ಶುಕ್ರವಾರ, ಮಾರ್ಚ್ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟಿ ಜಾಕ್ವೆಲಿನ್​ ಫೆರ್ನಾಂಡಿಸ್ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಸುಕೇಶ್​ ಚಂದ್ರಶೇಕರ್​ ಬೆದರಿಕೆ..!

Twitter
Facebook
LinkedIn
WhatsApp
ನಟಿ ಜಾಕ್ವೆಲಿನ್​ ಫೆರ್ನಾಂಡಿಸ್ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಸುಕೇಶ್​ ಚಂದ್ರಶೇಕರ್​ ಬೆದರಿಕೆ..!

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ರಕ್ಕಮ್ಮನ ಪಾತ್ರ ಮಾಡಿ ಕನ್ನಡದ ಪ್ರೇಕ್ಷಕರಿಗೆ ಪರಿಚಯಗೊಂಡ ನಟಿ ಜಾಕ್ವೆಲಿನ್​ ಫರ್ನಾಂಡಿಸ್​  ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ‘ರಾ.. ರಾ… ರಕ್ಕಮ್ಮ’ ಹಾಡು ಹಿಂದಿ ಪ್ರೇಕ್ಷಕರಿಗೂ ಇಷ್ಟ. ಈ ರಕ್ಕಮ್ಮನಿಗೆ ಈಗ ಸಂಕಷ್ಟ ಹೆಚ್ಚುತ್ತಿದೆ. 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​  ಕಡೆಯಿಂದ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಬೆದರಿಕೆ ಬಂದಿದೆ. ನಟಿಯ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಸುಕೇಶ್​ ಚಂದ್ರಶೇಕರ್​ ಬೆದರಿಕೆ ಹಾಕಿದ್ದಾನೆ.

ಸುಕೇಶ್​ ಚಂದ್ರಶೇಖರ್​ ಜೊತೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕ್ಲೋಸ್​ ಆಗಿದ್ದರು. ಆದರೆ ಅವರಿಬ್ಬರ ಸಂಬಂಧ ರಹಸ್ಯವಾಗಿ ಉಳಿದುಕೊಂಡಿತ್ತು. ಸುಕೇಶ್​ ಚಂದ್ರಶೇಖರ್​ ಬಂಧನದ ಬಳಿಕ ವಿಚಾರಣೆ ವೇಳೆ ಅನೇಕ ಸತ್ಯಗಳು ಹೊರಬಂದವು. ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ಸುಕೇಶ್​ ಚಂದ್ರಶೇಖರ್​ ಆಪ್ತವಾಗಿರುವ ಫೋಟೋಗಳು ಲೀಕ್​ ಆದವು. ಈಗ ವಿಡಿಯೋ ಲೀಕ್​ ಮಾಡುವುದಾಗಿ ಸುಕೇಶ್​ ಬೆದರಿಸಿದ್ದಾನೆ. ಅದಕ್ಕೆ ಕಾರಣ ಕೂಡ ಇದೆ.

ಕೆಲವೇ ದಿನಗಳ ಹಿಂದೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕೋರ್ಟ್​ನಲ್ಲಿ ಒಂದು ಮನವಿ ಸಲ್ಲಿಸಿದ್ದರು. ಸುಕೇಶ್​​ಗೆ ಸಂಬಂಧಿಸಿದ ಕೇಸ್​ನಲ್ಲಿ ತಮ್ಮ ಹೆಸರನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದರು. ಈ ವಿಷಯ ಗೊತ್ತಾದ ಬಳಿಕ ಸುಕೇಶ್​ ಚಂದ್ರಶೇಖರ್​ಗೆ ಕೋಪ ಬಂದಿದೆ. ಇಷ್ಟು ದಿನಗಳ ಕಾಲ ಜಾಕ್ವೆಲಿನ್​ ಬಗ್ಗೆ ಪ್ರೀತಿಯ ಮಾತುಗಳನ್ನು ಆಡುತ್ತಿದ್ದ ಆತ ಈಗ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದಾನೆ.

ತಮ್ಮ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ನಡುವೆ ವಿನಿಮಯ ಆದ ವಾಟ್ಸಪ್​ ಸಂದೇಶಗಳನ್ನು ಆತ ಲೀಕ್​ ಮಾಡಿದ್ದಾನೆ. ಇದು ಬರೀ ಟೀಸರ್​ ಮಾತ್ರ. ನೂರಾರು ಚಾಟ್​ಗಳು, ಖಾಸಗಿ ವಿಡಿಯೋಗಳು, ವಾಯ್ಸ್​ ರೆಕಾರ್ಡಿಂಗ್ಸ್​ ಇವೆ. ಇದನ್ನು ತನಿಖಾಧಿಕಾರಿಗಳಿಗೆ ನೀಡದ ಹೊರತು ಬೇರೆ ಯಾವುದೇ ಆಯ್ಕೆ ತನ್ನ ಬಳಿ ಈಗ ಉಳಿದಿಲ್ಲ ಎಂದು ಸುಕೇಶ್​ ಚಂದ್ರಶೇಖರ್​ ಹೇಳಿರುವುದಾಗಿ ವರದಿ ಆಗಿದೆ. ಒಂದು ವೇಳೆ ಆ ರೀತಿಯ ವಿಡಿಯೋಗಳು ಲೀಕ್​ ಆದರೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಕಿರಿಕಿರಿ ಹೆಚ್ಚಾಗಲಿದೆ. ನಟಿಗೆ ಈಗಾಗಲೇ ಆತ ಅನೇಕ ಲೆಟರ್​ಗಳನ್ನು ಬರೆಯುವ ಮೂಲಕ ಸುದ್ದಿ ಆಗಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist