ನಟಿ ಜಾಕ್ವೆಲಿನ್ ಬಣ್ಣ ಬಯಲು ಮಾಡುತ್ತೇನೆ ಎಂದು ಬೆದರಿಕೆ ಪತ್ರ ಬರೆದ ಸುಕೇಶ್..!
ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್, ಪ್ರತಿ ಬಾರಿಯೂ ಜೈಲಿನಿಂದ ಜಾಕ್ವೆಲಿನ್ ಗೆ ಪ್ರೇಮ ಪತ್ರ ಕಳುಹಿಸುತ್ತಿದ್ದರು. ಇದೇ ಮೊದಲ ಬಾರಿಗೆ ಬೆದರಿಕೆಯ ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ತಿಳಿಸಿದ್ದಾರೆ. ತಾವು ಕೊಟ್ಟಿರುವ ಗಿಫ್ಟ್ ಅನ್ನು ಸಾಕ್ಷಿ ಸಮೇತ ತಿಳಿಸುವುದಾಗಿ ಹೇಳಿದ್ಧಾರೆ ಎಂದು ಹೇಳಲಾಗುತ್ತಿದೆ.
ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.
ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.
ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.
ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್
ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ. ಜೊತೆಗೆ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿಯನ್ನೂ ನಿರಾಕರಿಸಿದೆ.
ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.
ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಕೂಡ ಆಗಿತ್ತು.
ತ್ರಿಷಾ ಬಗೆಗಿನ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು. ಈಗ ಕೋರ್ಟ್ ಕೂಡ ದಂಡವಿಧಿಸಿದೆ.