ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತನ್ನ ನಾಲ್ಕು ವರ್ಷದ ಮಗುವನ್ನು ಕೊಲೆ ಮಾಡಿ ಬ್ಯಾಗ್ ನಲ್ಲಿ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿ ಸುಚನಾ ಸೇಠ್ ಅರೆಸ್ಟ್..!

Twitter
Facebook
LinkedIn
WhatsApp
ತನ್ನ ನಾಲ್ಕು ವರ್ಷದ ಮಗುವನ್ನು ಕೊಲೆ ಮಾಡಿ ಬ್ಯಾಗ್ ನಲ್ಲಿ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿ ಸುಚನಾ ಸೇಠ್ ಅರೆಸ್ಟ್..!

ಬೆಂಗಳೂರು ಜನವರಿ 09: ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಮಹಿಳಾ ಸಿಇಒ ಒಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ‘ಮೈಂಡ್‌ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ (39) ಬಂಧಿತ ಮಹಿಳೆ. ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದು, ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಉತ್ತರ ಗೋವಾದ ‘ಸೋಲ್ ಬ್ಯಾನಿಯನ್ ಗ್ರ್ಯಾಂಡ್’ ಹೋಟೆಲ್‌ಗೆ ಮಹಿಳೆ ಪುತ್ರನೊಂದಿಗೆ ಶನಿವಾರ ತೆರಳಿದ್ದಳು. ಸೋಮವಾರ ಕೊಠಡಿ ತೆರವುಗೊಳಿಸಿ ಏಕಾಂಗಿಯಾಗಿ ಹೊರಬಂದಿದ್ದಳು. ಬೆಂಗಳೂರಿಗೆ ಮರಳಲು ಟ್ಯಾಕ್ಸಿ ಬಾಡಿಗೆ ಕೇಳಿದ್ದಳು. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಬಾಲಕನ ಬಗ್ಗೆ ವಿಚಾರಿಸಿದ್ದರು. ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಬಿಟ್ಟು ಬಂದಿರುವುದಾಗಿ ಮಹಿಳೆ ಸಬೂಬು ನೀಡಿ ಹೊರಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಠಡಿ ಶುಚಿಗೊಳಿಸುವಾಗ ರಕ್ತದ ಕಲೆಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಹಿಳೆ ತೆರಳುತ್ತಿದ್ದ ಕಾರಿನ ಚಾಲಕನನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಕೊಂಕಣಿಯಲ್ಲಿ ಮಾತನಾಡಿದ ಪೊಲೀಸರು, ಘಟನೆ ಬಗ್ಗೆ ಚಾಲಕನಿಗೆ ವಿವರಿಸಿದ್ದಾರೆ. ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಡಲು ಸೂಚನೆ ನೀಡಿದ್ದಾರೆ.

ಚಾಲಕನಿಗೆ ಈ ಮಾಹಿತಿ ತಿಳಿದಾಗ ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಸಾಗುತ್ತಿತ್ತು. ಐಮಂಗಲ ಸಮೀಪದ ಪೊಲೀಸ್ ಠಾಣೆ ಗಮನಿಸಿದ ಚಾಲಕ, ನೇರವಾಗಿ ಠಾಣೆಗೆ ಕಾರು ತಂದಿದ್ದಾರೆ. ಕಾರಿನ ಡಿಕ್ಕಿ ತೆರೆದಾಗ ಸೂಟ್ ಕೇಸ್ ಬ್ಯಾಗಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕೆವಿಜಿ ಮೆಡಿಕಲ್ ಕಾಲೇಜಿನ ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ – ಡಾ.ರೇಣುಕಾ ಪ್ರಸಾದ್ ಗೆ ಸುಪ್ರೀಂ ಕೋರ್ಟ್‍ನಿಂದ ಜಾಮೀನು

ಸುಳ್ಯ ಜನವರಿ 09: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವದಿ ಜೈಲು ಶಿಕ್ಷೆಗೊಳಗಾಗಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಿನ್ಸಿಪಾಲ್‍ರಾಗಿದ್ದ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಡಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಇತರ 4 ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ ಅ.5ರಂದು ಜೀವಾವ ಶಿಕ್ಷೆ ವಿಸಿ ತೀರ್ಪು ನೀಡಿತ್ತು. ಅದೇ ದಿನ ಆಕಾಶಭವನ ಶರಣ್ ಹೊರತುಪಡಿಸಿ ಡಾ. ರೇಣುಕಾಪ್ರಸಾದ್ ಮತ್ತು ಇತರ ಆರೋಪಿಗಳ ಬಂಧನವಾಗಿತ್ತು.

ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ ಇತರ ಆರೋಪಿಗಳು ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ವಾದ ಪ್ರತಿವಾದ ನಡೆದಿತ್ತು. ಸುಪ್ರೀಂ ಕೋರ್ಟ್ ಡಾ.ರೇಣುಕಾಪ್ರಸಾದ್ ಹಾಗೂ ಇತರ ಆರೋಪಿಗಳಿಗೆ ಮೂರು ತಿಂಗಳ ಬಳಿಕ ಜ.8 ರಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ ಬಳಿಕ ಅವರು ಬಿಡುಗಡೆಯಾಗಲಿದ್ದು, ಮಂಗಳವಾರ ಅದು ನಡೆಯುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist