ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ
Twitter
Facebook
LinkedIn
WhatsApp

ಮೈಸೂರು: ನಂಜನಗೂಡು(Nanjangud) ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು (Stomach ache) ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ(suicide)ಮಾಡಿಕೊಂಡಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದವರಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.
ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು, ತೀವ್ರ ನೋವು ತಾಳಲಾರದೇ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.