ತೆಲಂಗಾಣ : ಕಾರು ಮತ್ತು ಟ್ರಕ್ ನಡುವೆ ಅಪಘಾತ, ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು
ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ನಾರ್ಕೆಟ್ಪಲ್ಲಿ-ಅದ್ದಂಕಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ಗೊಂಡ ಜಿಲ್ಲೆಯ ಮಿರ್ಯಾಲಗುಡಾದ ಚೆರುಪಳ್ಳಿ ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಯಾದಾದ್ರಿ ಭುವನಗಿರಿ ಜಿಲ್ಲೆಯ ಗೊಳ್ನೆಪಲ್ಲಿಯ ಭೂಮಾ ಮಹೇಂದರ್ (32) ಮತ್ತು ಅವರ ಮಗ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ಸಂತ್ರಸ್ತರು ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದರು ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಭೂಮಾ ಮಹೇಂದರ್ ಅವರ ಪತ್ನಿ ಭೂಮಾ ಮಾಧವಿ ಗಂಭೀರ ಗಾಯಗೊಂಡಿದ್ದಾರೆ. ಮಿರ್ಯಾಲಗುಡ ಪ್ರಾದೇಶಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ನಂತರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಿಗೆ ಡಿಕ್ಕಿ ಹೊಡೆದ ಟ್ರಕ್ ನಿಲ್ಲಿಸದೆ ವೇಗವಾಗಿ ಹೋದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ INS ಸುಮಿತ್ರ
ಅರಬ್ಬೀ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಮೀನುಗಾರಿಕಾ ಹಡಗು ಇಮಾನ್ನ್ನು ಇಂದು ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಸುಮಿತ್ರಾ ಸುರಕ್ಷಿತವಾಗಿ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳ ಹೇಳಿದ್ದಾರೆ. ಅಧಿಕಾರಿಗಳು ನೀಡಿದ ಹೇಳಿಕೆ ಪ್ರಕಾರ, ಇರಾನ್ ಮೀನುಗಾರಿಕಾ ಹಡಗು ಎಂವಿ ಇಮಾನ್ನ್ನು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದರು. ಈ ಹಡಗಿನಲ್ಲಿ 17 ಜನ ಭಾರತೀಯ ಮೀನುಗಾರರಿದ್ದರು ಎಂದು ಹೇಳಲಾಗಿದೆ.
ಇದೀಗ ಈ ಪ್ರದೇಶದಲ್ಲಿ ಭಾರತೀಯ ನೌಕಪಡೆಗಳು ಭದ್ರತೆಯನ್ನು ಹೆಚ್ಚಿಸಿದ್ದು, ಭಾರತಕ್ಕೆ ಹೋಗುವ ವ್ಯಾಪಾರಿ ಹಡಗುಗಳ ಮೇಲೆ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಲಾಗಿದೆ ಎಂದು ಹೇಳಿದೆ. ಅಪಾಯ ಇರುವ ಅಥವಾ ದಾಳಿ ನಡೆಸುವ ಪ್ರದೇಶಗಳಲ್ಲಿ 10 ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂತಹ ದಾಳಿಗಳು ನಡೆಯುತ್ತಿದ್ದು ಕಡಿಮೆಯಾಗಿತ್ತು. ಆದರೆ ಇಸ್ರೇಲ್-ಹಮಾಸ್ ಯುದ್ಧದ ನಂತರ ಇಂತಹ ದಾಳಿಗಳು ಹೆಚ್ಚಾಗಿದೆ ಎಂದು ಹೇಳಲಾಗಿದೆ. ಇರಾನ್ ಬೆಂಬಲಿತ ಯೆಮೆನ್ನ ಹೌತಿ ಮಿಲಿಷಿಯಾ ಭಯೋತ್ಪಾದನೆ ಸಂಘಟನೆಗಳು ವಾಣಿಜ್ಯ ಹಡಗುಗಳನ್ನು ಗುರಿಯಾಗಿ ದಾಳಿಯನ್ನು ನಡೆಸಿದೆ. ಅದರಲ್ಲೂ ಭಾರತಕ್ಕೆ ಬರುವ ಹಡಗುಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಹೇಳಲಾಗಿದೆ.