ಗೆಳೆಯನಿಗಾಗಿ ಸಾಲ; ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಬೆಂಗಳೂರು: ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ (moneylending apps) ಪಡೆದಿದ್ದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ(suicide )ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ. ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ(Student). ಆ್ಯಪ್ ನಿರ್ವಾಹಕರ ಕಿರುಕುಳಕ್ಕೆ ಬೇಸತ್ತು ತಾಯಿಯ ವೇಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತ್ಮಹತ್ಯೆಗೆ ಮುನ್ನ ತೇಜಸ್ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.
ಸ್ನೇಹಿತ ಮಹೇಶ್‍ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಸಾಲ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ(ಕಂತು) ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಆ್ಯಪ್ ನಿರ್ವಾಹಕರು ತೇಜಸ್‍ಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ. ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ. ಥ್ಯಾಂಕ್ಸ್ ಗುಡ್ ಬೈ ಎಂದು ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ತೇಜಸ್ ಪೋಷಕರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಸ್ತೆ ದಾಟುತ್ತಿದ್ದ ಬಾಲಕಿಗೆ ಶಾಲಾ ಬಸ್ ಡಿಕ್ಕಿ- ಕಂದಮ್ಮ ದುರ್ಮರಣ
ತಿರುವನಂತಪುರಂ: ಶಾಲೆಯಿಂದ ವಾಪ್ಸಾಗುತ್ತಿದ್ದ ಪುಟ್ಟ ಕಂದಮ್ಮನಿಗೆ ಮನೆ ಮುಂದೆಯೇ ಶಾಲಾ ಬಸ್ (School Bus) ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟ ಘಟನೆ ಕೇರಳದಲ್ಲಿ (Kerala) ನಡೆದಿದೆ.
ಬಾಲಕಿಯನ್ನು ದಿಯಾ (8) ಎಂದು ಗುರುತಿಸಲಾಗಿದೆ. ಈಕೆ ತಲಕ್ಕೊಟ್ಟುಕರದ ಒಐಇಟಿ ಪಬ್ಲಿಕ್ ಸ್ಕೂಲ್‍ನಲ್ಲಿ 2ನೇ ತರಗತಿ ಓದುತ್ತಿದ್ದಾಳೆ. ಈ ಘಟನೆ ವೇಲೂರು (Velur) ಎಂಬಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ.

ಪ್ರತಿನಿತ್ಯದಂತೆ ದಿಯಾ ನಿನ್ನೆ ಕೂಡ ಸಂಜೆ ಶಾಲಾ ಬಸ್‍ನಿಂದ ಇಳಿದು ರಸ್ತೆ ದಾಟುತ್ತಿದ್ದಳು. ಆದರೆ ಈಕೆ ರಸ್ತೆ ದಾಟುತ್ತಿರುವುದನ್ನು ಗಮನಿಸಿದ ಡ್ರೈವರ್ ಏಕಾಏಕಿ ಬಸ್ ಚಲಾಯಿಸಿದ್ದಾನೆ. ಪರಿಣಾಮ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದಿದ್ದರಿಂದ ಬಾಲಕಿ ಗಾಯಗೊಂಡಿದ್ದು, ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.