ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!

Twitter
Facebook
LinkedIn
WhatsApp
ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!

ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸ್ಪೀಕರ್ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ ಅವರು, ಬಿಜೆಪಿಯ ತೇಜಸ್ವಿನಿಗೌಡ ರಮೇಶ್‌ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ‌ ರಾಜೀನಾಮೆ ನೀಡುತ್ತಿದ್ದೇನೆ ಎಂದು‌ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿನಿ ರಮೇಶ್ ಅವಧಿ‌ ಜೂನ್‌ವರೆಗೂ ಇತ್ತ, ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.

ಮೈಸೂರು ಕೊಡಗು ಕ್ಷೇತ್ರದಿಂದ ಟಿಕೆಟ್ ಮಿಸ್ ಆಗಿದ್ದಕ್ಕೆ ಬಿಜೆಪಿಗೆ ಗುಡ್ ಬೈ ಹೇಳಲು ತೇಜಸ್ವಿನಿಗೌಡ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕಿಯೇ ತಮ್ಮ ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ರಾಜೀನಾಮೆ ನೀಡುವುದಾಗಿ ಐವರು ಶಾಸಕರು ಬೆದರಿಕೆ..!

ಕೋಲಾರ ಲೋಕಸಭಾ (Kolar Lok sabha Constituency) ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ಇನ್ನಷ್ಟು ಕಗ್ಗಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಧಾನ ಸಭೆ ನಡೆಸಿದರೂ, ನಾಯಕರ ನಡುವಿನ ಭಿನ್ನಮತ ಶಮನವಾಗಿಲ್ಲ. ಸಚಿವ ಕೆ.ಹೆಚ್​​.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆ.ಹೆಚ್​.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ ಎಂದರು.

12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ದು. ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ನಾನು, ರಮೇಶ್​​ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ