ಭೀಕರ ಅಪಘಾತ: ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.
ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು. ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.
ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್; 4 ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಭದ್ರತಾ ಪಡೆಗಳು (Security Forces) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ (Indian Army) ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತರ ಪಡೆಗಳೊಂದಿಗೆ ಪೂಂಚ್‌ನ ಸಿಂಧರಾ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ನಿನ್ನೆ ರಾತ್ರಿ 11:30 ರ ಸುಮಾರಿಗೆ ಭದ್ರತಾ ಪಡೆಗಳು ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದರು. ನಂತರ ರಾತ್ರಿ ಸಮಯದಲ್ಲಿ ಕಣ್ಗಾವಲು ಉಪಕರಣಗಳೊಂದಿಗೆ ಡ್ರೋನ್‌ಗಳನ್ನು ನಿಯೋಜಿಸಲಾಯಿತು. ಇಂದು ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿಯೊಂದಿಗೆ ಎನ್‌ಕೌಂಟರ್ (Encounter) ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ ಗುರುತು ಪತ್ತೆ ಹಚ್ಚಲಾಗಿಲ್ಲ. ಅವರ ಗುರುತು ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ.