ಶನಿವಾರ, ನವೆಂಬರ್ 23, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೂರೈಕೆ ಕುಸಿತ ; ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ!!

Twitter
Facebook
LinkedIn
WhatsApp
ಪೂರೈಕೆ ಕುಸಿತ ; ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ!!

ಬೆಂಗಳೂರು(ಅ.11): ಟೊಮೆಟೋ ಬೆಲೆ ಏರಿಳಿತದ ಬಳಿಕ ಇದೀಗ ಈರುಳ್ಳಿ ಬೆಲೆ ಹೆಚ್ಚಳದ ಆತಂಕ ಎದುರಾಗಿದೆ. ಏಕೆಂದರೆ, ರಾಜ್ಯದಲ್ಲಿ ಈರುಳ್ಳಿ ಬೆಳೆಯುವ ಜಿಲ್ಲೆಗಳಿಂದ ಪೂರೈಕೆ ಬಹುತೇಕ ಕುಸಿದಿದೆ. ಆದರೆ, ಕೇಂದ್ರ ಸರ್ಕಾರ ನಾಫೆಡ್‌ (ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ) ಮೂಲಕ ಮಹಾರಾಷ್ಟ್ರದ ಈರುಳ್ಳಿಯನ್ನು ರಾಜ್ಯಕ್ಕೆ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣದಲ್ಲಿದೆ. ಒಂದು ವೇಳೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಧಾರಣೆಯಲ್ಲಿ ಏರು-ಪೇರಾದರೆ ಅಥವಾ ಪೂರೈಕೆ ಕಡಿಮೆಯಾದರೆ ರಾಜ್ಯದಲ್ಲಿ ಈರುಳ್ಳಿ ಗಗನ ಮುಟ್ಟುವುದು ಖಚಿತ.

ಕಳೆದೆರಡು ವರ್ಷ ಅತಿವೃಷ್ಟಿ, ರೋಗ ಬಾಧೆಯಿಂದ ಈರುಳ್ಳಿ ನಷ್ಟವಾಗಿದ್ದರೆ, ಈ ಬಾರಿ ಅನಾವೃಷ್ಟಿ ಬಿತ್ತನೆ ಪ್ರಮಾಣವನ್ನು ಕುಗ್ಗಿಸಿದೆ. ಹೀಗಾಗಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಈ ವೇಳೆಗೆ ಬರಬೇಕಿದ್ದಷ್ಟು ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಪರಿಣಾಮ, ಯಶವಂತಪುರ, ದಾಸನಪುರ ಎಪಿಎಂಸಿಯಲ್ಲಿ ಕ್ವಿಂಟಲ್‌ಗೆ ₹ 1000 ದಿಂದ ₹ 3000 ಬೆಲೆಯಿದೆ. ಕಳೆದ ಹದಿನೈದು ದಿನಗಳ ಹಿಂದೆ ಚಿಲ್ಲರೆ ಮಾರುಕಟ್ಟೆಯಲ್ಲಿ ₹ 15-20 ಕೆಜಿಗೆ ಸಿಗುತ್ತಿದ್ದ ಈರುಳ್ಳಿ ಇದೀಗ ಕೆಜಿಗೆ ₹ 40 – ₹ 45 ವರೆಗೂ ಮಾರಾಟವಾಗುತ್ತಿದೆ.

ಕಡಿಮೆ ಬೆಳೆಯಿಂದಾಗಿ ಬೆಲೆ ಮತ್ತಷ್ಟು ಗಗನಕ್ಕೇರುವುದನ್ನು ತಡೆಯಲು ಹಾಗೂ ಕೃತಕ ಅಭಾವ ಸೃಷ್ಟಿಗೆ ಅವಕಾಶ ನೀಡದಂತೆ ಕೇಂದ್ರದ ನಾಫೆಡ್‌ ಹಾಗೂ ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಸಿಸಿಎಫ್‌) ಮೂಲಕ ಏಫ್ರಿಲ್‌, ಮೇ ತಿಂಗಳಲ್ಲಿ ಮಹಾರಾಷ್ಟ್ರದ ಈರುಳ್ಳಿಯನ್ನು ಖರೀದಿಸಿತ್ತು. ಅದನ್ನೀಗ ಕಳೆದ ವಾರದಿಂದ ಬೆಂಗಳೂರು ಮಾರುಕಟ್ಟೆಗೆ ಪೂರೈಸುತ್ತಿದೆ.

ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ

ಈರುಳ್ಳಿ ಬೆಲೆ ಏರಿಕೆ ಸಾಧ್ಯತೆಯಿದೆ. ಆದರೆ, ರಾಜ್ಯದಲ್ಲಿ ಈಗಾಗಲೇ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ ಗರಿಷ್ಠ ₹ 280 ವರೆಗೆ ವ್ಯಾಪಾರವಾಗುತ್ತಿದೆ. ಸಗಟು ಮಾರುಕಟ್ಟೆಯಲ್ಲಿ ಕಳೆದ ತಿಂಗಳಾಂತ್ಯಕ್ಕೆ ಕೆಜಿಗೆ ₹ 75- ₹ 170 ವರೆಗಿದ್ದ ಬೆಳ್ಳುಳ್ಳಿ ದರ ಕೆಜಿಗೆ ₹ 85- ₹ 190 ವರೆಗೆ ಬೆಲೆಯಿದೆ. ಇದು ಗ್ರಾಹಕರಿಗೆ ತಲುಪುವ ಹೊತ್ತಿಗೆ ₹ 150-₹ 280 ವರೆಗೂ ಏರಿಕೆಯಾಗುತ್ತಿದೆ.

ರಾಜ್ಯಕ್ಕೆ ಮಧ್ಯಪ್ರದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳುಳ್ಳಿ ಬರುತ್ತದೆ. ಗುಜರಾತ್‌, ರಾಜಸ್ಥಾನದಿಂದಲೂ ಪೂರೈಕೆ ಆಗುತ್ತದೆ. ಮಧ್ಯಪ್ರದೇಶದಲ್ಲಿ ಎರಡು ವಾರಗಳ ಹಿಂದೆ ಸುರಿದ ಭಾರೀ ಮಳೆಗೆ ಬೆಳ್ಳುಳ್ಳಿ ನೀರು ಪಾಲಾಗಿದೆ. ಪರಿಣಾಮ, ಶೇ. 25ರಷ್ಟು ಪೂರೈಕೆ ಕಡಿಮೆಯಾಗಿದೆ. ಇದು ಬೆಲೆ ವಿಪರೀತವಾಗಲು ಕಾರಣವಾಗಿದೆ. ಕಳೆದ ಎರಡು ವರ್ಷ ಕೇವಲ ಸಗಟು ₹ 20- ₹ 50 ಬೆಲೆಯಿತ್ತು. ಹೀಗಾಗಿ ರೈತರು ಹೆಚ್ಚಾಗಿ ಬೆಳೆಯಲು ಮುಂದಾಗಿರಲಿಲ್ಲ. ಆದರೆ, ಈ ವರ್ಷದ ಆರಂಭದಿಂದಲೇ ಬೆಲೆ ಹೆಚ್ಚುತ್ತಾ ಹೋಗಿದೆ ಎಂದು ವರ್ತಕರು ತಿಳಿಸಿದರು.

ಬೆಂಗಳೂರು ಬೆಳ್ಳುಳ್ಳಿ ವರ್ತಕರ ಸಂಘದ ಅಧ್ಯಕ್ಷ ಬಿಪಿನ್‌ ವೋರಾ, ಎಪಿಎಂಸಿಗೆ ಸದ್ಯ 3ಸಾವಿರ ಚೀಲ ವ್ಯಾಪಾರ ಆಗುತ್ತಿದೆ. ಡಿಸೆಂಬರ್‌, ಜನವರಿ ವೇಳೆಗೆ ಸಗಟು ಮಾರುಕಟ್ಟೆಯಲ್ಲೇ ಕೆಜಿಗೆ ₹ 250 ಆಗುವ ಸಾಧ್ಯತೆಯಿದೆ. ಒಂದಿಷ್ಟು ದಾಸ್ತಾನು ಇರುವ ಕಾರಣ ಈಗಲೇ ಅಷ್ಟೊಂದು ಬೆಲೆ ಹೆಚ್ಚಾಗಲ್ಲ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ