ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Tecno Spark Go (2023): ಬೆಲೆ ಕೇವಲ 6,999 ರೂ.: ಟೆಕ್ನೋದಿಂದ ಅತಿ ಕಡಿಮೆ ದರಕ್ಕೆ ಬೊಂಬಾಟ್ ಸ್ಮಾರ್ಟ್​ಫೋನ್ ಬಿಡುಗಡೆ

Twitter
Facebook
LinkedIn
WhatsApp
TECNO Spark Go 2023

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಇದೀಗ ಹೊಸ ವರ್ಷದ ಪ್ರಯುಕ್ತ ತನ್ನ ಹೊಸ ಟೆಕ್ನೋ ಸ್ಪಾರ್ಕ್ ಗೋ 2023 (Tecno Spark Go 2023) ಫೋನನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ಫೀಚರ್ಸ್ ಎಂಬುದನ್ನು ನೋಡೋಣ.

Tecno Spark Go 2023 Specs & price leak ahead of launch

ಟೆಕ್ನೋ ಕಂಪೆನಿ ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.85 ಲೆನ್ಸ್ ಹೊಂದಿದೆ. ಇನ್ನು ದ್ವಿತೀಯ ಕ್ಯಾಮೆರಾ AI ಬೆಂಬಲಿತ ಆಗಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಬೇಸಿಕ್ ಫೋಟೊ ಎಡಿಟಿಂಗ್ ಆಯ್ಕೆಗಳು ಇರಲಿವೆ. ಮುಂಭಾಗ ಎಲ್​ಇಡಿ ಫ್ಲ್ಯಾಸ್ ಆಯ್ಕೆ ಇರುವುದು ವಿಶೇಷ.

TECNO Spark Go 2023 | NoypiGeeks

ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. 10 ವೋಲ್ಟ್ ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. 124 ಗಂಟೆಗಳ ಕಾಲ ಮ್ಯೂಸಿಕ್ ಕೇಳಬಹುದು, 12 ಗಂಟೆಗಳ ಕಾಲ ಗೇಮಿಂಗ್ ಟೈಮ್ ನೀಡಲಾಗಿದೆ ಎಂದು ಕಂಪನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 4ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ 5 ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಒಳಗೊಂಡಿದೆ.

ಈ ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 3GB RAM ಮತ್ತು 32GB ಶೇಖರಣಾ ಮಾದರಿಗೆ 6,999 ರೂ. ಬೆಲೆ ನಿಗದಿ ಮಾಡಲಾಗಿದೆ. ಇದರ ಜೊತೆಗೆ 3GB RAM ಮತ್ತು 64GB, 4GB RAM ಮತ್ತು 64GB ಸ್ಟೋರೇಜ್ ಮುಂದಿನ ದಿನಗಳಲ್ಲಿ ಬಿಡುಗಡೆ ಆಗಲಿದೆಯಂತೆ. ಈ ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಅಥವಾ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ