ಸುಂದರಿಯ ಹಾಟ್ ಅವತಾರಕ್ಕೆ ನೆಟ್ಟಿಗರ ಖಡಕ್ ಕ್ಲಾಸ್!!
ಕನ್ನಡದ ‘ಕಿನ್ನರಿ’ ಸೀರಿಯಲ್ ಮೂಲಕ ಸ್ಯಾಂಡಲ್‌ವುಡ್‌ಗೆ ಲಗ್ಗೆಯಿಟ್ಟ ಭೂಮಿ ಶೆಟ್ಟಿ ಅವರು ಬಿಗ್ ಬಾಸ್ (Bigg Boss House) ಮನೆಗೆ ಕಾಲಿಟ್ಟರು. ಶೈನ್ ಶೆಟ್ಟಿ, ದೀಪಿಕಾ ದಾಸ್, ಚಂದನಾ ಅನಂತಕೃಷ್ಣ ಇದ್ದ ಸೀಸನ್‌ನಲ್ಲಿ ತಾವು ಒಬ್ಬ ಗಟ್ಟಿ ಸ್ಪರ್ಧಿಯಾಗಿ ಕಾಣಿಸಿಕೊಂಡರು. ಈ ಕುಂದಾಪುರದ ಶೆಟ್ರ ಹುಡುಗಿಗೆ ಅಪಾರ ಅಭಿಮಾನಿಗಳ ಬಳಗವಿದೆ.
‘ಇಕ್ಕಟ್’ (Ikkat)ಎಂಬ ಸಿನಿಮಾದಲ್ಲಿ ಲಾಕ್‌ಡೌನ್ ಕುರಿತ ನೈಜ ಕಥೆಯಲ್ಲಿ ಭೂಮಿ ಶೆಟ್ಟಿ ಸದ್ದು ಮಾಡಿದ್ದರು. ಮೊದಲ ಸಿನಿಮಾದಲ್ಲೇ ತನ್ನ ಪ್ರತಿಭೆ ಎಂತಹದ್ದು ಎಂದು ನಟಿ ಸಾಬೀತುಪಡಿಸಿದ್ದರು. ಹೊಸ ಬಗೆಯ ಪಾತ್ರಗಳನ್ನ ನಟಿ ಎದುರು ನೋಡ್ತಿದ್ದಾರೆ. ಅದಕ್ಕಾಗಿ ಸೂಕ್ತ ತಯಾರಿ ಕೂಡ ಮಾಡ್ತಿದ್ದಾರೆ. ಜಿಮ್, ವರ್ಕೌಟ್ ಅಂತಾ ಭೂಮಿ ಬೆವರಿಳಿಸುತ್ತಿದ್ದಾರೆ.
ಇತ್ತೀಚಿಗೆ ಭೂಮಿ ಶೆಟ್ಟಿ ಎದೆ ಕಾಣುವ ಹಾಗೇ ಬಟ್ಟೆ ಧರಿಸಿದ್ದರು. ನಟಿಯ ಹಾಟ್ ಲುಕ್ ನೋಡಿ ಸರಿಯಾಗಿ ಬಟ್ಟೆ ಹಾಕಮ್ಮ ಅಂತಾ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾಫಿ ಬಣ್ಣದ ಟಾಪ್‌ಗೆ & ಸ್ಕರ್ಟ್ ಧರಿಸಿ ಬಂದ ಭೂಮಿ ಕಪ್ಪು ಬಣ್ಣ ಚಸ್ಮಾ ಧರಿಸಿದ್ದರು. ನಟಿಯ ಈ ಲುಕ್, ಪಡ್ಡೆಹುಡುಗರ ಕಣ್ಣು ಕುಕ್ಕುವಂತಿದೆ. ಹಾಗಾಗಿ ನಿಮಗೆ ಮಾನ ಮರ್ಯಾದೆ ಏನು ಇಲ್ವಾ? ಪಬ್ಲಿಕ್ ಪ್ಲೇಸ್‌ನಲ್ಲಿ ಹೀಗೆ ಬರೋದಾ ಅಂತಾ ನಟಿಗೆ ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ನಟಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.
ನಾನಿ 30ನೇ ಸಿನಿಮಾಗೆ ಟೈಟಲ್ ಫಿಕ್ಸ್: ಮೃಣಾಲ್ ನಾಯಕಿ
ದಸರಾ ಸಿನಿಮಾ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ಸಣ್ಣದೊಂದು ಝಲಕ್ ಮೂಲಕ ಚಿತ್ರತಂಡ ಶೀರ್ಷಿಕೆಯನ್ನು ಘೋಷಿಸಿದೆ. ನಾನಿ 30 ಚಿತ್ರಕ್ಕೆ ‘ಹಾಯ್ ನಾನ್ನ’ ಎಂಬ ಶೀರ್ಷಿಕೆಯನ್ನು ಇಡಲಾಗಿದೆ.
ಹಾಯ್ ನಾನ್ನ ಎಂಬ ತೆಲುಗು ಸಾಲಿನ ಅರ್ಥ ‘ಹಾಯ್ ಅಪ್ಪ’ ಎಂಬುದಾಗಿದೆ. ಸೌತ್ ಭಾಷೆಯಲ್ಲಿ ಒಂದೇ ಟೈಟಲ್ ಇರಲಿ ಎಂಬ ಉದ್ದೇಶದಿಂದ ಚಿತ್ರತಂಡ ಕನ್ನಡ, ತಮಿಳು, ಮಲಯಾಳಂ ಭಾಷೆಯಲ್ಲಿಯೂ ಹಾಯ್ ನಾನ್ನ ಎಂದೇ ಶೀರ್ಷಿಕೆ ಫಿಕ್ಸ್ ಮಾಡಿದೆ.
ಮೆಗಾಸ್ಟಾರ್ ಚಿರಂಜೀವಿ ಆಶೀರ್ವಾದೊಂದಿಗೆ ಕಿಕ್ ಸ್ಟಾರ್ಟ್ ಸಿಕ್ಕಿರುವ ನಾನಿ 30ನೇ ಸಿನಿಮಾವನ್ನು, ಶೌರ್ಯುವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟರ್ ಟೇನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂದವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.
ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.