ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ : ಜಾಗದ ವಿಚಾರಕ್ಕೆ ಗಲಾಟೆ ;ತಂದೆ ತಾಯಿಯ ಮೇಲೆಯೆ ಹಲ್ಲೆ ನಡೆಸಲು ಮುಂದಾದ ಮಗ..!

Twitter
Facebook
LinkedIn
WhatsApp
ಸುಳ್ಯ : ಜಾಗದ ವಿಚಾರಕ್ಕೆ ಗಲಾಟೆ ;ತಂದೆ ತಾಯಿಯ ಮೇಲೆಯೆ ಹಲ್ಲೆ ನಡೆಸಲು ಮುಂದಾದ ಮಗ..!

ಸುಳ್ಯ ನವೆಂಬರ್ 21: ತಂದೆ ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ದೇವಿ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು :ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು..!

ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ ಘಟನೆ ಸಂಭವಿಸಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್‌ (30) ಮೃತ ದುರ್ದೈವಿಯಾಗಿದ್ದಾನೆ. ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ