ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಲ್ಲಿನಿಂದ ಹೊಡೆದು ಯುವಕನ ಹತ್ಯೆ

Twitter
Facebook
LinkedIn
WhatsApp
ಕಲ್ಲಿನಿಂದ ಹೊಡೆದು ಯುವಕನ ಹತ್ಯೆ

ಬೆಳಗಾವಿ: ನಡು ರಸ್ತೆಯಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಪ್ರಕರಣ ಶಿವಬಸವನಗರದಲ್ಲಿ ತಡರಾತ್ರಿ ನಡೆದಿದೆ.

ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬೈಕ್ (Bike) ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಹತ್ಯೆಗೈಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃತ್ಯದಲ್ಲಿ ಮೂರು ಜನ ಭಾಗಿಯಾಗಿರುವ ಶಂಕೆ ಇದೆ. ಹತ್ಯೆ ಬಳಿಕ ಕಿಡಿಗೇಡಿಗಳು ಪರಾರಿಯಾಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

ಯುವಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಯುವಕನನ್ನು ಸಂಚು ರೂಪಿಸಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

ಬೆಂಗಳೂರು: ಮೆಜೆಸ್ಟಿಕ್‌ (Bengaluru) ರೈಲ್ವೆ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ (Train) ಬೆಂಕಿ (Fire) ಕಾಣಿಸಿಕೊಂಡಿದ್ದ ಪ್ರಕರಣಕ್ಕೆ ಇನ್ನೂ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಈ ಬೆಂಕಿ ಅವಘಡ ಹಾಗೂ ಮಧುರೈನಲ್ಲಿ ಸಂಭವಿಸಿದ ಅನಾಹುತದ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದೆ.

ಘಟನೆ ನಡೆದು 10 ದಿನ ಕಳೆದಿದೆ. ಆದರೆ ಘಟನೆಗೆ ಇನ್ನೂ ನಿಖರ ಕಾರಣ ಸಿಗದಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಪ್ರಕರಣದ ಹಿಂದೆ ಕಿಡಿಗೇಡಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣವನ್ನು ಆರ್‌ಪಿಎಫ್ ಡಿಜಿ ಮನೋಜ್ ಯಾದವ್ ತನಿಖೆ ನಡೆಸುತ್ತಿದ್ದಾರೆ. ಬೆಂಕಿ ಅವಘಡವನ್ನು ಗಂಭೀರವಾಗಿ ಪರಿಗಣಿಸಿರುವ ಅವರು ಎರಡು ದಿನಗಳ ಹಿಂದೆ ರೈಲ್ವೇ ಕಚೇರಿಗೆ ಧಿಡೀರ್ ಭೇಟಿಕೊಟ್ಟಿದ್ದರು. ಈ ವೇಳೆ ನಗರ ಪೊಲೀಸ್‌ (Police) ಹಾಗೂ ಆರ್‌ಪಿಎಫ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದರು.

ಅವಘಡ ಸಂಭವಿಸಿದ್ದ ಭೋಗಿಯಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು ಯಾರು? ಭೋಗಿಯಲ್ಲಿ ಟೆಕ್ನಿಕಲ್ ಸಮಸ್ಯೆ ಆಗಿತ್ತಾ? ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಈ ವೇಳೆ ಮುಂಬೈನಿಂದ‌ (Mumbai) ಬಂದಿದ್ದ ರೈಲಿನಲ್ಲಿ ಮುಂಬೈ ಸಿಬ್ಬಂದಿಯೇ ಕಾರ್ಯ ನಿರ್ವಹಿಸುತ್ತಿದ್ದರು. ರೈಲು ಬಂದ ಒಂದು ಗಂಟೆಯ ನಂತರ ಬೆಂಕಿ ಅವಘಡ ಸಂಭವಿಸಿತ್ತು. ಇದೇ ವಿಚಾರವಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದೆ.

ಸಿಸಿಟಿವಿಯಲ್ಲಿ ಪತ್ತೆಯಾದ ಅಂಶಗಳ ಆಧಾರದ ಮೇಲೂ ತನಿಖೆ ನಡೆಸಲಾಗುತ್ತಿದೆ. ರೈಲ್ವೆ ವಿಭಾಗೀಯ ಅಧಿಕಾರಿಗಳಿಂದ ಆಂತರಿಕ ತನಿಖೆ ಸಹ ನಡೆಯುತ್ತಿದೆ. ಸದ್ಯ ಎರಡು ತನಿಖಾ ತಂಡಗಳು ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯುತ್ತಿವೆ. ಬಳಿಕ ನಿಖರ ಕಾರಣ ಬೆಳಕಿಗೆ ಬರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist