ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಸ್‌ಬಿಐ ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ ; ಸಂಪೂರ್ಣವಾಗಿ ವಿವರ ನೀಡಲು ಸೂಚನೆ.!

Twitter
Facebook
LinkedIn
WhatsApp
ಎಸ್‌ಬಿಐ ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ ; ಸಂಪೂರ್ಣವಾಗಿ ವಿವರ ನೀಡಲು ಸೂಚನೆ.!

ಎಲೆಕ್ಟೊರಲ್ ಬಾಂಡ್ ದಾಖಲೆ ಸಲ್ಲಿಕೆಗೆ ಹೆಚ್ಚುವರಿ ಸಮಯಾವಕಾಶ ಕೋರಿದ್ದ ಎಸ್‌ಬಿಐ ಅನ್ನು ಕೆಲವು ದಿನಗಳ ಹಿಂದಷ್ಟೇ ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಶುಕ್ರವಾರ ಮತ್ತೆ ತಪರಾಕಿ ನೀಡಿದೆ. ಎಲೆಕ್ಟೊರಲ್ ಬಾಂಡ್‌ಗೆ ಸಂಬಂಧಿಸಿದ ಸಂಪೂರ್ಣ ವಿವರ ಹಂಚಿಕೊಳ್ಳದ ಕಾರಣಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವಿರುದ್ಧ ನ್ಯಾಯಾಲಯ ಕಿಡಿಕಾರಿದೆ. ತನ್ನ ಆದೇಶವನ್ನು ಸರಿಯಾಗಿ ಪಾಲಿಸದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಅದು ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎಸ್‌ಬಿಐ ಒದಗಿಸಿರುವ ದಾಖಲೆಗಳು ಅಪೂರ್ಣವಾಗಿವೆ ಎಂದು ಹೇಳಿದೆ. ದೇಣಿಗೆದಾರರು ಹಾಗೂ ಸ್ವೀಕೃತಿದಾರರ ನಡುವೆ ನಂಟು ತೋರಿಸುವ ಎಲೆಕ್ಟೊರಲ್ ಬಾಂಡ್ ಸಂಖ್ಯೆಗಳನ್ನು ಬ್ಯಾಂಕ್ ಬಹಿರಂಗಪಡಿಸಬೇಕಿತ್ತು. ಆದರೆ ಎಸ್‌ಬಿಐ ತನ್ನ ಆದೇಶವನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

“ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರ ಹಾಜರಾಗುತ್ತಿರುವವರು ಯಾರು? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅದನ್ನು ಬಹಿರಂಗಪಡಿಸಬೇಕಿತ್ತು” ಎಂದು ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸಿಜೆಐ ಡಿವೈ ಚಂದ್ರಚೂಡ್ ಅವರು ತೀಕ್ಷ್ಣವಾಗಿ ಹೇಳಿದರು.

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಈ ಲೋಪಕ್ಕೆ ವಿವರಣೆ ನೀಡುವಂತೆ ಎಸ್‌ಬಿಐಗೆ ಸೂಚನೆ ಕೊಟ್ಟಿದೆ. ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ (ಮಾರ್ಚ್ 18) ಮುಂದೂಡಿದೆ.

ಮಾರ್ಚ್ 12ರ ಒಳಗೆ ಚುನಾವಣಾ ಆಯೋಗಕ್ಕೆ ಎಲೆಕ್ಟೊರಲ್‌ ಬಾಂಡ್‌ಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಲ್ಲಿಸುವಂತೆ ಈ ಹಿಂದೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆದರೆ ಬಾಂಡ್ ಖರೀದಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಯಾವ ಕಂಪೆನಿ ಅಥವಾ ವ್ಯಕ್ತಿಯಿಂದ ಯಾವ ರಾಜಕೀಯ ಪಕ್ಷಕ್ಕೆ ಎಷ್ಟು ಹಣ ಸಂದಾಯವಾಗಿದೆ ಎಂಬುದನ್ನು ಬಹಿರಂಗಪಡಿಸಲು ಅಗತ್ಯವಾಗಿರುವ ಬಾಂಡ್ ಸಂಖ್ಯೆಯನ್ನು ಎಸ್‌ಬಿಐ ಒದಗಿಸಿರಲಿಲ್ಲ.

ದಾಖಲೆ ಮರಳಿಸಲು ಕೇಳಿದ ಆಯೋಗ

ಈ ಹಿಂದೆ ತಾನು ಮುಚ್ಚಿದ ಲಕೋಟೆಗಳಲ್ಲಿ ಸಲ್ಲಿಸಿದ್ದ ಎಲೆಕ್ಟೊರಲ್ ಬಾಂಡ್ ಡೇಟಾಗಳನ್ನು ಮರಳಿಸುವಂತೆ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಕೇಳಿತ್ತು. ಮುಚ್ಚಿ ಲಕೋಟೆಗಳು ವಾಪಸಾಗುವವರೆಗೂ ತನ್ನ ವೆಬ್‌ಸೈಟ್‌ನಲ್ಲಿ ವಿವರ ಪ್ರಕಟಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ನಗದೀಕರಿಸಿದ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳು ಸಲ್ಲಿಸಿದ ದಾಖಲೆಗಳ ಪ್ರತಿ ಉಳಿಸಿಕೊಳ್ಳದೆ, ಅವುಗಳನ್ನು ನ್ಯಾಯಾಲಯಕ್ಕೆ ರವಾನಿಸಿರುವುದಾಗಿ ಆಯೋಗ ತಿಳಿಸಿತ್ತು.

ಇದನ್ನು ಮಾನ್ಯ ಮಾಡಿರುವ ಸುಪ್ರೀಂ ಕೋರ್ಟ್‌, ನ್ಯಾಯಾಂಗ ರಿಜಿಸ್ಟ್ರಾರ್ ಅವರು ಆಯೋಗ ಸಲ್ಲಿಸಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಡಿಜಿಟಲೀಕರಣ ಮಾಡುವುದನ್ನು ಖಾತರಿಪಡಿಸಬೇಕು. ಒಮ್ಮೆ ಈ ಕೆಲಸ ಮುಗಿದ ಬಳಿಕ, ಮೂಲ ದಾಖಲೆಗಳನ್ನು ಮಾರ್ಚ್ 16ರ ಶನಿವಾರ ಸಂಜೆ 5 ಗಂಟೆ ಒಳಗೆ ಚುನಾವಣಾ ಆಯೋಗಕ್ಕೆ ಮರಳಿ ನೀಡಬೇಕಾಗುತ್ತದೆ. ಇದನ್ನು ಮಾರ್ಚ್ 17ರಂದು ಅಥವಾ ಅದಕ್ಕೂ ಮುನ್ನ ವೆಬ್‌ಸೈಟ್‌ನಲ್ಲಿ ಆಯೋಗ ಪ್ರಕಟಿಸಬೇಕು ಎಂದು ಸೂಚಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist