ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆಗೂ ಮುನ್ನವೇ ರಾಜ್ಯದಲ್ಲಿ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ?

Twitter
Facebook
LinkedIn
WhatsApp
ಲೋಕಸಭೆಗೂ ಮುನ್ನವೇ ರಾಜ್ಯದಲ್ಲಿ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ?

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ (Karnataka High court) ಮುಂದೆ ನೀಡಿರುವ ಹೇಳಿಕೆಯನ್ನು ಗಮನಿಸಿದರೆ ಇನ್ನು ಒಂದು ತಿಂಗಳಲ್ಲಿ ಮಹತ್ವದ ಜಿಲ್ಲಾ ಪಂಚಾಯಿತಿ (Zilla Panchayat) ಮತ್ತು ತಾಲೂಕು ಪಂಚಾಯಿತಿ ಚುನಾವಣಾ (Taluk panchayat Elections) ಪ್ರಕ್ರಿಯೆಗಳು ಆರಂಭವಾಗಲಿವೆ. ಮಂಗಳವಾರ ಹೈಕೋರ್ಟ್‌ ಮುಂದೆ ಅಡ್ವೊಕೇಟ್‌ ಜನರಲ್‌ (Advocate general) ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದು, ಒಂದು ವಾರದಲ್ಲಿ ಮೀಸಲಾತಿ ಕರಡು ಅಧಿಸೂಚನೆ (Reservation draft Notification) ಪ್ರಕಟಿಸುವುದಾಗಿ ತಿಳಿಸಿದ್ದರು. ಇದನ್ನು ಗಮನಿಸಿದರೆ ಲೋಕಸಭಾ ಚುನಾವಣೆಗೂ (Loksabha Elections 2024) ಮೊದಲೇ ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ (ZPTP Election) ನಡೆಯುವ ಸಾಧ್ಯತೆ ಇದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತರಲಾಗಿತ್ತು. ಇದನ್ನೂ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಮಂಗಳವಾರ ನಡೆಸಿತು. ಈ ಸಂದರ್ಭದಲ್ಲಿ ಅಡ್ವೊಕೇಟ್‌ ಜನರಲ್‌ ನೀಡಿದ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಅರ್ಜಿ ಇತ್ಯರ್ಥಪಡಿಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಇಂದು ಮಧ್ಯಾಹ್ನದ ವೇಳೆಗೆ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆ ಅಧಿಸೂಚನೆ ಪೂರ್ಣಗೊಳ್ಳಲಿದೆ. ಒಂದು ವಾರದಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗುವುದು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ಇರಲಿದೆ. ಆ ಬಳಿಕ ಸಂಬಂಧಿತ ಪ್ರಾಧಿಕಾರಗಳು ಎರಡು ವಾರಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಿವೆ” ಎಂದರು.

ಇದಕ್ಕೆ ರಾಜ್ಯ ಚುನಾವಣಾ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಆಕ್ಷೇಪಿಸಿದರು. ಸರ್ಕಾರದ ಹೇಳಿಕೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದರು.

ಆಗ ಮಧ್ಯ ಪ್ರವೇಶಿಸಿದ ನ್ಯಾ. ದೀಕ್ಷಿತ್‌ ಅವರು “ಎಜಿ ಸಾಂವಿಧಾನಿಕ ಫಂಕ್ಷನರಿ. ಅವರನ್ನು ನಂಬಬಾರದೇ? ಕ್ಷೇತ್ರ ಪುನರ್‌ ವಿಂಗಡಣೆ ಇಂದು ಮಧ್ಯಾಹ್ನ ಪೂರ್ಣಗೊಳ್ಳಲಿದೆ ಎಂದು ನೀವು (ಎಜಿ) ಹೇಳುತ್ತಿದ್ದೀರಿ. ಅದನ್ನು ಲಿಖಿತವಾಗಿ ತಿಳಿಸಿ. ನಿಮ್ಮ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಲಾಗುವುದು” ಎಂದರು.

ಅಂತಿಮವಾಗಿ ಪೀಠವು “ಎಜಿ ಅವರ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಬೇಕು. ಸರ್ಕಾರ ಮುಚ್ಚಳಿಕೆ ಉಲ್ಲಂಘಿಸಿದರೆ ಆಯೋಗವು ನ್ಯಾಯಾಲಯದ ಮೆಟ್ಟಿಲೇರಬಹುದು. ಅರ್ಜಿಯಲ್ಲಿ ಎತ್ತಿರುವ ಇತರೆ ಅಂಶಗಳನ್ನು ಮುಕ್ತವಾಗಿ ಇರಲಿಸಲಾಗಿದ್ದು, ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಕೈಗೆತ್ತಿಕೊಳ್ಳಲಾಗುವುದು” ಎಂದು ಆದೇಶದಲ್ಲಿ ದಾಖಲಿಸಿ, ಅರ್ಜಿ ಇತ್ಯರ್ಥಪಡಿಸಿತು.

ಲೋಕಸಭಾ ಚುನಾವಣೆಗೂ ಮೊದಲೇ ಜಿಪಂ, ತಾಪಂ ಚುನಾವಣೆ?

ಸರ್ಕಾರ ಈಗ ನೀಡಿರುವ ಹೇಳಿಕೆಯನ್ನು ಗಮನಿಸಿದರೆ ಮಾರ್ಚ್‌, ಏಪ್ರಿಲ್‌ ವೇಳೆಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ನಡೆಸುವ ಸಾಧ್ಯತೆಗಳು ಕಂಡುಬರುತ್ತಿವೆ. ಆದರೆ, ಇದು ನಿಜವೇ ಎನ್ನುವುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist