ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುದೀಪ್ ಹೊಸ ಚಿತ್ರದ ಮೂಲಕ ಕನ್ನಡಕ್ಕೆ ಬರ್ತಿದ್ದಾರೆ ಬಾಲಿವುಡ್ ನಟಿ ಸಿಮ್ರಾತ್ ಕೌರ್

Twitter
Facebook
LinkedIn
WhatsApp
Suspended 5

ಕಿಚ್ಚ ಸುದೀಪ್ (Kiccha Sudeep) ಅವರ ಹೊಸ ಸಿನಿಮಾದ ಬಗ್ಗೆ ವಾರಕ್ಕೊಂದು ವಿಷಯ ಹೊರ ಬರುತ್ತಿವೆ. ಸ್ವತಃ ಸುದೀಪ್ ಅವರೇ ತಿಳಿಸಿದಂತೆ ಇಂದು (ಜೂನ್ 1) ಹೊಸ ಸಿನಿಮಾದ ಟೀಸರ್ ರಿಲೀಸ್ ಆಗಬೇಕಿತ್ತು. ಆದರೆ, ಅದರ ಬಗ್ಗೆ ಯಾವುದೇ ಸದ್ದಿಲ್ಲ. ಈ ನಡುವೆ ಬಾಲಿವುಡ್ ಅಂಗಳದಿಂದ ಹೊಸ ಸುದ್ದಿಯೊಂದು ಬಂದಿದ್ದು, ಸುದೀಪ್ ಅವರ 46ನೇ ಚಿತ್ರಕ್ಕೆ ಬಾಲಿವುಡ್ (Bollywood) ನಟಿ ಸಿಮ್ರಾತ್ ಕೌರ್ (Simrat Kaur) ನಾಯಕಿಯಾಗಲಿದ್ದಾರಂತೆ.

163506504 289516119196312 600446988458677990 n

ಈ ಕುರಿತು ಅಧಿಕೃತವಾಗಿ ಸಿನಿಮಾ ತಂಡದಿಂದ ಯಾವುದೇ ಮಾಹಿತಿ ಬಾರದೇ ಇದ್ದರೂ, ಮಿಲ್ಕಿ ಬ್ಯೂಟಿ ಸಿಮ್ರಾತ್ ಕೌರ್ ಹೆಸರು ಮಾತ್ರ ಸಖತ್ ವೈರಲ್ ಆಗುತ್ತಿದೆ. ಮೂಲತಃ ಮುಂಬೈ ಮೂಲದವರಾದ ಸಿಮ್ರಾತ್, ತೆಲುಗು ಚಿತ್ರಗಳ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟವರು. ಆ ಮೇಲೆ ಬಾಲಿವುಡ್ ನಲ್ಲಿ ಮಿಂಚಿದ್ದಾರೆ. ಇದೀಗ ಸಿಮ್ರಾತ್ ನಟನೆಯ ಗದಾರ್ 2 ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.

ಅಂದಹಾಗೆ ಈ ಸಿನಿಮಾವನ್ನು ತಮಿಳು (Tamil) ನಿರ್ದೇಶಕರೊಬ್ಬರು ನಿರ್ದೇಶನ ಮಾಡಲಿದ್ದಾರಂತೆ. ಈ ಸಿನಿಮಾದ ಮೂಲಕ ಹೊಸ ಹುಡುಗ ವಿಜಯ್ (Vijay) ಎನ್ನುವವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿ ಇದೆ. ಇದು ಕೂಡ ಅಧಿಕೃತ ಹೇಳಿಕೆಯಲ್ಲ. ಸುದೀಪ್ ತಂಡದಿಂದ ಸಿಕ್ಕಿರುವ ಮಾಹಿತಿಯಾಗಿದೆ.

158642717 282386716575919 3422313097990495813 n

ಒಂದು ದಿನದಲ್ಲಿ ನಡೆಯುವ ಕಥೆಯು ಇದಾಗಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರವಂತೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಭಾರೀ ಬಜೆಟ್ ನ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ಕೊಡದೇ ಇದ್ದರೂ, ಸುದೀಪ್ ಅವರ ಆಪ್ತರಿಂದಲೇ ಇವಿಷ್ಟು ಮಾಹಿತಿ ಹೊರ ಬಂದಿವೆ.

ಸ್ವತಃ ಸುದೀಪ್ ಅವರೇ ಜೂನ್ 1ನೇ ತಾರೀಖಿನಂದು ಹೊಸ ಸಿನಿಮಾದ ಅಪ್ ಡೇಟ್ ನೀಡುವುದಾಗಿ ತಿಳಿಸಿದ್ದರು. ಹೊಸ ಸಿನಿಮಾದ ಟೀಸರ್ ಅನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದರು. ಅದಕ್ಕೂ ಆರು ದಿನ ಮುಂಚೆಯೇ ಮೊನ್ನೆ ಆ ಸಿನಿಮಾದ ಸಣ್ಣ ಸುಳಿವು ಕೊಟ್ಟಿದ್ದರು. ಆ ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕ್ ರಿಲೀಸ್ ಮಾಡುವ ಮೂಲಕ ತಿಳಿಸಿದ್ದರು.

ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು (Tamil) ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ಸುದೀಪ್ ಟೀಸರ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸಣ್ಣದೊಂದು ವಿಡಿಯೋ ರಿಲೀಸ್ ಮಾಡಿತ್ತು ತಮಿಳಿನ ಕಲೈಪುಲಿ ಎಸ್ ತನು (Kalaipuli S Tanu) ನಿರ್ಮಾಣ ಸಂಸ್ಥೆ. ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿದ್ದರು. ಸುದೀಪ್ ಅವರ ಗೆಟಪ್ ಜಭರದಸ್ತಾಗಿ ಇರಲಿದೆ ಎನ್ನುವ ಸುಳಿವನ್ನೂ ನೀಡಿದ್ದರು.

ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ‘ಬಿಲ್ಲ ರಂಗ ಬಾಷಾ’ (Billa Ranga Basha) ಮೊದಲು ಮೂಡಿ ಬರಲಿದೆ ಎನ್ನಲಾಗಿತ್ತು. ಆದರೆ, ಅದಕ್ಕೂ ಮುನ್ನ ವಿಜಯ್ ನಿರ್ದೇಶನದ ಚಿತ್ರ ತಯಾರಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

 
158607509 282386839909240 1565442864954648451 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist