ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!

Twitter
Facebook
LinkedIn
WhatsApp
Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!

Taruwar Kohli: 2008 ರಲ್ಲಿ ಭಾರತ ತಂಡವು ಅಂಡರ್ 19 ವಿಶ್ವಕಪ್ ಗೆಲ್ಲುವಲ್ಲಿ ತರುವರ್ ಕೊಹ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ ಐಪಿಎಲ್​ನಲ್ಲೂ ಅವಕಾಶ ಪಡೆದಿದ್ದರು. ಆದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದಾಗ್ಯೂ ದೇಶೀಯ ಅಂಗಳದಲ್ಲಿ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ್ದ ತರುವರ್ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

 

ವಿರಾಟ್ ಕೊಹ್ಲಿಯೊಂದಿಗೆಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ತರುವರ್ ಕೊಹ್ಲಿ (Taruwar Kohli) ಇದೀಗ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. 2008 ರಲ್ಲಿ ಭಾರತ ತಂಡವು ಅಂಡರ್-19 ವಿಶ್ವಕಪ್ ಗೆಲ್ಲುವಲ್ಲಿ ತರುವರ್ ಪ್ರಮುಖ ಪಾತ್ರವಹಿಸಿದ್ದರು. ಇದಾಗ್ಯೂ ಪಂಜಾಬ್ ಮೂಲದ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಒಟ್ಟು 184 ಪಂದ್ಯಗಳನ್ನು ಆಡಿರುವ ತರುವರ್ ಕೊಹ್ಲಿ ಅತ್ಯುತ್ತಮ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದರು. 55 ಪ್ರಥಮ ದರ್ಜೆ ಪಂದ್ಯಗಳು, 72 ಲಿಸ್ಟ್-ಎ ಮತ್ತು 57 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ತರುವರ್ ಮೂರು ಮಾದರಿಗಳಲ್ಲಿ ಒಟ್ಟು 7543 ರನ್ ಗಳಿಸಿದ್ದಾರೆ. ಹಾಗೆಯೇ 133 ವಿಕೆಟ್‌ಗಳನ್ನೂ ಕಬಳಿಸಿದ್ದಾರೆ.

ಅಷ್ಟೇ ಅಲ್ಲದೆ ದೇಶೀಯ ಕ್ರಿಕೆಟ್​ನಲ್ಲಿ ಮಿಜೋರಾಂ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ 307 ರನ್ ಬಾರಿಸಿದ್ದು ಅವರ ಗರಿಷ್ಠ ವೈಯುಕ್ತಿಕ ಸ್ಕೋರ್. ಇನ್ನು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 14 ಶತಕ ಮತ್ತು 18 ಅರ್ಧ ಶತಕಗಳನ್ನು ಕೂಡ ಸಿಡಿಸಿದ್ದಾರೆ. ಈ ವೇಳೆ 53.80 ಸರಾಸರಿಯಲ್ಲಿ 4573 ರನ್ ಗಳಿಸಿದ್ದಾರೆ. ಇನ್ನು ಫಸ್ಟ್ ಕ್ಲಾಸ್​ ಕೆರಿಯರ್​ನಲ್ಲಿ 74 ವಿಕೆಟ್​ಗಳನ್ನು ಕಬಳಿಸಿದ್ದಾರೆ.

2008 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು ಅಂಡರ್ ವಿಶ್ವಕಪ್​ ಗೆದ್ದುಕೊಂಡಿತು. ಈ ವೇಳೆ ತರುವರ್ ಕೊಹ್ಲಿ ಕೂಡ ತಂಡದಲ್ಲಿದ್ದರು. ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ್ದ ತರುವರ್ ಕೊಹ್ಲಿ 6 ಪಂದ್ಯಗಳಲ್ಲಿ 3 ಅರ್ಧಶತಕಗಳೊಂದಿಗೆ 218 ರನ್ ಬಾರಿಸಿದ್ದರು. ಅಲ್ಲದೆ ಪಂದ್ಯಾವಳಿಯಲ್ಲಿ ಮೂರನೇ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದರು.

2008 ರಲ್ಲೇ ದೇಶೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅವರು ಮೊದಲು ಪಂಜಾಬ್ ಪರ ಕಣಕ್ಕಿಳಿದಿದ್ದರು. ಇನ್ನು ಕಳೆದ ವರ್ಷ ಜನವರಿಯಲ್ಲಿ ಅರುಣಾಚಲ ಪ್ರದೇಶ ವಿರುದ್ಧದ ಕೊನೆಯ ಪ್ರಥಮ ದರ್ಜೆ ಪಂದ್ಯದಲ್ಲಿ ಮಿಜೋರಾಂ ತಂಡವನ್ನು ಪ್ರತಿನಿಧಿಸಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ