ಗ್ರೀಷ್ಮಾಳ ಕಾಟಕ್ಕೆ ಬೇಸತ್ತ ಸಹಕೈದಿಗಳು; ಬೇರೊಂದು ಜೈಲಿಗೆ ಸ್ಥಳಾಂತರ!
ತಿರುವನಂತಪುರ: ಕೇರಳದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಶರೋನ್ ರಾಜ್ ಕೊಲೆ ಪ್ರಕರಣಲ್ಲಿ ಪ್ರಮುಖ ಆರೋಪಿಯಾಗಿರುವ ಗ್ರೀಷ್ಮಾಳನ್ನು ಬೇರೊಂದು ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಸಹ ಕೈದಿಗಳು ನೀಡಿದ ದೂರಿನ ಆಧಾರದ ಮೇಲೆ ಆಕೆಯನ್ನು ಸ್ಥಳಾಂತರಿಸಲಾಗಿದೆ.
ಆರೋಪಿ ಗ್ರೀಷ್ಮಾ, ಬಂಧನವಾದಾಗಿನಿಂದ ಅಟ್ಟಕುಲಂಗರಾ ಮಹಿಳಾ ಜೈಲಿನಲ್ಲಿದ್ದಳು. ಇದೀಗ ಆಕೆಯನ್ನು ಮಾವೆಲಿಕ್ಕರ ವಿಶೇಷ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಗ್ರೀಷ್ಮಾ ಜತೆ ಇಬ್ಬರು ಕೈದಿಗಳನ್ನೂ ಕೂಡ ಸ್ಥಳಾಂತರ ಮಾಡಲಾಗಿದೆ. ಜೈಲಿನಲ್ಲಿ ಗ್ರೀಷ್ಮಾಳ ಕಾಟವನ್ನು ಸಹಿಸಲಾರದೇ ಸಹಕೈದಿಗಳು ದೂರು ನೀಡಿದ್ದರು ಎಂದು ತಿಳಿದುಬಂದಿದೆ. ಬಂಧನದ ಆರಂಭದಲ್ಲೇ ಪೊಲೀಸ್ ಠಾಣೆಯಲ್ಲೇ ವಿಷ ಕುಡಿದು ಈಕೆ ಭಾರೀ ಹೈಡ್ರಾಮ ಮಾಡಿದ್ದಳು. ಇನ್ನು ಈಕೆಯನ್ನು ಜಾಮೀನಿನ ಬಿಡುಗಡೆ ಮಾಡುವುದು ತುಂಬಾ ಅಪಾಯಕಾರಿ ಎಂದು ನ್ಯಾಯಾಲಯವೇ ಅಭಿಪ್ರಾಯಪಟ್ಟಿದೆ.
ಏನಿದು ಪ್ರಕರಣ?
ಕೇರಳದ ತಿರುವನಂತಪುರದಲ್ಲಿ ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ಅ.31 ರಂದು ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಳು. ಅ. 14ರಂದು ಶರೋನ್ ರಾಜ್ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟನು. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.
ಪ್ರಯತ್ನಗಳು ವಿಫಲವಾದ್ದರಿಂದ ಕೊಲೆ
ಗ್ರೀಷ್ಮಾ 2022ರ ಮಾರ್ಚ್ 4ರಂದು ಯೋಧನೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಬಳಿಕ ಶರೂನ್ ಜತೆ ತನ್ನ ಸಂಬಂಧವನ್ನು ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೂನ್ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ. ಬಳಿಕ ನವೆಂಬರ್‌ನಲ್ಲಿ ಶರೋನ್ ಅವರ ಮನೆಯಲ್ಲಿ ಮತ್ತು ನಂತರ ವೆಟ್ಟುಕಾಡ್ ಚರ್ಚ್‌ನಲ್ಲಿ ವಿವಾಹವಾದರು. ಇದಾದ ಬಳಿಕ ಥ್ರಿಪ್ಪರಪುವಿನಲ್ಲಿ ರೂಮ್ ಬುಕ್ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದರು. ಯೋಧನ ಜತೆ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೂನ್ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್ ಬ್ರೇಕಪ್ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.