ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ- ಆರೋಪಿಯ ಬಂಧನ

Twitter
Facebook
LinkedIn
WhatsApp
20

ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತೊಂದು ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಬೆಳಗಾವಿ; ಗಂಡ-ಹೆಂಡತಿಯ ಬರ್ಬರ ಕೊಲೆ!

ಚಿಕ್ಕೋಡಿ: ಬೆಳಗಾವಿಯಲ್ಲಿ (Belagavi) ಮತ್ತೊಂದು ಡಬಲ್ ಮರ್ಡರ್ (Double Murder) ಪ್ರಕರಣ ಬೆಳಕಿಗೆ ಬಂದಿದ್ದು, ಪತಿ-ಪತ್ನಿಯ (Husband and Wife) ಭೀಕರ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ. 

ಗಜೇಂದ್ರ ವಣ್ಣೂರೆ 60 ದ್ರಾಕ್ಷಾಯಿಣಿ ವಣ್ಣೂರೆ 48 ಹತ್ಯೇಗಿಡಾದ ದಂಪತಿಯಾಗಿದ್ದು (Couple), ಸ್ವಂತ ಮನೆಯಲ್ಲೇ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಜೂನ್​ 7ರ ತಡರಾತ್ರಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆಯಿಂದ ಮನೆ ಬಾಗಿಲು ತೆರೆಯದ ಹಿನ್ನಲೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮನೆಗೆ ಬಂದು ಬಾಗಿಲು ತೆಗೆದು ನೋಡಿದಾಗ ಜೋಡಿ ಕೊಲೆ ಬೆಳಕಿಗೆ ಬಂದಿದೆ. 

ಯಮಕಣಮರಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ