ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ: ಮಂಡಳಿ ಸ್ಪಷ್ಟನೆ
ಬೆಂಗಳೂರು: ಕಳೆದ ಮಾರ್ಚ್ 7 ರಂದು ಭೌತಶಾಸ್ತ್ರದ ದ್ವಿತೀಯ ಪಿಯುಸಿ (PUC) ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು (MCQ ಗಳು) ಕಷ್ಟಕರವಾಗಿದ್ದರಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುತ್ತಿದೆ ಎಂದು ಹಬ್ಬಿರುವ ಸುದಂತಿ ನಿಜವಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.
“ಪತ್ರಿಕೆಯ ಭಾಗ ಎಯಲ್ಲಿ ಬ್ಲೂಪ್ರಿಂಟ್ ಅಲ್ಲದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪ್ರಯತ್ನಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲು ಮಂಡಳಿಯು ನಿರ್ಧರಿಸಿದೆ. ಪ್ರಶ್ನೆಗಳನ್ನು ಹಾಗೆಯೇ ಪ್ರಯತ್ನಿಸದೆ ಬಿಟ್ಟುಬಿಟ್ಟ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು ಮಾರ್ಚ್ 10ರಂದು ಹೊರಡಿಸಲಾದ ಸುತ್ತೋಲೆ ನಕಲಿ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ತಪ್ಪುದಾರಿಗೆಳೆಯುವಂಥದ್ದು ಎಂದು ಮಂಡಳಿ ತಿಳಿಸಿದೆ.
ಈ ಬಗ್ಗೆ TNIE ಯೊಂದಿಗೆ ಮಾತನಾಡಿದ ಪ್ರಭಾರಿ ಮತ್ತು ಪಿಯುಸಿ ಪರೀಕ್ಷೆಗಳ ನಿರ್ದೇಶಕ ಗೋಪಾಲಕೃಷ್ಣ ಎಚ್‌ಎನ್, ಸುತ್ತೋಲೆ ನಕಲಿಯಾಗಿದ್ದು, ಮಂಡಳಿಯಿಂದ ಹೊರಡಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಇಲಾಖೆ ಗ್ರೇಸ್ ಮಾರ್ಕ್‌ಗಳನ್ನು ನೀಡಲಿದೆ ಎಂದು ಸುತ್ತೋಲೆ ಇಂಟರ್ನೆಟ್, ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಆದರೆ ನಾವು ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪತ್ರಿಕೆಯಲ್ಲಿ ಕಾಣಿಸಿಕೊಂಡ ಎಲ್ಲಾ ಪ್ರಶ್ನೆಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಭಾಗವಾಗಿತ್ತು. ಈಗ ಎಲ್ಲೆಡೆ ಹರಿದಾಡುತ್ತಿರುವ ಸುತ್ತೋಲೆ ಮಂಡಳಿಯ ಅಧಿಕೃತ ಸುತ್ತೋಲೆಯಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದರು.
5,8 ಮತ್ತು 9ನೇ ತರಗತಿಗೆ ಬೋರ್ಡ್ ಪರೀಕ್ಷೆ: ಇಂದು ಹೈಕೋರ್ಟ್‌ನಿಂದ ಮಹತ್ವ ತೀರ್ಪು
ತೀವ್ರ ವಿವಾದಕ್ಕೆ ಮತ್ತು ಗೊಂದಲಕ್ಕೆ ಕಾರಣವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಇಂದು ಅಂತಿಮ ತೀರ್ಮಾನ ಹೈಕೋರ್ಟ್‌ನಿಂದ ಹೊರ ಬೀಳುವ ಸಾಧ್ಯತೆ ಇದೆ.
ಬುಧವಾರ ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ ರೈ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ವಿಚಾರಣೆಯನ್ನು ಇಂದು ಮತ್ತೆ ಮುಂದುವರಿಸುವುದಾಗಿ ಹೇಳಿದೆ.
ರಾಜ್ಯದ ಎಲ್ಲ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವ ಸಲುವಾಗಿ ಶಿಕ್ಷಣ ಇಲಾಖೆ 5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಯನ್ನು ನಡೆಸಲು ಮುಂದಾಗಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಿವರಿಸಿದೆ.ರಾಜ್ಯ ಪಠ್ಯ ಕ್ರಮ ಅಳವಡಿಸಿಕೊಂಡಿರು5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ರಾಜ್ಯ ಪಠ್ಯ ಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ ಎಂದರು.
ಅಲ್ಲದೆ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತರದ ಗೊಂದಲಗಳಿಗೆ ಕಾರಣವಾಗುತ್ತಿದೆ. ಜತೆಗೆ ರಾಜ್ಯ ಶಿಕ್ಷಣ ಇಲಾಖೆಗೆ ಆರ್ ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ವಿವರಿಸಿದರು ವಿವರಣೆ ನೀಡಿದರು.