ಸುಳ್ಯ ಫೆಬ್ರವರಿ 07: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬ ಅದೇ ಆಸ್ಪತ್ರೆಯ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟ ಸುಳ್ಯದಲ್ಲಿ ಸಂಭವಿಸಿದೆ.
ಸುಳ್ಯ : ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ...!-
Twitter
Facebook
LinkedIn
WhatsApp
ಮೃತರನ್ನು ಪುತ್ತೂರು ತಿಂಗಳಾಡಿಯ ವಸಂತ ಎಂದು ಗುರುತಿಸಲಾಗಿದೆ. ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದ ಇವರು, ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ರೋಗಿಯಾಗಿದ್ದರು ಎಂದು ತಿಳಿದುಬಂದಿದೆ.