ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ; ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್...!

Twitter
Facebook
LinkedIn
WhatsApp
ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ; ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್...!

ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್(Electoral Bonds)​ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ ಎಂದು ಹೇಳಿದೆ. ಚುನಾವಣಾ ಬಾಂಡ್‌ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಪ್ರಕರಣದ ಕುರಿತು ಸರ್ವಾನುಮತದ ತೀರ್ಪು ನೀಡಿದೆ.

ಆದರೆ, ಪೀಠದಲ್ಲಿ ಎರಡು ಭಿನ್ನ ಅಭಿಪ್ರಾಯಗಳಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು, ಅದು ಇಂದು ಪ್ರಕಟವಾಯಿತು.

 

ಚುನಾವಣಾ ಬಾಂಡ್​ ಯೋಜನೆಯ ಪ್ರಕಾರ, ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸ್ಥಾಪಿಸಲಾದ ಯಾವುದೇ ಘಟಕದಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಯಾವುದೇ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳ ಸಹಯೋಗದಲ್ಲಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 29(A) ಅಡಿಯಲ್ಲಿ ನೋಂದಾಯಿಸಲ್ಪಟ್ಟ ರಾಜಕೀಯ ಪಕ್ಷಗಳು ಮತ್ತು ಲೋಕಸಭೆ ಅಥವಾ ವಿಧಾನಸಭೆಗೆ ಕಳೆದ ಚುನಾವಣೆಯಲ್ಲಿ ಕನಿಷ್ಠ ಒಂದು ಶೇಕಡಾ ಮತಗಳನ್ನು ಗಳಿಸಿದ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಪಡೆಯಬಹುದು. ಬಾಂಡ್‌ಗಳನ್ನು ಅಧಿಕೃತ ಬ್ಯಾಂಕ್ ಖಾತೆಯ ಮೂಲಕ ಅರ್ಹ ರಾಜಕೀಯ ಪಕ್ಷವು ಎನ್‌ಕ್ಯಾಶ್ ಮಾಡಬಹುದು.

 

ಐವರು ಸದಸ್ಯರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಿತು ಅಕ್ಟೋಬರ್ 31 ರಿಂದ ಪ್ರಕರಣದ ನಿಯಮಿತ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಇದರಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಕೂಡ ಇದ್ದರು. ಈ ವೇಳೆ ಎರಡೂ ಕಡೆಯಿಂದ ವಾದ ಮಂಡಿಸಲಾಯಿತು. ಎಲ್ಲ ಕಕ್ಷಿದಾರರ ಮಾತುಗಳನ್ನು ಗಂಭೀರವಾಗಿ ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಚುನಾವಣಾ ಬಾಂಡ್​ ಎಂದರೇನು? 

ಇದು ಜನಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮ. 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದು. ಈ ಬಾಂಡ್​ಗಳು ಅನಾಮಧೇಯವಾಗಿರುತ್ತವೆ. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗ ಇರುವುದಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗ ಇರುವುದಿಲ್ಲ.

ಇತ್ತೀಚಿನ ಚುನಾವಣೆಯಲ್ಲಿ ಶೇ. 1ಕ್ಕೂ ಹೆಚ್ಚು ಮತಗಳನ್ನು ಪಡೆದ ಯಾವುದೇ ರಾಜಕೀಯ ಪಕ್ಷವೂ ಎಲೆಕ್ಟ್ರೋರಲ್ ಬಾಂಡ್ ಅಕೌಂಟ್ ತೆರೆಯಲು ಅವಕಾಶ ಹೊಂದಿರುತ್ತದೆ. ಎಲೆಕ್ಟೋರಲ್ ಬಾಂಡ್ ಖರೀದಿಸಿದ ಬಳಿಕ ರಾಜಕೀಯ ಪಕ್ಷವು 15 ದಿನದೊಳಗೆ ಆ ಹಣವನ್ನು ಎನ್​ಕ್ಯಾಷ್ ಮಾಡಿಕೊಳ್ಳಬೇಕು. ಅದು ತಪ್ಪಿದಲ್ಲಿ ಬಾಂಡ್ ಹಣವು ಪಿಎಂ ರಾಷ್ಟ್ರೀಯ ಪರಿಹಾರ ನಿಧಿಗೆ (ಪಿಎಂಎನ್​ಆರ್​ಎಫ್) ವರ್ಗಾವಣೆ ಆಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist