ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಷ್ ಗೆ ಬಿಜೆಪಿಯಿಂದ ಶಾಕ್; ಸೈಲೆಂಟ್ ಆಗ್ತಾರಾ ಸುಮಲತಾ.?

Twitter
Facebook
LinkedIn
WhatsApp
ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಷ್ ಗೆ ಬಿಜೆಪಿಯಿಂದ ಶಾಕ್; ಸೈಲೆಂಟ್ ಆಗ್ತಾರಾ ಸುಮಲತಾ.?

ಮಂಡ್ಯ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕನಸು ಕಂಡಿದ್ದ ಸಂಸದೆ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ಕೈತಪ್ಪಿದೆ. ಮೈತ್ರಿ ಪಕ್ಷವಾದ ಜೆಡಿಎಸ್​ಗೆ ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಸಂಸದೆ ಸುಮಲತಾ ಅವರಿಗೆ ಕ್ಷೇತ್ರವಿಲ್ಲದೆ ಅತಂತ್ರರಾಗಿದ್ದಾರೆ. ಅಲ್ಲದೇ ಅವರ ಮುಂದಿನ ನಡೆ ಏನು? ಎಂಬುದು ಇದೀಗ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ‌. ಹಾಗಿದ್ರೆ ಸುಮಲತಾ ಅವರ ಮುಂದಿನ ನಡೆ ಏನು? ಎಂಬುದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಹೌದು, ಸಾಕಷ್ಟು ಗೊಂದಲವಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರಕ್ಕೆ ಕಡೆಗೂ ಬಿಜೆಪಿ ವರಿಷ್ಠರು ಇತಿಶ್ರೀ ಹಾಡಿದ್ದಾರೆ‌‌. ಜೆಡಿಎಸ್​ನ ಭದ್ರಕೋಟೆ ಎನಿಸಿರೋ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಉಳಿದ ಹಾಸನ, ಕೋಲಾರ ಹಾಗು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ‌. ಬೆಂಗಳೂರಿನಲ್ಲಿ ಈ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಪಕ್ಷದ ಲೋಕಸಭಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮೈತ್ರಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.

ಇನ್ನು ಮಂಡ್ಯ ಕ್ಷೇತ್ರದಿಂದಲೇ ತನ್ನ ಸ್ಪರ್ಧೆ, ಮಂಡ್ಯ ಕ್ಷೇತ್ರದ ಟಿಕೆಟ್​ ಇನ್ನೂ ಫೈನಲ್ ಆಗಿಲ್ಲ. ಬಿಜೆಪಿ ವರಿಷ್ಠರು ತನಗೆ ಮಂಡ್ಯದ ಟಿಕೆಟ್​ ಕೊಡಲಿದ್ದಾರೆ ಎನ್ನುವ ಭರವಸೆಯಲ್ಲಿದ್ದ ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್​ನ ಈ ನಿರ್ಧಾರ ಶಾಕ್ ನೀಡಿದೆ‌. ಇದರಿಂದಾಗಿ ಸಂಸದೆ ಸುಮಲತಾ ಇದೀಗ ಕ್ಷೇತ್ರವಿಲ್ಲದೆ ಅತಂತ್ರರಾಗಿದ್ದಾರೆ. ಅಲ್ಲದೆ ಹೈ ಕಮಾಂಡ್​ನ ಈ ನಿರ್ಧಾರದ ಬಳಿಕ ಸಂಸದೆ ಸುಮಲತಾ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ. ಆದ್ರೆ ಸಂಸದೆ ಸುಮಲತಾ ಬೆಂಬಲಿಗರು ಮಾತ್ರ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಡ್ಯದಲ್ಲಿ ನಾಳೆ ಸಭೆ ಕರೆದು, ಚರ್ಚೆ ಮಾಡಿ ಸಂಸದೆ ಸುಮಲತಾ ಅವರು ಮತ್ತೆ ಪಕ್ಷೇತರವಾಗಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಲು ಹೇಳುವುದಾಗಿ ತಿಳಿಸಿದ್ದಾರೆ.

ಒಟ್ಟಾರೆ ಮಂಡ್ಯ ಕ್ಷೇತ್ರ ಇದೀಗ ಜೆಡಿಎಸ್ ಪಕ್ಷದ ಪಾಲಾಗಿರುವುದರಿಂದ ಸಂಸದೆ ಸುಮಲತಾಗೆ ಕ್ಷೇತ್ರವಿಲ್ಲದಂತಾಗಿದೆ. ಇದರ ನಡುವೆ ಬಿಜೆಪಿ ವರಿಷ್ಠರು ಸುಮಲತಾಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡಲಿದೆ ಎಂಬ ಭರವಸೆ ನೀಡಿದೆಯಾದ್ರೂ ಸಂಸದೆ ಸುಮಲತಾ ಮಾತ್ರ ತಮ್ಮ ಮುಂದಿನ ನಿರ್ಧಾರ ಏನು ಎಂದು ತಿಳಿಸಿಲ್ಲ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಂಸದೆ ಸುಮಲತಾ ಮತ್ತೆ ಪಕ್ಷೇತರವಾಗಿ‌ ನಿಲ್ತಾರಾ? ಇಲ್ಲ ಮೈತ್ರಿ ಅಭ್ಯರ್ಥಿ ಒಪ್ಪಿಕೊಂಡು ಮೈತ್ರಿ ಗೆಲುವಿಗೆ ಶ್ರಮಿಸ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ