ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Subhash Chandra Bose: ಪ್ರಧಾನಿ ಮೋದಿಯಿಂದ ಸಂಸತ್ತಿನಲ್ಲಿ ಸುಭಾಷ್​ ಚಂದ್ರ ಬೋಸ್ ಭಾವಚಿತ್ರಕ್ಕೆ ಗೌರವ ನಮನ; 80 ಯುವಕರು ಭಾಗಿ

Twitter
Facebook
LinkedIn
WhatsApp
Murder title 2

ನವದೆಹಲಿ: ಇಂದು (ಜ.23) ನೇತಾಜಿ ಸುಭಾಷ್​ ಚಂದ್ರ ಬೋಸ್ (Netaji Subhash Chandra Bose) ​ ಅವರ ಜನ್ಮದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಂಸತ್ತಿನ (Parliment) ಸೆಂಟ್ರಲ್​ ಹಾಲ್​ನಲ್ಲಿ ಸುಭಾಷ್​ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಸಂಸತ್ತನ ಮಾಜಿ ಸದಸ್ಯರು ಮತ್ತು ಇನ್ನೀತರ ನಾಯಕರು ಗೌರವ ಸಲ್ಲಿಸಲಿದ್ದಾರೆ.

80 ಯುವಕರಿಂದ ನೇತಾಜಿ ಭಾವಚಿತ್ರಕ್ಕೆ ಗೌರವ ಪುಷ್ಪ ನಮನ

ಇಂದಿನ ಸೆಂಟ್ರಲ್​ ಹಾಲ್​ನ ಕಾರ್ಯಕ್ರಮದಲ್ಲಿ 80 ಯುವಕರು ಭಾಗವಹಿಸಿ ನೇತಾಜಿ ಅವರಿಗೆ ಗೌರವ ಸಲ್ಲಿಸಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ತಿಳಿಸಿದೆ. ಈ 80 ಜನ ಯುವಕರು ಸಚಿವಾಲಯಗಳು ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದವರಾಗಿದ್ದಾರೆ.

ಈ 80 ಯುವಜನರಲ್ಲಿ 31 ಮಂದಿ ನೇತಾಜಿಯವರ ಕೊಡುಗೆಯ ಕುರಿತು ಹಿಂದಿ, ಇಂಗ್ಲಿಷ್ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ ಭಾಷಣ ಮಾತನಾಡುತ್ತಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವರರನ್ನು ಕರ್ತವ್ಯ ಪಥ, ಯುದ್ಧ ಸ್ಮಾರಕ, ರಾಜ್ ಘಾಟ್, ರಾಷ್ಟ್ರೀಯ ಸ್ವಚ್ಛತಾ ಕೇಂದ್ರ ಮತ್ತು ಪ್ರಧಾನ ಮಂತ್ರಿ ಸಂಘಾಲಯಕ್ಕೆ ಕರೆದೊಯ್ಯಲಾಗುವುದರ ಜೊತೆಗೆ ಸ್ಮರಣಿಕೆಗಳನ್ನು ನೀಡಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ