ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು

Twitter
Facebook
LinkedIn
WhatsApp
Aamir Khans daughter Ira Khan shares picture in a yellow and black bikini 3 2

ಆಳಂದ(ಮೇ.30): ಮನೆಯಲ್ಲಿ ಮಧ್ಯಾಹ್ನದ ವೇಳೆ ತನ್ನ ಗೆಳತಿಯರೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಚ್ಚಿದ ಪರಿಣಾಮ ಪಿಯುಸಿ ಪೂರೈಸಿದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಧಾರುಣ ಘಟನೆ ತಾಲೂಕಿನ ಯಳಸಂಗಿ ಗ್ರಾಮದಲ್ಲಿ ಭಾನುವಾರ ವರದಿಯಾಗಿದೆ.

ಗ್ರಾಮದ ಪೂಜಾ ಯಲ್ಲಾಲಿಂಗ್‌ ಹೂಗಾರ (18), ಎಂಬ ವಿದ್ಯಾರ್ಥಿನಿ ಮನೆಯಲ್ಲಿದ್ದಾಗ ಹಾವು ಕಡಿದು ಮೃತಪಟ್ಟ ದುರ್ದೈವಿ. ಪೂಜಾ ಪ್ರಸಕ್ತ ಸಾಲಿನ ಪಿಯುಸಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ಉತ್ತೀರ್ಣಳಾಗಿದ್ದು, ಮುಂದೆ ಬಿಎ ಪ್ರವೇಶ ಪಡೆಯಲು ಗೆಳತಿಯೊಂದಿಗೆ ವಿಡಿಯೋ ಕಾಲ್‌ ಮೂಲಕ ಚರ್ಚಿಸತೊಡಗಿದ್ದ ವೇಳೆ ಮೊದಲು ಹಾವು ಬಲಗಾಲಿನ ಬೆರಳಿಗೆ ಕಚ್ಚಿದೆ. ಕಾಲು ಜಾಡಿಸಿದ್ದಾಗ ಮತ್ತೊಮ್ಮೆ ಇನ್ನೊಂದು ಬೆರಳಿಗೆ ಕಚ್ಚಿದ ಮೇಲೆ ನೋಡಿದ ವಿದ್ಯಾರ್ಥಿನಿಗೆ ಹಾವು ಎಂದು ಗೊತ್ತಾಗಿ ಕಿರುಚಾಡಿ ಹೊರಬಂದ ಮನೆಯವರಿಗೆ ಹೇಳಿದ್ದಾಳೆ.

ಈ ಕುರಿತು ಕುಟುಂಬಸ್ಥರು ಝಳಕಿ ಬಿ. ಗ್ರಾಮದ ಆರ್ಯುವೇಧ ಔಷಧಿ ಚಿಕಿತ್ಸೆ ನೀಡಿದ್ದರಾದರು. ಫಲಕಾರಿಯಾಗದೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮುಂದಾಗಿದ್ದದರಾದರು ಅಷ್ಟೊತ್ತಿಗೆ ಹಾವಿನ ವಿಷವೇರಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಮೃತ ಬಾಲಕಿಯ ಬಡ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಹೂಗಾರ ಸಮಾಜದ ಅಧ್ಯಕ್ಷ ಈರಣ್ಣಾ ಹೂಗಾರ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ