನಿಧಿಯಾಗಿ ರೈತರ ಸಮಸ್ಯೆಗಳನ್ನು ನಿವಾರಿಸಲು ಸಚಿವರು ಸಹಾಯ ಮಾಡಬೇಕು. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ರೈತರ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು. ರಾಜ್ಯ ಸರ್ಕಾರ ಕೂಡಲೇ ಶಿವಾನಂದ ಪಾಟೀಲ್ ಅವರನ್ನು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇವೆಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ