ಭೀಕರ ರಸ್ತೆ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು
ರಾಮನಗರ: ಕೆಎಸ್‌ಆರ್‌ಟಿಸಿ ಬಸ್ (KSRTC) ಮತ್ತು ಕ್ವಾಲಿಸ್(Qualis) ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನಕಪುರ (Kanakapura) ತಾಲೂಕಿನ ಕಮ್ಮಾಳೆ ಗೇಟ್ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಹೋಟೆಲ್ ನಡೆಸುತ್ತಿದ್ದ ಸ್ನೇಹಿತರು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಮಹದೇಶ್ವರನ ಬೆಟ್ಟಕ್ಕೆ (Mahadeshwara Hill) ಬಂದಿದ್ದಾರೆ. ಮಾದಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್‌ಗೆ ಡಿಕ್ಕಿಹೊಡೆದಿದೆ.
ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಗರಾಜು, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಕುಮಾರ್, ಗೋವಿಂದ, ಶಾಂತಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟಗಾಯಗಳಾಗಿವೆ. ಸಾತನೂರು ಪೊಲೀಸರು ಭೇಟಿ ನೀಡಿ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರತೆಗೆದಿದ್ದಾರೆ.
ಅಪಘಾತಕ್ಕೆ (Accident) ಅತೀವೇಗವೇ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕನಕಪುರ ಹಾಗೂ ಮಳವಳ್ಳಿ ಮುಖ್ಯರಸ್ತೆಯಲ್ಲಿ ನಿತ್ಯ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು ಪೊಲೀಸರು ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರಾಮನಗರ ಎಸ್‌ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಸಂಗ್ರಹಿಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪ್ರೀತಿಸಿ ಮದ್ವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಕುಟುಂಬದವರ ವಿರೋಧದ ನಡುವೆಯೂ ತನಗಿಂತ ಎರಡು ವರ್ಷ ಕಿರಿಯವನನ್ನ ಪ್ರೀತಿಸಿ ಮದುವೆಯಾಗಿದ್ದ (Marriage) ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.
ಶಿಡ್ಲಘಟ್ಟ ನಗರದ (Sidlaghatta City) ಮಯೂರ ವೃತ್ತದ ಬಳಿ ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ವಿವಾಹಿತೆ ನಾಗಮಣಿ (23) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.