ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ದುರ್ಮರಣ

ಕೊಪ್ಪಳ (ಜೂ.13): ಕೊಪ್ಪಳ ಜಿಲ್ಲೆಯ ಕುಷ್ಟಗಿ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಕಂಟೇನರ್‌ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಭೀಕರ ಅಪಘಾತ ಘಟನೆಗಳು ವರದಿಯಾಗುತ್ತಲೇ ಇವೆ. ಇದರಲ್ಲಿ ಕಾರು ಅಪಘಾತಗಳ ಪೈಕಿ ಮುಂದಿನಿಂದ ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣಕ್ಕಿಂತ ಲಾರಿ ಹಿಂಬದಿಗೆ ಕಾರುಗಳು ಬಂದು ಡಿಕ್ಕಿ ಹೊಡೆಯುವ ಪ್ರಕರಣಗಳೇ ಹೆಚ್ಚಾಗಿ ನಡೆಯುತ್ತಿವೆ. ಹೀಗೆ ಅಪಘಾತಗೊಂದ ಕಾರಿನಲ್ಲಿನ ಬಹುತೇಕ ಪ್ರಯಾಣಿಕರು ದುರಂತವಾಗಿ ಸಾವಿಗೀಡಾಗುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಹಾದು ಹೋಗಿರುವ ಹೆದ್ದಾರಿಯಲ್ಲಿಯೂ ಕೂಡ ಲಾರಿ ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ.
ಕಂಟೇನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರ ಸಾವನ್ನಪ್ಪಿದ್ದಾರೆ. ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಮೃತರು ಮೂದ್ದೇಬಿಹಾಳ ಮೂಲದವರಾಗಿದ್ದಾರೆ. ಪ್ರವೀಣ್ ಕುಮಾರ್ ಭೋಜಪ್ಪ (27), ಸುರೇಶ್ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗರ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.