ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿಯಲ್ಲಿ ಭೀಕರ ಬಸ್ ಅಪಘಾತ ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು! ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ದೆಹಲಿಯಲ್ಲಿ ಭೀಕರ ಬಸ್ ಅಪಘಾತ ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು! ಇಲ್ಲಿದೆ ವಿಡಿಯೋ

ವೇಗವಾಗಿ ಬಂದ ಡಿಟಿಸಿ ಬಸ್ಸೊಂದು (DTC Bus) ಹಲವು ಕಾರುಗಳು ಮತ್ತು ಸ್ಕೂಟರ್‌ಗಳಿಗೆ ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿ ಗಾಯಗೊಂಡ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಶನಿವಾರ ಸಂಭವಿಸಿದೆ. ಅದೃಷ್ಟವಶಾತ್, ಸಾವು ಸಂಭವಿಸಿಲ್ಲ. ಆದರೆ, ಘಟನೆಯ ಭೀಕರ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು (CCTV Footage), ಬೆಚ್ಚಿ ಬೀಳಿಸುವಂತಿದೆ. ಡಿಟಿಸಿ ಬಸ್ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿಯಾಗಿರುವ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ದೆಹಲಿಯ ರೋಹಿಣಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೋದಲ್ಲಿ ಕಂಡುಬಂದಿರುವಂತೆ, ಬಸ್ ಮೊದಲಿಗೆ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಇ-ರಿಕ್ಷಾ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದು ಅವುಗಳನ್ನು ಎಳೆದುಕೊಂಡು ಹೋಗಿದೆ. ಅಷ್ಟೇ ಅಲ್ಲದೆ, ಪಾದಚಾರಿ ಮಾರ್ಗದ ಬಳಿ ನಿಲ್ಲಿಸಿದ ಹಲವಾರು ಸ್ಕೂಟರ್‌ಗಳಿಗೆ, ಸೈಕಲ್​ಗೆ ಡಿಕ್ಕಿ ಹೊಡೆದಿದೆ.

ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಿಯಂತ್ರಣ ತಪ್ಪಿದ ಡಿಟಿಸಿ ಬಸ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಸ್ ಏಕಾಏಕಿ ಒಟ್ಟಾರೆ ಚಲಿಸುತ್ತಿರುವದನ್ನು ಕಂಡು ದಿಗ್ಭ್ರಮೆಗೊಂಡ ಸ್ಥಳೀಯರು ದಿಕ್ಕಾಪಾಲಾಗಿ ಓಡಿದ್ದಾರೆ. ಬಸ್ ನಿಂತ ಬಳಿಕ ಅದು ಡಿಕ್ಕಿ ಹೊಡೆದವರನ್ನು ಪರಿಶೀಲಿಸಲು ಸ್ಥಳಕ್ಕೆ ಧಾವಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.ಅಪಘಾತದಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ