ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

Twitter
Facebook
LinkedIn
WhatsApp
ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಧಾರವಾಡ (Dharwad) ಜಿಲ್ಲೆ ಕುಂದಗೋಳ (Kundagol) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ (Accident) ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ: ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತ

ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಮೆಟ್ರೋ (Namma Metro) ಹಳಿ ಮೇಲೆ ಜಿಗಿದಿರುವಂತಹ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಮೆಟ್ರೋ ಸಿಬ್ಬಂದಿಗಳು ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ದು ಯಶವಂತಪುರದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಹಿನ್ನೆಲೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಪರದಾಡಿದ್ದಾರೆ.

ಸದ್ಯ ಮೆಜಸ್ಟಿಕ್​ನಿಂದ ಯಶವಂತಪುರವರೆಗೆ ಮಾತ್ರ ಮೆಟ್ರೋ ರೈಲು ಸಂಚಾರ ಮಾಡುತ್ತಿವೆ. ಯಶವಂತಪುರದಿಂದ ನಾಗಸಂದ್ರವರೆಗೆ ಮೆಟ್ರೋ ರೈಲು ಸಂಚಾರ ಮಾಡುತ್ತಿಲ್ಲ. ಅರ್ಧ ಗಂಟೆಯಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಟಿವಿ9ಗೆ ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೋ ಹಳಿಗಳ ಪಕ್ಕದಲ್ಲಿ 750 ವೋಲ್ಟ್ ಹೆವಿ ಪವರ್ ಲೈನ್ ಹಾದು ಹೋಗಿರುತ್ತದೆ. ಹಾಗಾಗಿ ಮತ್ತೆ ಪವರ್ ಜನರೇಟ್ ಮಾಡಲು ಅರ್ಧ ಗಂಟೆ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೊ ಹಳಿಗೆ ಧುಮುಕಿದ ಯುವಕನ ಹೆಸರು ಶ್ಯಾರೊನ್ (23). ಕೇರಳ ಮೂಲದವನು. ಸ್ನೇಹಿತನ ಜೊತೆ ಜಾಲಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ. ಮೆಜೆಸ್ಟಿಕ್​ಗೆ ಹೋಗಲು ಟಿಕೆಟ್ ಸಹ ಪಡೆದುಕೊಂಡಿದ್ದ. ಮೆಟ್ರೊ ಟ್ರೈನ್ ಬಂದಾಗ ಏಕಾಏಕಿ ಹಳಿಗೆ ಶ್ಯಾರೊನ್ ಧುಮುಕಿದ್ದು, ಈ ವೇಳೆ ಮೆಟ್ರೋ ಟ್ರೈನ್ ಡಿಕ್ಕಿ ಹೊಡೆದಿದೆ.

ಅಬ್ಬಿಗೆರೆ ಬಳಿ ಐಟಿಐ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಂಪನಿಯವರೇ ರೂಂ ಸಹ ಮಾಡಿಕೊಟ್ಟಿದ್ದರು. ಇಂದು ಸಂಜೆ ಸ್ನೇಹಿತನ ಜೊತೆ ಬಂದು ಉದ್ದೇಶಪೂರ್ವಕವಾಗಿ ಹಳಿಗೆ ಧುಮುಕಿದ್ದಾನೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು, ಸಪ್ತಗಿರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಣ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ