ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಾದ್ಯಂತ ಕಾಟನ್ ಕ್ಯಾಂಡಿ ನಿಷೇಧ ; ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ - ದಿನೇಶ್ ಗುಂಡುರಾವ್

Twitter
Facebook
LinkedIn
WhatsApp
ರಾಜ್ಯಾದ್ಯಂತ ಕಾಟನ್ ಕ್ಯಾಂಡಿ ನಿಷೇಧ ; ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ - ದಿನೇಶ್ ಗುಂಡುರಾವ್

ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ (Cotton Candy Ban) ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ (Gobi manchurian) ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ​ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಏರಿಕೆಯಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ. ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಾಗುತ್ತಿದೆ. ಹೀಗಾಗಿ 171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು ತಿಳಿಸಿದರು.

ಇನ್ನು 25 ವಿಧದ ಕಾಟನ್​​ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಕಂಡು ಬಂದಿದೆ. 10ರಲ್ಲಿ ಕೃತಕ ಬಣ್ಣ ಬಳಸಿಲ್ಲ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ  ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇನ್ಮುಂದೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ