ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Sumalatha Ambareesh: ಮೈತ್ರಿ ಪಾದಯಾತ್ರೆಯಲ್ಲಿ ಕಾಣಿಸಿಕೊಳ್ಳದ ಸುಮಲತಾ ಅಂಬರೀಶ್!

Twitter
Facebook
LinkedIn
WhatsApp
Sumalatha Ambareesh

ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಪಾದಯಾತ್ರೆಯಲ್ಲಿ ಗೈರು. ಸುಮಲತಾ ಅವರಿಗೆ ಬಿಜೆಪಿ ಆಹ್ವಾನ ನೀಡಿತ್ತೇ ಅಥವಾ ನಿರ್ಲಕ್ಷ್ಯ ತೋರಿತೇ?

ಇದೀಗ ಮಂಡ್ಯದಲ್ಲಿ ಪಾದಯಾತ್ರೆ ಸಾಗುತ್ತಿದ್ದು, ಈ ವೇಳೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಗೈರು ಮಾತ್ರ ಎದ್ದು ಕಾಣುತ್ತಿದೆ. ಬಿಜೆಪಿಗೆ ಸೇರ್ಪಡೆಯಾಗಿರುವ ಸುಮಲತಾ ಅಂಬರೀಶ್ (Sumalatha Ambareesh) ಮೈತ್ರಿ ಪಾದಯಾತ್ರೆಯಲ್ಲಿ ಮಾತ್ರ ಕಾಣಿಸಿಕೊಂಡಿಲ್ಲ. 

ಮಂಡ್ಯ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು, ಎಚ್‌ಡಿ ಕುಮಾರಸ್ವಾಮಿ ಅವರಿಗಾಗಿ ಕ್ಷೇತ್ರ ತ್ಯಾಗವನ್ನು ಮಾಡಿದ್ದರು. ಆದರೆ ಇದೀಗ ಅವರ ಸಕ್ರಿಯ ಭಾಗಿದಾರಿಕೆ ಇಲ್ಲದೆ ಇರುವುದು ಕುತೂಹಲಕ್ಕೆ ಕಾರಣವಾಗಿದೆ. 

ಇದು ಸಾಕಷ್ಟು ಭಿನ್ನಮತಕ್ಕೂ ಕಾರಣವಾಗಿತ್ತು. ಬಳಿಕ ಕುಮಾರಸ್ವಾಮಿ ಸುಮಲತಾ ಅವರ ಮನೆಗೆ ತೆರಳಿ ಬೆಂಬಲ ನೀಡುವಂತೆ ಹೇಳಿದ್ದರು. ಆದರೆ ಸುಮಲತಾ ಮಾತ್ರ ಹೆಚ್​ಡಿಕೆ ಪರ ಪ್ರಚಾರಕ್ಕೆ ಹೋಗಿರಲಿಲ್ಲ. ಇದೀಗ ಹಗರಣಗಳಿಂದ ಕಾಂಗ್ರೆಸ್​ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಜೆಡಿಎಸ್​ ಪಾದಯಾತ್ರೆಗೆ ಸುಮಲತಾ ಮಾತ್ರ ದೂರ ಉಳಿದಿದ್ದಾರೆ.

ಮುಡಾದಲ್ಲಿ ಸೈಟ್‌ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್‌ನಿಂದ ಮೈಸೂರು ಚಲೋಗೆ ರಣಕಹಳೆ ಮೊಳಗಿಸಿ ಇಂದು ಆರನೇ ದಿನಕ್ಕೆ ಕಾಲಿಟ್ಟಿತು. ಮಂಡ್ಯದಿಂದ ಪಾದಯಾತ್ರೆ ಶುರುವಾಗಿದ್ದೇ ತಡ. ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಎಂಟ್ರಿ ಕೊಟ್ಟರು. ಆದರೆ ಮಂಡ್ಯ ಜಿಲ್ಲೆಯಲ್ಲಿ 2ನೇ ದಿನದ ಪಾದಯಾತ್ರೆಯಿಂದಲೂ ಸುಮಲತಾ ಅವರು ದೂರ ಉಳಿದಿದ್ದಾರೆ. ನಿನ್ನೆ ಕೂಡ ಪಾದಯಾತ್ರೆ ನಡೆದರೂ ಅವರು ಪಾಲ್ಗೊಂಡಿಲ್ಲ. ಇಂದು ಕೂಡ ಮಂಡ್ಯದಲ್ಲೇ ಪಾದಯಾತ್ರೆ ನಡೆದಿದ್ದರೂ ಸುಮಲತಾ ಭಾಗಿಯಾಗಿಲ್ಲ.

ಕಳೆದ ಲೋಕಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು. ಈ ಸೋಲಿನ ಬಳಿಕ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಮಲತಾ ಅಂಬರೀಶ್ ನಡುವೆ ಸಾಕಷ್ಟು ಬಾರಿ ವಾಕ್ಸಮರ ನಡೆದಿತ್ತು. ಈ ನಡುವೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು. ಆದರೆ ಯಾವತ್ತು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಸುಮಲತಾ ರಾಜಕೀಯ ಜೀವನಕ್ಕೆ ಅಡೆ ತಡೆ ಉಂಟಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ದೋಸ್ತಿಗಳ ಪಾದಯಾತ್ರೆ ಅಬ್ಬರದಿಂದ ಸಾಗುತ್ತಿದೆ. ಹೀಗಿರುವಾಗ ಸುಮಲತಾ ಅಂಬರೀಶ್ ಅವರೂ ಪಾದಯಾತ್ರೆಯಲ್ಲಿ ಭಾಗಿಯಾವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇತ್ತು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಇಂದು ಪ್ರೀತಂ ಗೌಡ ಭಾಗಿಯಾಗಿರಲ್ಲಿ. ನಿನ್ನೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗವಹಿಸಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಮತ್ತು ಪ್ರೀತಂಗೌಡ ಬೆಂಬಲಿಗರ ನಡುವೆ ಸಂಘರ್ಷ ನಡೆದಿತ್ತು. ಪ್ರೀತಂ ಗೌಡ ಪಾಲ್ಗೊಳ್ಳುವಿಕೆಗೆ ಜೆಡಿಎಸ್ ಬಲವಾದ ಆಕ್ಷೇಪ ಸಲ್ಲಿಸಿತ್ತು.

ಹಾದಿಯುದ್ದಕ್ಕೂ ಪ್ರಿತಂ ಪರ ಘೋಷಣೆ ಮೊಳಗಿದ್ದೇ ತಡ, ಜೆಡಿಎಸ್​ ಕಾರ್ಯಕರ್ತರು ಅವರನ್ನ ತಡೆಯೋಕೆ ಮುಂದಾಗಿದ್ದರು. ಆಗ ವಾಗ್ವಾದವೇ ನಡೆದಿದ್ದಲ್ಲದೇ ತಳ್ಳಾಟ, ನೂಕಾಟವೂ ಆಗಿತ್ತು. ದೋಸ್ತಿ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಒಂದಷ್ಟು ಕಿಡಿಗೇಡಿಗಳು ಬಿಜೆಪಿ ಜೆಡಿಎಸ್ ಸಂಬಂಧ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ನಾವು ಮತ್ತು ಬಿಜೆಪಿ ಒಟ್ಟಾಗಿದ್ದೇವೆ ಅನ್ನೋ ಮೂಲಕ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಚರ್ಚೆಗೆ ಗ್ರಾಸವಾಗುತ್ತಿರುವ ಸುಮಲತಾ ಅಂಬರೀಶ್ ನಡೆ

ಸುಮಲತಾ ಅಂಬರೀಶ್ ಅವರ ಈ ನಡೆ ಚರ್ಚೆಗೆ ಗ್ರಾಸವಾಗುತ್ತಿದೆ. ಪಾದಯಾತ್ರೆಯಲ್ಲಿ ಅವರು ಯಾವ ಉದ್ದೇಶದಿಂದ ಭಾಗಿಯಾಗುತ್ತಿಲ್ಲ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಷ್ಟೇ ಅಲ್ಲದೆ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ನಿಟ್ಟಿನಲ್ಲಿಯೂ ಮಂಡ್ಯ ರಾಜಕೀಯದಲ್ಲಿ ಚರ್ಚೆಗಳು ನಡೆಯುತ್ತಿವೆ. 

ಮಂಡ್ಯದಲ್ಲಿ ಬಿಜೆಪಿ ಒಂದು ಕಡೆಯಲ್ಲಿ ತಮ್ಮ ನೆಲೆ ವಿಸ್ತರಣೆ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದು ಕಡೆಯಲ್ಲಿ ಜೆಡಿಎಸ್‌ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. 

ಮಂಡ್ಯ ಜೆಡಿಎಸ್ ಭದ್ರಕೋಟೆ ಆಗಿರುವ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲೇ ಜನರು ಅಲ್ಲಿ ಸೇರುವ ಸಾಧ್ಯತೆಗಳು ಇವೆ. ಹಾಗಿದ್ದರೂ ಸುಮಮತಾ ಅಂಬರೀಶ್ ಗೈರು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಲಿದೆ.

ಶನಿವಾರ ಮೈಸೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಸಮಾವೇಶದಲ್ಲಾದರೂ ಸುಮಲತಾ ಅಂಬರೀಶ್ ಅವರು ಭಾಗಿಯಾಗ್ತಾರಾ? ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.

ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಸುಮಲತಾ ಅವರು ಮಂಡ್ಯ ಕ್ಷೇತ್ರವನ್ನು ಬಿಜೆಪಿ – ಜೆಡಿಎಸ್ ಮೈತ್ರಿಗಾಗಿ ಬಿಟ್ಟುಕೊಟ್ಟಿದ್ದರು. ಕೊನೆಯ ಕ್ಷಣದವರೆಗೂ ಬಿಜೆಪಿ ಟಿಕೆಟಿಗಾಗಿ ಪ್ರಯತ್ನಿಸುತ್ತಿದ್ದ ಸುಮಲತಾ, ಬಿಜೆಪಿಯ ಕೇಂದ್ರ ನಾಯಕರ ಒತ್ತಡಕ್ಕೆ ಮಣಿದು, ಹಿಂದಕ್ಕೆ ಸರಿದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ