ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Supriya Sule: ಸುಪ್ರಿಯಾ ಸುಳೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರಾ? ಶರದ್ ಪವಾರ್ ಕೊಟ್ಟ ಉತ್ತರವೇನು?

Twitter
Facebook
LinkedIn
WhatsApp
Supriya Sule

Supriya Sule: ಮಹಾರಾಷ್ಟ್ರ ರಾಜಕಾರಣದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆಗಳು ಶುರುವಾಗಿವೆ. ಅದರಲ್ಲಿಯೂ ಮಹಿಳಾ ಮುಖ್ಯಮಂತ್ರಿಯ ವಿಷಯ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷಾಂತ್ಯಕ್ಕೆ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈಗ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಯನ್ನು ಶರದ್ ಪವಾರ್ ಗೆ ಕೇಳಲಾಯಿತು. ಇದಕ್ಕೆ ಅವರು ಕೊಟ್ಟ ಉತ್ತರವೇನು ಗೊತ್ತಾ.

ಮುಂದಿನ ಮಹಿಳಾ ಮುಖ್ಯಮಂತ್ರಿ ಯಾರು ಎಂಬುದು ಮಹಾರಾಷ್ಟ್ರ ರಾಜಕೀಯದಲ್ಲಿ ಆಗಾಗ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸದೆ ಸುಪ್ರಿಯಾ ಸುಳೆ (Supriya Sule) ಅವರ ಹೆಸರನ್ನು ಮೊದಲು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ ಶರದ್ ಪವಾರ್ ಎಬಿಪಿ ಮಜಾಗೆ ನೀಡಿದ ಸಂದರ್ಶನದಲ್ಲಿ ಈ ವಿಷಯದ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷರು ಏನು ಉತ್ತರ ನೀಡಿದರು?

ಶರದ್ ಪವಾರ್ ಅವರನ್ನು ಪಕ್ಷದ ಅಧ್ಯಕ್ಷರಾಗಿ ನೀವು ಏನು ಯೋಚಿಸುತ್ತೀರಿ ಎಂದು ಕೇಳಿದಾಗ, ವಿಶೇಷವಾಗಿ ಮಹಾವಿಕಾಸ್ ಅಘಾಡಿ ಮುಂಬರುವ ಚುನಾವಣೆಯಲ್ಲಿ ಸರ್ಕಾರ ರಚಿಸುವ ಸಾಧ್ಯತೆಯಿದೆ ಮತ್ತು ಸುಪ್ರಿಯಾ ಸುಳೆ ಮುಖ್ಯಮಂತ್ರಿಯಾಗಬಹುದು ಎಂದು ಹೇಳಿದರು. 

“ರಾಜ್ಯ ಸರ್ಕಾರ ನಮ್ಮ ಜನರ ಕೈಯಲ್ಲಿರಬೇಕು ಮತ್ತು ನಾವು ಅದನ್ನು ಸಾಧಿಸುತ್ತೇವೆ. ಯಾವುದೇ ವ್ಯಕ್ತಿ ಮುಖ್ಯವಲ್ಲ, ಅದು ಸಾಮೂಹಿಕ ನಿರ್ಧಾರವಾಗಿರುತ್ತದೆ” ಎಂದು ಹೇಳಿದರು.

ಶರದ್ ಪವಾರ್ ಅವರು ಮರಾಠ ಮತ್ತು ಒಬಿಸಿ ವಿವಾದದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು, ಅವರು ಮಹಾರಾಷ್ಟ್ರದ ಜಲ್ನಾ, ಬೀಡ್‌ನಂತಹ ಜಿಲ್ಲೆಗಳಲ್ಲಿ ಅಶಾಂತಿ ಇದೆ ಎಂದು ಹೇಳಿದರು. ಸಂಸತ್ತಿನ ಮುಂಗಾರು ಅಧಿವೇಶನದ ನಂತರ ಅಲ್ಲಿಗೆ ತೆರಳಿ ಸ್ಥಳೀಯ ಜನರೊಂದಿಗೆ ಮಾತನಾಡಲಿದ್ದಾರೆ. ಈ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಣ್ಣಿಸಿದ ಅವರು, ಇದನ್ನು ಬದಲಾಯಿಸಲು ಕಠಿಣ ಪರಿಶ್ರಮ ಅಗತ್ಯ ಎಂದು ಹೇಳಿದರು.

ಕಳೆದ ಐದು ವರ್ಷದಲ್ಲಿ ಮಹಾರಾಷ್ಟ್ರದ ಜನತೆ ಹಲವು ರಾಜಕೀಯ ಬದಲಾವಣೆಗಳನ್ನು ಕಂಡಿದ್ದಾರೆ. ಹೀಗಾಗಿ ಐದು ವರ್ಷದ ಅವಧಿಗೆ ಒಬ್ಬರೇ ಸಿಎಂ ಇರಲಿ ಎಂಬ ಮಾತುಗಳು ಕೇಳಿ ಬರುತ್ತಿವೆ. 2019ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದ ಹಿನ್ನೆಲೆ ಮಹಾರಾಷ್ಟ್ರ ಐದು ವರ್ಷದಲ್ಲಿ ಮೂರು ಮುಖ್ಯಮಂತ್ರಿಗಳನ್ನು ಕಂಡಿದೆ. 2019ರ ಚುನಾವಣೆ ಬಳಿಕ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮೂರು ದಿನ ಸಿಎಂ ಆಗಿದ್ದರು. ನಂತರ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಯಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನಂತರ ಶಿವಸೇನೆ ಮತ್ತು ಎನ್‌ಸಿಪಿ ಇಬ್ಭಾಗವಾಗಿದ್ದರಿಂದ ಬಿಜೆಪಿ ಬೆಂಬಲದ ಜೊತೆ ಏಕನಾಥ್ ಶಿಂಧೆ ಸಿಎಂ ಆಗಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿದ್ದಾರೆ. 

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಉತ್ತರ ಪ್ರದೇಶದಂತೆ ಮಹಾರಾಷ್ಟ್ರ ರಾಜಕಾರಣದಲ್ಲಿ ಹಲವು ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದೆ. ಡಿಸಿಎಂ ಅಜಿತ್ ಪವಾರ್ ಜೊತೆ ಹೋಗಿದ್ದ ನಾಯಕರು ಶರದ್ ಪವಾರ್ ಬಣದತ್ತ ಆಗಮಿಸುತ್ತಿದ್ದಾರೆ. ಮತ್ತೋಂದೆಡೆ ಉದ್ಧವ್ ಠಾಕ್ರೆ ಮೂಲ ಶಿವಸೇನೆಯ ಕಾರ್ಯಕರ್ತರನ್ನು ಕರೆತರುವ ಕೆಲಸವನ್ನು ತೆರೆಮರೆಯಲ್ಲಿ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಎನ್‌ಸಿಪಿ ಮುಖ್ಯಸ್ಥ, ಮಾಜಿ ಸಿಎಂ ಶರದ್ ಪವಾರ್ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗ್ತಾರಾ ಎಂಬ ಚರ್ಚೆಗಳು ಶುರುವಾಗಿದೆ. 

ಲೋಕ ಸಮರದಲ್ಲಿ ಅಘಾಡಿಗೆ 30 ಸ್ಥಾನ

ಲೋಕಸಭೆ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ 40ರಲ್ಲಿ 30 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಬಿಗ್ ಶಾಕ್ ನೀಡಿತ್ತು. ಇನ್ನು ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ರಾಯಗಡದಲ್ಲಿ ಕೇವಲ ಒಂದು ಸ್ಥಾನವನ್ನು ಗೆದ್ದರೆ, ಶರದ್ ಪವಾರ್ ಬಣ ಎಂಟು ಸ್ಥಾನಗಳನ್ನು ಗಳಿಸಿತ್ತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist