ಸೋಮವಾರ, ಜುಲೈ 1, 2024
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

T20 ವಿಶ್ವಕಪ್: ಫೈನಲ್ ಗೆ ಎಂಟ್ರಿಕೊಟ್ಟು ಇತಿಹಾಸ ಸೃಷ್ಟಿಸಿದ ದಕ್ಷಿಣ ಆಫ್ರಿಕಾ

Twitter
Facebook
LinkedIn
WhatsApp
T20 ವಿಶ್ವಕಪ್: ಫೈನಲ್ ಗೆ ಎಂಟ್ರಿಕೊಟ್ಟು ಇತಿಹಾಸ ಸೃಷ್ಟಿಸಿದ ದಕ್ಷಿಣ ಆಫ್ರಿಕಾ

T20 ವಿಶ್ವಕಪ್: ಪುರುಷರ ವಿಶ್ವಕಪ್ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟು ಇತಿಹಾಸ ಸೃಷ್ಟಿಸಿದ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ 2014 ರ ನಂತರ ಮೊದಲ ಬಾರಿಗೆ T20 ವಿಶ್ವಕಪ್‌ನ ನಾಕೌಟ್‌ಗೆ ಪ್ರವೇಶಿಸಿದರು ಮತ್ತು ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನ ತಂಡವನ್ನು ಸೋಲಿಸಿದರು. ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಮೂಲಕ ಅಫ್ಘಾನಿಸ್ತಾನ್ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. 

ಮೊದಲ ಓವರ್​ನಲ್ಲೇ ರಹಮಾನುಲ್ಲಾ ಗುರ್ಬಾಝ್ (0) ವಿಕೆಟ್ ಕಬಳಿಸಿ ಮಾರ್ಕೊ ಯಾನ್ಸೆನ್ ಮೊದಲ ಯಶಸ್ಸು ತಂದುಕೊಟ್ಟರೆ, ಮೂರನೇ ಓವರ್​ನಲ್ಲಿ ಗುಲ್ಬದ್ದೀಣ್ ನೈಬ್ (9) ಔಟಾದರು. ಇದರ ಬೆನ್ನಲ್ಲೇ ಅಝ್ಮತುಲ್ಲಾ ಒವರ್​ಝಾಹಿ (10) ಕೂಡ ವಿಕೆಟ್ ಕೈಚೆಲ್ಲಿದರು.

ಇನ್ನು ಇಬ್ರಾಹಿಂ ಝದ್ರಾನ್ (2), ಮೊಹಮ್ಮದ್ ನಬಿ (0), ನಂಗೆಯಲಿಯಾ ಖರೋಟೆ (2) ಮತ್ತು ಕರೀಮ್ ಜನ್ನತ್ (8) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಅಫ್ಘಾನಿಸ್ತಾನ್ ತಂಡ 7 ವಿಕೆಟ್ ಕಳೆದುಕೊಂಡಿತು.

ಆ ಬಳಿಕ ಬಂದ ರಶೀದ್ ಖಾನ್ 8 ರನ್​ಗಳಿಸಿ ಔಟಾದರೆ, ನೂರ್ ಅಹ್ಮದ್ ಸೊನ್ನೆ ಸುತ್ತಿದರು. ಅಂತಿಮವಾಗಿ ನವೀನ್ ಉಲ್ ಹಕ್ ಎಲ್​ಬಿಡಬ್ಲ್ಯೂ ಆಗುವ ಮೂಲಕ ಹೊರ ನಡೆದರು. ಇದರೊಂದಿಗೆ ಅಫ್ಘಾನಿಸ್ತಾನ್ ತಂಡ 11.5 ಓವರ್​ಗಳಲ್ಲಿ ಕೇವಲ 56 ರನ್​ಗಳಿಗೆ ಆಲೌಟ್ ಆಯಿತು.

ದಕ್ಷಿಣ ಆಫ್ರಿಕಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಮಾರ್ಕೊ ಯಾನ್ಸೆನ್ 3 ಓವರ್​ಗಳಲ್ಲಿ 16 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತಬ್ರೇಝ್ ಶಂಸಿ 1.5 ಓವರ್​ನಲ್ಲಿ 6 ರನ್ ನೀಡಿ 3 ವಿಕೆಟ್ ಪಡೆದರು. ಇನ್ನು ಕಗಿಸೊ ರಬಾಡ ಹಾಗೂ ಅನ್ರಿಕ್ ನೋಕಿಯಾ ತಲಾ ಎರಡು ವಿಕೆಟ್ ಕಬಳಿಸಿ ಮಿಂಚಿದರು.

ಕೇವಲ 57 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಫಝಲ್ಹಕ್ ಫಾರೂಖಿ ಎಸೆದ 2ನೇ ಓವರ್​ನ 5ನೇ ಎಸೆತದಲ್ಲಿ ಕ್ವಿಂಟನ್ ಡಿಕಾಕ್ (5) ಕ್ಲೀನ್ ಬೌಲ್ಡ್ ಆದರು. ಈ ಹಂತದಲ್ಲಿ ಜೊತೆಗೂಡಿದ ರೀಝ ಹೆಂಡ್ರಿಕ್ಸ್ ಹಾಗೂ ಐಡೆನ್ ಮಾರ್ಕ್ರಾಮ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 8.5 ಓವರ್​ಗಳಲ್ಲಿ 57 ರನ್​ಗಳ ಗುರಿ ಮುಟ್ಟುವ ಮೂಲಕ ದಕ್ಷಿಣ ಆಫ್ರಿಕಾ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡವು ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಫೈನಲ್​ಗೆ ಪ್ರವೇಶಿಸಿದೆ. ಅಲ್ಲದೆ ಜೂನ್ 29 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಅಥವಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ದಕ್ಷಿಣ ಆಫ್ರಿಕಾ ತಂಡ : ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) , ರೀಝ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ (ನಾಯಕ) , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ , ಟ್ರಿಸ್ಟಾನ್ ಸ್ಟಬ್ಸ್ , ಮಾರ್ಕೊ ಯಾನ್ಸೆನ್ , ಕೇಶವ್ ಮಹಾರಾಜ್ , ಕಗಿಸೋ ರಬಾಡ , ಅನ್ರಿಕ್ ನೋಕಿಯಾ, ತಬ್ರೇಝ್ ಶಂಸಿ.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ , ಅಝ್ಮತುಲ್ಲಾ ಒಮರ್ಜಾಯ್ , ಗುಲ್ಬದಿನ್ ನೈಬ್ , ಮೊಹಮ್ಮದ್ ನಬಿ , ಕರೀಂ ಜನತ್ , ರಶೀದ್ ಖಾನ್ (ನಾಯಕ) , ನಂಗೆಯಾಲಿಯಾ ಖರೋಟೆ , ನೂರ್ ಅಹ್ಮದ್ , ನವೀನ್-ಉಲ್-ಹಕ್ , ಫಝಲ್ಹಕ್ ಫಾರೂಖಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ