ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮುಂಬೈನ ಮರೋಲ್ ಪ್ರದೇಶದಲ್ಲಿರುವ ಫ್ಲಾಟ್‌ನಲ್ಲಿ 23 ವರ್ಷದ ಗಗನಸಖಿಯ (Air Hostess) ಕತ್ತು ಸೀಳಿ ಕೊಂದಿದ್ದ ಆರೋಪಿ ವಿಕ್ರಮ್ ಅತ್ವಾಲ್ (40) ನನ್ನ ಬಂಧಿಸಲಾಗಿತ್ತು.
ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ (Rupal Ogrey), ಏರ್ ಇಂಡಿಯಾದಲ್ಲಿ ತರಬೇತಿಗೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಗಗನಸಖಿ ಸಾವಿಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್‌ನನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದರು.
ಮುಂಬೈನಲ್ಲಿರುವ ತನ್ನ ಫ್ಲಾಟ್‌ನಲ್ಲಿ ಗಗನಸಖಿ ಭಾನುವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಳು. ಕುಟುಂಬ ಸದಸ್ಯರ ಫೋನ್ ಕರೆಯನ್ನ ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನ (Powai Police) ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್‌ನ ಪತ್ನಿಯನ್ನೂ ವಿಚಾರಣೆ ನಡೆಸಲಾಗುತ್ತಿತ್ತು. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದರು.
ಲಿವಿಂಗ್ ಪಾರ್ಟ್ನರ್ ಮೇಲೆ ಸಂಶಯ- ಯುವತಿಯಿಂದ ಯುವಕನ ಹತ್ಯೆ
ಬೆಂಗಳೂರು: ಯುವತಿಯೊಬ್ಬಳು ಲಿವಿಂಗ್ ಟು ಗೆದರ್‌ನಲ್ಲಿದ್ದ ಸ್ನೇಹಿತನ ಮೇಲಿನ ಸಂಶಯದಿಂದಾಗಿ ಆತನನ್ನು ಹತ್ಯೆಗೈದ ಪ್ರಕರಣ ಹುಳಿಮಾವಿನಲ್ಲಿ (Hulimavu) ನಡೆದಿದೆ.
ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ರೇಣುಕಾ (34) ಎಂದು ಗುರುತಿಸಲಾಗಿದೆ. ಯುವತಿ ಕೇರಳ ಮೂಲದ ಜಾವಿದ್ (24) ಎಂಬಾತನ ಜೊತೆ ಆಪಾರ್ಟ್‍ಮೆಂಟ್ ಒಂದರಲ್ಲಿ ವಾಸವಾಗಿದ್ದಳು. ಇಬ್ಬರೂ ಪರಸ್ಪರ ಸಂಶಯದಿಂದ ಆಗಾಗ ಜಗಳವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಸಹ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕಾಗಿ ಆತನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮೃತ ಜಾವಿದ್ ಮೊಬೈಲ್ ಸರ್ವಿಸ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಮಡಿವಾಳದಲ್ಲಿ ಒಂದೇ ಏರಿಯಾದಲ್ಲಿ ವಾಸವಾಗಿದ್ದ ವೇಳೆ ಇಬ್ಬರಿಗೂ ಪರಿಚಯವಾಗಿತ್ತು. ಬಳಿಕ ಇಬ್ಬರೂ ವಸತಿ ಗೃಹ ಇಲ್ಲವೇ ಅಪಾರ್ಟ್‍ಮೆಂಟ್‍ನಲ್ಲಿ ಉಳಿದುಕೊಳ್ಳುತ್ತಿದ್ದರು. ಕೊಲೆ ನಡೆಯುವ ಮೂರು ದಿನದ ಹಿಂದೆ ಇಬ್ಬರು ಭೇಟಿಯಾಗಿದ್ದರು. ಬಳಿಕ ಹುಳಿಮಾವಿನ ಅಕ್ಷಯ ನಗರದ ಅಪಾರ್ಟ್‍ಮೆಂಟ್‍ಗೆ ಬಂದಿದ್ದರು.
ಬಳಿಕ ಸೆ.5 ರಂದು ಇಬ್ಬರ ನಡುವೆ ಜಗಳ ನಡೆದಿತ್ತು. ಈ ವೇಳೆ ಆರೋಪಿ ಚಾಕುವಿನಿಂದ ಜಾವಿದ್‍ನ ಎದೆಗೆ ಇರಿದಿದ್ದಳು. ಬಳಿಕ ಅಲ್ಲಿನ ನಿವಾಸಿಗಳ ಜೊತೆ ಸೇರಿ ಆತನನ್ನು ಆಸ್ಪತ್ರೆಗೆ ಸೇರಿಸಿದ್ದಳು. ನಂತರ ಆಸ್ಪತ್ರೆಯಿಂದ ವಾಪಸ್ ಅಪಾರ್ಟ್‍ಮೆಂಟ್‍ಗೆ ತೆರಳಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಳು. ಈ ವೇಳೆ ಅಪಾರ್ಟ್‍ಮೆಂಟ್ ಸಿಬ್ಬಂದಿ ಡೋರ್ ಲಾಕ್ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಸಂಬಂಧ ಹುಳಿಮಾವು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.