ಸೋಮವಾರ, ಮೇ 20, 2024
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

T20 World cup 2024 : ಟಿ-20 ವಿಶ್ವಕಪ್ ನಿಂದ ವಿರಾಟ್ ಕೊಹ್ಲಿ ಔಟ್?

Twitter
Facebook
LinkedIn
WhatsApp
T20 World cup 2024 : ಟಿ-20 ವಿಶ್ವಕಪ್ ನಿಂದ ವಿರಾಟ್ ಕೊಹ್ಲಿ ಔಟ್?

ಮುಂಬರುವ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಅಸಾಧಾರಣ ಬ್ಯಾಟಿಂಗ್‌ ಪ್ರದರ್ಶನ ನೀಡಿದರೆ ಮಾತ್ರವೇ, ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಭಾರತದ ಟಿ20 ಕ್ರಿಕೆಟ್‌ ತಂಡದಲ್ಲಿ ವಿರಾಟ್‌ ಕೊಹ್ಲಿಗೆ ಸ್ಥಾನ ಲಭ್ಯವಾಗಲಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಟೆಲಿಗ್ರಾಫ್‌ ಮಾಡಿರುವ ವರದಿ ಪ್ರಕಾರ ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿಲ್ಲ. ಟಿ20 ಕ್ರಿಕೆಟ್‌ನಲ್ಲಿ ಯುವ ಆಟಗಾರರ ಕಡೆಗೆ ಮಣೆ ಹಾಕಲು ಸೆಲೆಕ್ಟರ್ಸ್‌ ಎದುರು ನೋಡುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿರಾಟ್‌ ಕೊಹ್ಲಿ ಭಾರತ ಟಿ20 ತಂಡಕ್ಕೆ ಆಯ್ಕೆಯಾಗದೇ ಇದ್ದರೆ ಅಚ್ಚರಿಯೇನಿಲ್ಲ ಎಂದು ವರದಿಯಾಗಿದೆ.

ಟೆಸ್ಟ್‌ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಈಗಲೂ ಸರ್ವಶ್ರೇಷ್ಠ ಬ್ಯಾಟರ್‌ ಆಗಿರುವ ವಿರಾಟ್‌ ಕೊಹ್ಲಿ, ಟಿ20 ಕ್ರಿಕೆಟ್‌ನಲ್ಲಿ ಅಂಥದ್ದೇ ಆಕ್ರಮಣಕಾರಿ ಆಟವಾಡಲು ವಿಫಲರಾಗಿದ್ದಾರೆ ಎಂಬುದು ಸೆಲೆಕ್ಟರ್ಸ್‌ ಅಭಿಪ್ರಾಯ ಎಂದು ವರದಿ ಹೇಳಿದೆ. ಇನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅನುಭವಿ ಆರಂಭಿಕ ಬ್ಯಾಟರ್‌ ರೋಹಿತ್‌ ಶರ್ಮಾ ಅವರನ್ನು ಭಾರತದ ಟಿ20 ತಂಡದ ನಾಯಕ ಎಂದು ಈಗಾಗಗಲೇ ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ ಶಾ ಈಗಾಗಗಲೇ ಇದನ್ನು ಖಾತ್ರಿ ಪಡಿಸಿದ್ದಾರೆ ಕೂಡ. ಆದರೆ, ವಿರಾಟ್‌ ಕೊಹ್ಲಿ ಭವಿಷ್ಯ ಏನು? ಈ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ ಎಂದು ಬಿಸಿಸಿಐ ಬಿಟ್ಟಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಮತ್ತಷ್ಟು ಆಕ್ರಮಣಕಾರಿಯಾಗಿ ಬ್ಯಾಟಿಂಗ್‌ ಮಾಡಬೇಕು ಎಂದು ಅಜಿತ್‌ ಅಗರ್ಕರ್‌ ಈ ಮೊದಲು ತಮ್ಮ ಅಭಿಪ್ರಾಯ ಹೊರಹಾಕಿದ್ದರು. ಅಫಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ವಿರಾಟ್‌ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಕೈಹಾಕಿ ವೈಫಲ್ಯತೆ ಕಂಡಿದ್ದರು ಕೂಡ.

ಕೊಹ್ಲಿ ಆಟಕ್ಕೆ ವೆಸ್ಟ್‌ ಇಂಡೀಸ್ ಪಿಚ್‌ಗಳು ಸೂಕ್ತವಲ್ಲ :ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಪ್ರಕಜಾರ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದಲ್ಲಿನ ಮಂದಗತಿಯ ಪಿಚ್‌ಗಳು ವಿರಾಟ್‌ ಕೊಹ್ಲಿ ಅವರ ಬ್ಯಾಟಿಂಗ್‌ಗೆ ಒಪ್ಪುವಂತ್ತಿಲ್ಲ. ಹೀಗಾಗಿ ಸೆಲೆಕ್ಟರ್ಸ್ ಪ್ರತಿಭಾನ್ವಿತ ಆಟಗಾರರಾದ ಸೂರ್ಯಕುಮಾರ್‌ ಯಾದವ್‌, ರಿಂಕು ಸಿಂಗ್‌, ತಿಲಕ್ ವರ್ಮಾ ಮತ್ತು ಶಿವಂ ದುಬೇ ಕಡೆಗೆ ಎದುರು ನೋಡುತ್ತಿದ್ದಾರೆ. ಈ ಆಟಗಾರರು ಸ್ಲೋ ಪಿಚ್‌ಗಳಲ್ಲಿ ವಿರಾಟ್‌ ಕೊಹ್ಲಿ ಅವರಿಗಿಂತಲೂ ಹೆಚ್ಚು ಪರಿಣಾಮಕಾರಿ ಎಂದು ಸೆಲೆಕ್ಟರ್ಸ್‌ ಲೆಕ್ಕಾಚಾರ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇನ್ನು ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸ್ಥಾನಕ್ಕೆ ಇಶಾನ್‌ ಕಿಶನ್‌ ಮತ್ತು ರಿಷಭ್ ಪಂತ್‌ ಬದಲಿಗೆ ಸೆಲೆಕ್ಟರ್ಸ್‌ ಕೆಎಲ್‌ ರಾಹುಲ್‌ ಕಡೆಗೆ ಒಲವು ಹೊಂದಿದ್ದಾರೆ ಎಂದು ವರದಿ ಹೇಳುತ್ತಿದೆ. ಈ ನಡುವೆ ಯುವ ಪ್ರತಿಭೆಗಳಾದ ಧ್ರುವ್ ಜುರೆಲ್ ಮತ್ತು ಜಿತೇಶ್‌ ಶರ್ಮಾ ಕೂಡ ಟೀಮ್ ಇಂಡಿಯಾ ಕದ ತಟ್ಟುತ್ತಿದ್ದಾರೆ. ಎಲ್ಲದಕ್ಕೂ ಐಪಿಎಲ್ 2024 ಟೂರ್ನಿಯಲ್ಲಿ ಆಟಗಾರರು ನೀಡುವ ಪ್ರದರ್ಶನ ಮಹತ್ವದ್ದಾಗಲಿದೆ. ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಬಿಸಿಸಿಐ ಸೆಲೆಕ್ಟರ್ಸ್‌ ಮೇ ಮೊದಲ ವಾರದಲ್ಲಿ ಭಾರತದ ಟಿ20 ತಂಡ ಪ್ರಕಟ ಮಾಡುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ