ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಶಸ್ವಿ ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್ ; ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಯುವ ಆಟಗಾರ..!

Twitter
Facebook
LinkedIn
WhatsApp
ಯಶಸ್ವಿ ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್ ; ದ್ವಿಶತಕ ಬಾರಿ ಹೊಸ ದಾಖಲೆ ಬರೆದ ಯುವ ಆಟಗಾರ..!

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ (ind vs eng) ಎರಡನೇ ದಿನದಾಟದಲ್ಲಿ ಭಾರತದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ದ್ವಿಶತಕ ಬಾರಿಸಿದ್ದಾರೆ. 22 ವರ್ಷ 77 ದಿನ ವಯಸ್ಸಿನ ಜೈಸ್ವಾಲ್ 277 ಎಸೆತಗಳಲ್ಲಿ ಶತಕ ಬಾರಿಸಿ ಭಾರತ ತಂಡಕ್ಕೆ ಮೊದಲ ಇನಿಂಗ್ಸ್ನಲ್ಲಿ 350+ ಮೊತ್ತಕ್ಕೆ ಮುನ್ನಡೆಸಿದರು. ಅವರು ಈ ವೇಳೆ ಭಾರತ ಪರ ದ್ವಿ ಶತಕ ಬಾರಿಸಿದ ಕಿರಿಯ ಆಟಗಾರರ ಪಟ್ಟಿ ಸೇರಿಕೊಂಡರು.

ಭಾರತದ ಪರ ಮೊದಲ ಇನ್ನಿಂಗ್ಸ್​ನಲ್ಲಿ ಜೈಸ್ವಾಲ್ ಅತ್ಯುತ್ತಮ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಜೈಸ್ವಾಲ್ ನಂತರ ಭಾರತೀಯ ಬ್ಯಾಟರ್​ ಗಳಿಸಿದ ಎರಡನೇ ಗರಿಷ್ಠ ಸ್ಕೋರ್ ಕೇವಲ 32 ರನ್. ಚೊಚ್ಚಲ ಆಟಗಾರ ರಜತ್ ಪಾಟಿದಾರ್ ಆಕರ್ಷಕವಾಗಿ ಕಾಣುತ್ತಿದ್ದರು. ಜೈಸ್ವಾಲ್ ತಮ್ಮ ದ್ವಿಶತಕದ ಹಾದಿಯಲ್ಲಿ 18 ಬೌಂಡರಿ ಮತ್ತು 7 ಸಿಕ್ಸರ್​ಗಳನ್ನು ಬಾರಿಸದ್ದಾರೆ. ಇದಕ್ಕೂ ಮುನ್ನ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ 171 ರನ್ ಗಳಿಸಿದ್ದರು.

ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಮೂರನೇ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಜೈಸ್ವಾಲ್ ಪಾತ್ರರಾಗಿದ್ದಾರೆ. ಮಾಜಿ ಬ್ಯಾಟರ್​​ ವಿನೋದ್ ಕಾಂಬ್ಳಿ 1993 ರಲ್ಲಿ ವಾಂಖೆಡೆಯಲ್ಲಿ ಇಂಗ್ಲೆಂಡ್ ವಿರುದ್ಧ 21 ವರ್ಷ 32 ದಿನಗಳ ವಯಸ್ಸಿನಲ್ಲಿ ದ್ವಿಶತಕ ಬಾರಿಸಿ, ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುನಿಲ್ ಗವಾಸ್ಕರ್ 21 ವರ್ಷ 277 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಭಾರತದ ಎರಡನೇ ಕಿರಿಯ ಬ್ಯಾಟರ್ ಆಗಿದ್ದಾರೆ.

ಉದಯನಿಧಿ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಮದ್ರಾಸ್ ಹೈಕೋರ್ಟ್ ಅವರನ್ನು ತರಾಟೆಗೆ ತೆಗೆದುಕೊಂಡಿತು ಮತ್ತು ಯಾವುದೇ ವ್ಯಕ್ತಿಗೆ ವಿಭಜಕ ವಿಚಾರಗಳನ್ನು ಉತ್ತೇಜಿಸುವ ಅಥವಾ ಯಾವುದೇ ಸಿದ್ಧಾಂತವನ್ನು ರದ್ದುಗೊಳಿಸುವ ಹಕ್ಕು ಇಲ್ಲ ಎಂದು ಹೇಳಿತ್ತು.

ಸನಾತನ ಸಂಸ್ಥೆಯ ಕುರಿತು ಉದಯನಿಧಿ ಪ್ರತಿಕ್ರಿಯಿಸಿದ ಕಾರ್ಯಕ್ರಮವನ್ನು ಆಯೋಜಿಸಿದ್ದ ವ್ಯಕ್ತಿಗೂ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

9 ವರ್ಷ 140 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಪಾಕಿಸ್ತಾನದ ಜಾವೇದ್ ಮಿಯಾಂದಾದ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ನ ಸ್ಪಿನ್ನರ್ ಶೋಯೆಬ್ ಬಶೀರ್ ವಿರುದ್ಧ ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿ ಜೈಸ್ವಾಲ್​ ದ್ವಿಶತಕ ಸಾಧನೆ ಮಾಡಿದ್ದಾರೆ. ಪಂದ್ಯದ ೧೦2 ನೇ ಓವರ್ ನಲ್ಲಿ ಎರಡೂ ಶಾಟ್ ಗಳು ಸ್ವೀಪ್ ಆಗಿದ್ದವು. ಜೈಸ್ವಾಲ್ ಸ್ಪಿನ್ನರ್ ಬಶೀರ್ ವಿರುದ್ಧ ಆಕ್ರಮಣಕಾರಿಯಾಗಿ ಆಡಿದರು. ಜೈಸ್ವಾಲ್ ಅವರ ಇನ್ನಿಂಗ್ಸ್​ ಭಾರತ ತಂಡಕ್ಕೆ 350 ರನ್​ಗಳ ಮೊತ್ತ ದಾಟಲು ಸಹಾಯ ಮಾಡಿತು.

ಟೆಸ್ಟ್ ಪಂದ್ಯದ ಮೊದಲ ದಿನವೂ ಜೈಸ್ವಾಲ್ ಕ್ಲಾಸ್ ವಿಭಿನ್ನವಾಗಿದ್ದರು. ಬ್ಯಾಟರ್​ ವೇಗ ಮತ್ತು ಸ್ಪಿನ್ ಎರಡರ ವಿರುದ್ಧವೂ ಉತ್ತಮವಾಗಿ ಕಾಣಿಸಿಕೊಂಡರು. ಮೊದಲ ದಿನದುದ್ದಕ್ಕೂ ಶಿಸ್ತುಬದ್ಧವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ